ಕಾವ್ಯಾ ಸಾವು ಪ್ರಕರಣ ತನಿಖೆ ಆಗ್ರಹಿಸಿ ನಾಳೆ ಪ್ರತಿಭಟನೆ
Team Udayavani, Aug 8, 2017, 7:40 AM IST
ಮಂಗಳೂರು: ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ನಿಗೂಢ ಸಾವು ಪ್ರಕರಣದ ಪಾರದರ್ಶಕ ತನಿಖೆ ನಡೆಸಬೇಕು ಹಾಗೂ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಸ್ಟಿಸ್ ಫಾರ್ ಕಾವ್ಯಾ ಹೋರಾಟ ಸಮಿತಿ ವತಿಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆ. 9ರಂದು ಬೆಳಗ್ಗೆ 10 ಗಂಟೆಗೆ ಪ್ರತಿಭಟನ ಸಭೆ ಹಮ್ಮಿಕೊಳ್ಳಲಾಗಿದೆ.
ನ್ಯಾಯವಾದಿ ದಿನಕರ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಕಾವ್ಯಾ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನಗಳು ನಡೆಯುತ್ತಿವೆ. ಅದಕ್ಕೆ ಅವಕಾಶ ನೀಡದೆ, ಪಾರದರ್ಶಕ ತನಿಖೆ ನಡೆಸಿ ಪ್ರಕರಣದ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ಪ್ರಸ್ತುತ ತನಿಖೆ ಬಗ್ಗೆ ವಿಶ್ವಾಸವಿಲ್ಲ
ಪ್ರಸ್ತುತ ಎಸಿಪಿ ರಾಜೇಂದ್ರ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ತನಿಖೆಯ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿಲ್ಲ. ಇದರಿಂದ ತನಿಖೆಯ ಬಗ್ಗೆ ವಿಶ್ವಾಸ ಇಲ್ಲದಂತಾಗಿದೆ ಎಂದವರು ತಿಳಿಸಿದರು.
ಹೆತ್ತವರೇ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದರೂ ತನಿಖೆಯ ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ಕಾವ್ಯಾ ಸಾವಿನ ಬಗ್ಗೆ ಹಲವಾರು ಅನುಮಾನಗಳಿರುವುದರಿಂದ ಸೂಕ್ತ ತನಿಖೆ ನಡೆಯಬೇಕು ಎಂದರು.
ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ತನಿಖೆಯನ್ನು ರಾಜ್ಯದ ನಿಷ್ಠಾವಂತ ಪೊಲೀಸ್ ಅಧಿಕಾರಿಯ ನೇತೃತ್ವದ ವಿಶೇಷ ತನಿಖಾ ತಂಡದ ಮೂಲಕ ನಡೆಸಬೇಕೆಂದು ಈಗಾಗಲೇ ಸರಕಾರದ ಗಮನವನ್ನು ಸೆಳೆಯಲಾಗಿದೆ ಎಂದು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿ ಒಬ್ಬರ ಮೇಲೆ ಕೊಲೆ ಆರೋಪ ಹಾಗೂ ಇತರ ನಾಲ್ವರ ಮೇಲೆ ಸಾಕ್ಷ್ಯ ನಾಶದ ದೂರನ್ನು ನೀಡಲಾಗಿದೆ. ಅಶೋಕ್ ಎಂಬವರಿಂದ ಕಾವ್ಯಾ ಹೆತ್ತವರನ್ನು ಬಾಯಿ ಮುಚ್ಚಿಸುವ ಯತ್ನವೂ ನಡೆದಿದೆ. ಕಾವ್ಯಾ ಮೃತದೇಹದ ಮರಣೋತ್ತರ ಪರೀಕ್ಷೆ ಸಂದರ್ಭ ವೀಡಿಯೋ ರೆಕಾರ್ಡಿಂಗ್ ಕೂಡ ಮಾಡಲಾಗಿಲ್ಲ. ಆದ್ದರಿಂದ ಈ ಇಬ್ಬರು ವ್ಯಕ್ತಿಗಳ ಜತೆ ದೂರಿನಲ್ಲಿ ತಿಳಿಸಿರುವ ನಾಲ್ಕು ಮಂದಿಯ ಬಗ್ಗೆಯೂ ಕಸ್ಟಡಿ ತನಿಖೆ ನಡೆಸಬೇಕು ಎಂದು ರಾಬರ್ಟ್ ರೊಸಾರಿಯೊ ಆಗ್ರಹಿಸಿದರು.
ಪ್ರಕರಣಕ್ಕೆ ಸಂಬಂಧಿಸಿ ಆಳ್ವಾಸ್ ಸಂಸ್ಥೆಯಿಂದ ಕರ್ತವ್ಯ ಲೋಪವಾಗಿದೆ. ಪ್ರಕರಣದ ಸಮಗ್ರ ತನಿಖೆಯಿಂದ ಮಾತ್ರವೇ ಸತ್ಯಾಂಶ ಹೊರಬರಲು ಸಾಧ್ಯ ಎಂದು ನ್ಯಾಯವಾದಿ ಯಶವಂತ ಮರೋಳಿ ತಿಳಿಸಿದರು.
ಕಾವ್ಯಾ ತಂದೆ ಲೋಕೇಶ್, ಸಮಿತಿಯ ಮುಖಂಡರಾದ ರಘುವೀರ್ ಸೂಟರ್‌ಪೇಟೆ, ರಘು ಎಕ್ಕಾರು, ಅನಿಲ್‌ದಾಸ್, ದೀಪಕ್ ಕೋಟ್ಯಾನ್, ಯಶವಂತ ಪೂಜಾರಿ, ಪ್ರಜ್ವಲ್ ಪೂಜಾರಿ, ದೀಪಕ್, ನಿತಿನ್ ಕುತ್ತಾರ್, ಸಂತೋಷ್ ಕುಮಾರ್ ಬಜಾಲ್, ರೋಶನ್ ಮೊದಲಾದವರು ಉಪಸ್ಥಿತರಿದ್ದರು.
ಮಗಳಿಗೆ ನ್ಯಾಯ ಕೊಡಿಸಿ
“ನನ್ನ ಮಗಳಿಗೆ ಆದ ಅನ್ಯಾಯ ಯಾವ ಮಕ್ಕಳಿಗೂ ಆಗಬಾರದು. ಅವಳನ್ನು ಕೊಲೆ ಮಾಡಲಾಗಿದೆ. ಇದೀಗ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ನನ್ನ ಮಗಳಿಗೆ ನ್ಯಾಯ ಕೊಡಿಸಿ’ ಎಂದು ಕಾವ್ಯಾ ತಾಯಿ ಬೇಬಿ ಪೂಜಾರಿ ಪತ್ರಕರ್ತರ ಮುಂದೆ ಕಣ್ಣೀರಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.