ಸ್ಟಾನ್‌ಫೋರ್ಡ್: ಕೇಯ್ಸ ಚಾಂಪಿಯನ್
Team Udayavani, Aug 8, 2017, 11:50 AM IST
ಸ್ಟಾನ್‌ಫೋರ್ಡ್: ಸ್ಟಾನ್‌ಫೋರ್ಡ್ ಕ್ಲಾಸಿಕ್ ಟೆನಿಸ್ ಪಂದ್ಯಾವಳಿಯ ಪ್ರಶಸ್ತಿ ಅಮೆರಿಕದ ಮ್ಯಾಡಿಸನ್ ಕೇಯ್ಸ ಪಾಲಾಗಿದೆ. ರವಿವಾರ ರಾತ್ರಿಯ ಫೈನಲ್‌ನಲ್ಲಿ ಆವರು ತಮ್ಮದೇ ದೇಶದ ಕೊಕೊ ವಾಂಡೆವೇಗ್ ವಿರುದ್ಧ 7-6 (4), 6-4 ಅಂತರದ ಜಯ ಸಾಧಿಸಿದರು.
ಇದು ಈ ವರ್ಷ ಕೇಯ್ಸಗೆ ಒಲಿದ ಮೊದಲ ಟೆನಿಸ್ ಪ್ರಶಸ್ತಿ. ಎಡ ಮಣಿಗಂಟಿನ ಶಸ್ತ್ರಚಿಕಿತ್ಸೆಯಿಂದ ಪ್ರಸಕ್ತ ಟೆನಿಸ್ ಋತುವಿನ ಮೊದ ಲೆರಡು ತಿಂಗಳು ವಿಶ್ರಾಂತಿಯಲ್ಲಿದ್ದ ಕೇಯ್ಸ ಈ ಕೂಟದಲ್ಲಿ ಅಮೋಘ ಪ್ರದರ್ಶನ ನೀಡಿದರು. ಸೆಮಿಫೈನಲ್‌ನಲ್ಲಿ ವಿಂಬಲ್ಡನ್ ಚಾಂಪಿಯನ್ ಗಾರ್ಬಿನ್ ಮುಗುರುಜಾ ಅವರನ್ನು ಹೊರಗಟ್ಟಿದ್ದು ಈ ಅಮೆರಿಕನ್ನಳ ಮಹತ್ಸಾಧನೆಯಾಗಿದೆ.
ಕೊಕೊ ವಾಂಡೆವೇಗ್ ಆಸ್ಟ್ರೇಲಿ ಯನ್ ಓಪನ್‌ನಲ್ಲಿ ಸೆಮಿಫೈನಲ್ ತನಕ, ವಿಂಬಲ್ಡನ್‌ನಲ್ಲಿ ಕ್ವಾರ್ಟರ್ ಫೈನಲ್ ತನಕ ಅಭಿಯಾನ ಬೆಳೆಸಿ ದ್ದರು. ಸ್ಟಾನ್‌ಫೋರ್ಡ್‌ನಲ್ಲಿ ಜಯಿಸಿದ್ದೇ ಆದಲ್ಲಿ ವಾಂಡೆವೇಗ್ ಕೂಡ ಈ ವರ್ಷದ ಮೊದಲ ಟೆನಿಸ್ ಪ್ರಶಸ್ತಿಯನ್ನೆತ್ತಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು.
ವರ್ಷದ ಕೊನೆಯ ಗ್ರ್ಯಾನ್‌ಸ್ಲಾಮ್ ಆಗಿರುವ ಯುಎಸ್ ಓಪನ್ ಟೆನಿಸ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತವರಿನ ಈ ಆಟಗಾರ್ತಿಯರ ಸಾಧನೆ ಅಮೆರಿಕದ ಟೆನಿಸ್ ಅಭಿಮಾನಿ ಗಳಿಗೆ ಸಂತಸ ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.