ಯಡಿಯೂರಪ್ಪ ಆಪ್ತ ಸಂತೋಷ್‌ಗೆ ಜಾಮೀನು
Team Udayavani, Aug 6, 2017, 11:48 AM IST
ಬೆಂಗಳೂರು: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಮೇಲಿನ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಹಾಯಕ ಎನ್. ಆರ್.ಸಂತೋಷ್‌ಗೆ ಶನಿವಾರ ನಗರದ 62ನೇ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮುಂಜೂರು ಮಾಡಿದೆ.
ಸಂತೋಷ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮಾನ್ಯ ಮಾಡಿರುವ ನ್ಯಾಯಾಧೀಶರಾದ ಎಸ್.ಎ ಚಿಕ್ಕೋರ್ಡೆ, ಅರ್ಜಿದಾರ ಸಂತೋಷ್ ಮುಂದಿನ ಒಂದು ತಿಂಗಳೊಳಗೆ ಪ್ರಕರಣದ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು. ಸಾಕ್ಷ್ಯಾನಾಶಕ್ಕೆ ಯತ್ನಿಸಬಾರದು,ಆತ ವಾಸಿಸುವ ಸರಿಯಾದ ವಿಳಾಸ ಕೊಟ್ಟು ತನಿಖಾಧಿಕಾರಿ ಕರೆದಾಗ ವಿಚಾರಣೆಗೆ ಸಹಕರಿಸಬೇಕು, ಬೆಂಗಳೂರು ಬಿಟ್ಟು ತೆರಳಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.
ವಿನಯ್ ಮೇಲಿನ ಹಲ್ಲೆ ಮತ್ತು ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಆರೋಪಿಗಳಾದ ಪ್ರಶಾಂತ್ ಹಾಗೂ ರಾಜೇಂದ್ರ ಅರಸ್, ಇಡೀ ಪ್ರಕರಣದ ಸೂತ್ರಧಾರ ಎನ್.ಆರ್.ಸಂತೋಷ್ ಎಂದು ತನಿಖಾಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಂತೋಷ್‌ಗೆ ನೋಟೀಸ್ ಜಾರಿಗೊಳಿಸಿದ್ದರಿಂದ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.