ಐ.ಟಿ. ಕಚೇರಿ ದಾಳಿ ಆರೋಪಿಗಳ ಬಂಧನ:ಪೊಲೀಸ್ ಆಯುಕ್ತರಿಗೆ ಬಿಜೆಪಿ ಮನವಿ
Team Udayavani, Aug 8, 2017, 7:35 AM IST
ಮಹಾನಗರ: ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ನಡೆದ ಐ.ಟಿ. ದಾಳಿಯನ್ನು ಖಂಡಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಿ ಸರಕಾರಿ ವಸ್ತುಗಳನ್ನು ಹಾನಿ ಮಾಡಿರುವುದರ ವಿರುದ್ಧ ಕ್ರಮ ಜರಗಿಸಬೇಕು ಎಂದು ಜಿಲ್ಲಾ ಬಿಜೆಪಿ ವತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ ನೀಡಲಾಯಿತು.
ಘಟನೆಯ ಸಂದರ್ಭದ ಛಾಯಾಚಿತ್ರಗಳು ಪೊಲೀಸ್ ಮತ್ತು ಮಾಧ್ಯಮಗಳಲ್ಲಿ ಲಭ್ಯವಿದ್ದು ಆರೋಪಿಗಳನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಆರೋಪಿ ಗಳು ನಗರದೆಲ್ಲೆಡೆ ರಾಜಾರೋಷವಾಗಿ ಓಡಾಡಿಕೊಂಡಿದ್ದರೂ ಪೊಲೀಸರಿಗೆ ಸಿಗದಿರುವುದು ವಿಪರ್ಯಾಸ. ಆದ್ದರಿಂದ ಪೋಲಿಸ್ ಇಲಾಖೆ ಈ ದೂರನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ಆರೋಪಿಗಳನ್ನು ತತ್ಕ್ಷಣ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ ಮತ್ತು ಮಂ.ನಗರ.ದಕ್ಷಿಣ ಮಂಡಲದ ಅಧ್ಯಕ್ಷ ವೇದವ್ಯಾಸ್ ಕಾಮತ್ ಮೊದಲಾದವರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿತಿನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರ್, ಜಿಲ್ಲಾ ವಕ್ತಾರ ಜಿತೇಂದ್ರ ಕೊಟ್ಟಾರಿ, ಮಂಡಲದ ಉಪಾಧ್ಯಕ್ಷ ಶ್ರೀನಿವಾಸ್ ಶೇಟ್, ಹಿಂದುಳಿದ ವರ್ಗದ ಮೋರ್ಚಾದ ಸದಾನಂದ ನಾವುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.