ರಿಕ್ಷಾಕ್ಕೆ ಢಿಕ್ಕಿ ಹೊಡೆದ ಕಾರು ಓರ್ವ ಚಾಲಕ ಸಾವು, ಇಬ್ಬರಿಗೆ ಗಾಯ
Team Udayavani, Aug 8, 2017, 8:00 AM IST
ಮಂಗಳೂರು: ನಗರದ ಜ್ಯೋತಿ ವೃತ್ತದ ಆಟೋ ರಿಕ್ಷಾ ಪಾರ್ಕಿಂಗ್ ಬಳಿ ರವಿವಾರ ರಾತ್ರಿ ವೇಗವಾಗಿ ಬಂದ ಕಾರೊಂದು ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಪ್ರವೀಣ್ (25) ಸಾವನ್ನಪ್ಪಿದ್ದು, ಇನ್ನಿಬ್ಬರು ಚಾಲಕರಾದ ಅಶೋಕ್ ಮತ್ತು ಜಗದೀಶ್ ಗಾಯಗೊಂಡಿದ್ದಾರೆ.
ರಾತ್ರಿ 10.45 ರ ವೇಳೆಗೆ ಬಂಟ್ಸ್ ಹಾಸ್ಟೆಲ್ ಕಡೆಯಿಂದ ವೇಗವಾಗಿ ಬಂದ ಕಾರು ಜ್ಯೋತಿ ಜಂಕ್ಷನ್ ದಾಟಿ ಬಲ್ಮಠ ನ್ಯೂ ರೋಡ್ನಲ್ಲಿ ಫಳ್ನೀರ್ ಕಡೆಗೆ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಒಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತು. ಢಿಕ್ಕಿಯ ರಭಸಕ್ಕೆ ರಿಕ್ಷಾ ಪಕ್ಕದಲ್ಲಿ ನಿಂತಿದ್ದ ಆಟೋ ಚಾಲಕರಾದ ಪ್ರವೀಣ್, ಜಗದೀಶ್ ಮತ್ತು ಅಶೋಕ್ ಅವರು ತೀವ್ರ ಸ್ವರೂಪದ ಗಾಯಗೊಂಡರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರವೀಣ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಅಶೋಕ್ ಮತ್ತು ಜಗದೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರವೀಣ್ ಮೂಲತಃ ಮಡಿಕೇರಿ ನಿವಾಸಿಯಾಗಿದ್ದು, ಪ್ರಸ್ತುತ ಕುಂಟಿಕಾನ ದಲ್ಲಿ ವಾಸ್ತವ್ಯವಿದ್ದು, ಮಂಗಳೂರು ನಗರದಲ್ಲಿ ಆಟೋ ಚಾಲಕರಾಗಿದ್ದರು.
ಕಾರು ಚಾಲಕನ ಬಂಧನ
ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಅನೀಶ್ ಜಾನ್ (35) ನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಕೇರಳ ಮೂಲದವನಾಗಿದ್ದು, ಪ್ರಸ್ತುತ ಮಂಗಳೂರಿನಲ್ಲಿ ವಾಸ್ತವ್ಯ ಹೊಂದಿದ್ದಾನೆ. ಆತ ಮದ್ಯಸೇವಿಸಿ ಕಾರು ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತು ಎನ್ನಲಾಗಿದೆ. ಇದಕ್ಕೆ ಪೂರಕ ಎಂಬಂತೆ ಕಾರಿನಲ್ಲಿ ಬಿಯರ್ ಬಾಟಲಿಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಟ್ರಾಫಿಕ್ ಪೂರ್ವ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.