ಅನುಭವದಿಂದ ದಕ್ಷತೆ ವೃದ್ಧಿ: ವೆಂಕಟೇಶ್ ನಾಯ್ಕ
Team Udayavani, Aug 7, 2017, 6:55 AM IST
ಉಡುಪಿ: ಯಾವುದೇ ಕೆಲಸದಲ್ಲಿ ಹೆಚ್ಚಿನ ಅನುಭವ ಗಳಿಸುವುದರಿಂದ ಕಾರ್ಯನಿರ್ವಹಣೆಯಲ್ಲಿ ದಕ್ಷತೆ ಹೆಚ್ಚಾಗಲಿದ್ದು ಹೆಚ್ಚಿನ ಜ್ಞಾನ ವೃದ್ದಿಸುತ್ತದೆ. ಈ ನಿಟ್ಟಿನಲ್ಲಿ ತರಬೇತಿಗಳು ಹೆಚ್ಚಿನ ಅನುಭವಗಳನ್ನು ನೀಡುತ್ತವೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ಟಿ. ತಿಳಿಸಿದ್ದಾರೆ.
ಅವರು ರವಿವಾರ ನ್ಯಾಯಾಲಯ ಸಂಕೀರ್ಣದದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯ, ವಕೀಲರ ಸಂಘದ ಆಶ್ರಯದಲ್ಲಿ ಆಯೋಜಿದ್ದ ಮೂಲಭೂತ ಕರ್ತವ್ಯಗಳು, ಸರ್ಕಾರಿ ನೌಕರರ ಜವಾಬ್ದಾರಿಗಳು, ದೈನಂದಿನ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸರಕಾರಿ ನೌಕರರು ಎದುರಿಸಬೇಕಾದ ಸಮಸ್ಯೆಗಳು ಹಾಗೂ ಪರಿಹಾರ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಹೆಚ್ಚಿನ ಆದ್ಯತೆ ನೀಡಿ
ಕಾಲಕಾಲಕ್ಕೆ ನೀಡುವ ತರಬೇತಿಗಳಿಂದ ನೌಕರರಲ್ಲಿ ಕಾರ್ಯಕ್ಷಮತೆ ಹೆಚ್ಚಲಿದ್ದು, ಹೊಸ ಹೊಸ ವಿಚಾರಗಳನ್ನು ತಿಳಿಯಲು ಸಾಧ್ಯವಿದೆ. ಹೊಸದಾಗಿ ನೇಮಕಗೊಂಡ ನೌಕರರಿಗೆ ಉತ್ತಮ ತರಬೇತಿ ದೊರೆಯಲಿದೆ. ಸರಕಾರಿ ನೌಕರರು ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಸ್ತಿನಿಂದ ಕರ್ತವ್ಯ ನಿರ್ವಹಿಸಬೇಕು. ಅಶಿಸ್ತಿನೊಂದಿಗೆ ಯಾವುದೇ ಸಂದರ್ಭ ರಾಜಿ ಮಾಡಿಕೊಳ್ಳಬಾರದು ಎಂದು ತಿಳಿಸಿದರು.
ಉಡುಪಿ ಜಿಲ್ಲೆ ಪ್ರಥಮ
ಜಿಲ್ಲೆಯಲ್ಲಿ ವಕೀಲರ ಸಂಘ ಮತ್ತು ನ್ಯಾಯಾಂಗ ಇಲಾಖೆ ನೌಕರರ ಉತ್ತಮ ಸಹಕಾರದಿಂದ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾಗುತ್ತಿದೆ. ಉಚ್ಚ ನ್ಯಾಯಾಲಯವು ಜಿಲ್ಲಾ ನ್ಯಾಯಾಲ ಯಗಳಿಗೆ ನಿಗದಿಗೊಳಿಸಿರುವ ಗುರಿ ಪ್ರಮಾಣ 10 ಆಗಿದ್ದು, ಉಡುಪಿಯಲ್ಲಿ 16 ಪ್ರಮಾಣದಲ್ಲಿ ಕಾರ್ಯ ಸಾಧನೆ ಯಾಗುತ್ತಿದೆ. ಜಿಲ್ಲೆ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಜಡ್ಜ್ಮೆಂಟ್ ಅಫ್ ಲೋಡಿಂಗ್ ಹಾಗೂ ಅನ್ ಡೀಡ್ ಕೇಸ್‌ನಲ್ಲಿಯೂ ಸಹ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 13 ಜನ ನ್ಯಾಯಾಧೀಶರಿದ್ದು, 20 ಮಂದಿ ನಿರ್ವಹಿಸುವುವಷ್ಟು ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ ಎಂದು ನ್ಯಾಯಾಧೀಶರು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್, ಹಿರಿಯ ಸಿವಿಲ್ ನ್ಯಾಯಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಲತಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಡಿ.ವಿ. ಹೆಗ್ಡೆ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ವಿಜಯಲಕ್ಷಿ¾à ಉಪಸ್ಥಿತರಿದ್ದರು. ಶಿರಸ್ತೆದಾರ್ ಶಿವಪ್ಪ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.