ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ
Team Udayavani, Aug 7, 2017, 7:30 AM IST
ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶನದಂತೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಸಂಘದ ವತಿಯಿಂದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಯಿತು.
ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು, ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗೆ ಪ್ರಾಥಮಿಕ ಶಿಕ್ಷಣ ಮಂಡಳಿ ರಚಿಸಬೇಕು, ಕೇಂದ್ರದ 7ನೆಯ ವೇತನ ಆಯೋಗದ ಶಿಫಾರಸುಗಳನ್ನು ಎಲ್ಲ ರಾಜ್ಯಗಳಲ್ಲಿ ತತ್‌ಕ್ಷಣ ಜಾರಿಗೊಳಿಸಬೇಕು, ಎಲ್ಲ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ಆರಂಭಿಸಬೇಕು, ಸರಕಾರಿ ಶಾಲೆಗಳ ಸಶಕ್ತೀಕರಣಕ್ಕೆ ಕನಿಷ್ಠ ತರಗತಿಗೊಬ್ಬ ಶಿಕ್ಷಕರನ್ನು, ಶಿಕ್ಷಕ- ವಿದ್ಯಾರ್ಥಿ ಅನುಪಾತ 1:30, ಶಾಲೆಗೊಬ್ಬ ಮುಖ್ಯ ಶಿಕ್ಷಕರನ್ನು ನೇಮಿಸಬೇಕು ಎಂಬ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಜಿಲ್ಲಾಧಿಕಾರಿ, ಡಿಡಿಪಿಐ ಮೂಲಕ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬಿ.ಬಿ., ರಾಜ್ಯ ಉಪಾಧ್ಯಕ್ಷ ಶಶಿಧರ ಶೆಟ್ಟಿ, ಪದಾಧಿಕಾರಿಗಳಾದ ರಮಾನಂದ ಶೆಟ್ಟಿ, ಪ್ರೇಮಾ ಎಂ., ವೆರೊನಿಕಾ ಪಿಂಟೋ, ವಿಜಯಕುಮಾರ್, ಕೃಷ್ಣ ಮೊಲಿ, ಸತೀಶ ಶೆಟ್ಟಿ, ಉಮೇಶ ನಾಯಕ್, ದೇವದಾಸ ಪಾಟ್ಕರ್, ಐವನ್ ಸಂತೋಷ್, ಪ್ರಭಾಕರ ಶೆಟ್ಟಿ, ಸುರೇಶ ಶೆಟ್ಟಿ, ಜನಾರ್ದನ ಬಿಳಿರಾಯ, ಸುಂದರ ಎ., ಗಣೇಶ ಎ., ಸರಕಾರಿ ನೌಕರರ ಸಂಘದ ಪ್ರಶಾಂತ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.