ರಸ್ತೆ ಗುಂಡಿಗಳಲ್ಲಿ ರಂಗೋಲಿ ಚಿತ್ತಾರ!

Team Udayavani, Aug 7, 2017, 11:25 AM IST

hub1.jpg

ಹುಬ್ಬಳ್ಳಿ: ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಮಹಾನಗರ ಪಾಲಿಕೆ ನಿರ್ಲಕ್ಷ್ಯ ತೋರುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ ಮುಖಂಡ ಡಾ| ಮಹೇಶ ನಾಲವಾಡ ನೇತೃತ್ವದಲ್ಲಿ ರವಿವಾರ ರಸ್ತೆ ಗುಂಡಿಗಳಲ್ಲಿ ರಂಗೋಲಿ ಹಾಕುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು.

ಇಲ್ಲಿನ ವಿದ್ಯಾನಗರ ಶಿರೂರ ಪಾರ್ಕ್‌ನ ಮುಖ್ಯ ರಸ್ತೆಯಿಂದ ತೋಳನಕೆರೆಯ ವರೆಗೂ ರಸ್ತೆ ಸಂಪೂರ್ಣ ಹಾಳಾಗಿದೆ. ಈ ಬಗ್ಗೆ ಶಾಸಕರು, ಸಂಸದರು, ಮಹಾಪೌರರು, ಪಾಲಿಕೆ ಸದಸ್ಯರು, ಪಾಲಿಕೆ ಆಯುಕ್ತರು ಸೇರಿದಂತೆ ಎಲ್ಲರಿಗೂ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

ರಸ್ತೆಯ ವಿವಿಧ ಗುಂಡಿಗಳಲ್ಲಿ ಮಹಿಳೆಯರು ರಂಗೋಲಿ ಬಿಡಿಸಿದರು. ಗುಂಡಿಯೊಂದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಅವರ ಚಿತ್ರ ಬಿಡಿಸಿ ಅದಕ್ಕೆ ಹೂ ಮಾಲೆ ಹಾಕಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ| ಮಹೇಶ ನಾಲವಾಡ, ನಗರದ ಬಹುತೇಕ ರಸ್ತೆಗಳು ಸಂಪೂರ್ಣ ಹಾಳಾಗಿವೆ.

ಇದಕ್ಕೆ ಸ್ಪಂದನೆ ನೀಡಬೇಕಾದ ಪಾಲಿಕೆ ಯಾವುದೇ ಕಾಮಗಾರಿ ಮಾಡದೆ ಉಡಾಫೆ ಉತ್ತರ ನೀಡುತ್ತಿದೆ. ಈ ಭಾಗದಲ್ಲಿ ಹೆಚ್ಚು ಕಾಲೇಜುಗಳಿದ್ದು ದಿನನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ. ಹಲವು ಅಪಘಾತಗಳಿಗೆ ಕಾರಣವಾಗುತ್ತಿದೆ. ಇಷ್ಟಾದರೂ ಪಾಲಿಕೆ ಈ ಬಗ್ಗೆ  ಕನಿಷ್ಠ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು. 

ಇದೇ ಸಂದರ್ಭದಲ್ಲಿ ಉತ್ತಮ ರಂಗೋಲಿ ಬಿಡಿಸಿದ ಶ್ವೇತಾ ಪ್ರಥಮ, ಬಸವರಾಜ ದ್ವಿತೀಯ, ಭಾರತಿ  ತೃತೀಯ ಬಹುಮಾನ ಪಡೆದರು. ಇನ್ನುಳಿದವರಿಗೆ ಸಮಾಧಾನಕರ ಬಹುಮಾನ ವಿತರಿಸಲಾಯಿತು. ಹೂವಪ್ಪ ದಾಯಗೋಡಿ, ಅನುರಾಧಾ ದಾಯಗೋಡಿ, ಪರಶುರಾಮ ಹಬೀಬ, ಮಂಜುನಾಥ ಕೊಪ್ಪದ, 

-ವೀರಭದ್ರಪ್ಪ ತೊಪ್ಪಲ, ನಮಾಜಿ, ಪ್ರವೀಣ ಶಲವಡಿ, ಸೋಮಲಿಂಗ ಎಲಿಗಾರ, ಶಂಕರ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್‌ನವರು ಪ್ರತಿಭಟನೆ ಮಾಡಿದ ರಸ್ತೆಯಲ್ಲಿಯೇ ಒಂದು ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದ್ದು, ಅದರ ಸ್ವಲ್ಪ ಮುಂದೆ ರಂಗೋಲಿ ಬಿಡಿಸಿ ಪ್ರತಿಭಟಿಸಲಾಯಿತು.

ಟಾಪ್ ನ್ಯೂಸ್

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.