ಐಟಿ ದಾಳಿ ಉದ್ದೇಶಪೂರ್ವಕ: ರಾಮಲಿಂಗಾರೆಡ್ಡಿ
Team Udayavani, Aug 8, 2017, 11:55 AM IST
ಬೆಂಗಳೂರು: ಗುಜರಾತ್ ಶಾಸಕರ ಯೋಗಕ್ಷೇಮ ನೋಡಿಕೊಂಡ ಕಾರಣಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ ದಾಳಿ ನಡೆಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
ಸಂಪುಟ ಸಭೆಗೂ ಮುನ್ನ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ಯಾರ ಮೇಲಾದರೂ ದಾಳಿ ಮಾಡುವ ಅಧಿಕಾರ ಹೊಂದಿದೆ. ಡಿ.ಕೆ. ಶಿವಕುಮಾರ್ ತಪ್ಪು ಮಾಡಿದ್ದರೆ, ಅವರ ಮೇಲೆಯೂ ತನಿಖೆ ನಡೆಯಲಿ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭಷ್ಟಾಚಾರಗಳ ಬಗ್ಗೆಯೂ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಲಿ. ಐಟಿ ಹಾಗೂ ಸಿಬಿಐ, ಕೇಂದ್ರ ಸರ್ಕಾರದ ಕೈಗೊಂಬೆಗಳಂತೆ ವರ್ತಿಸುತ್ತಿವೆ. ಈ ಐಟಿ ದಾಳಿ ಉದ್ದೇಶಪೂರ್ವಕವಾಗಿ ನಡೆಸಲಾಗಿದೆ ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದರು.
ಸಮಯ ಬಂದಾಗ ಮಾತಾಡುವೆ: ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಸಾಕಷ್ಟು ಹಣ ಇರುವ ದಾಖಲೆ ಸಿಕ್ಕಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿರಾಕರಿಸಿದ್ದಾರೆ. “ನನ್ನ ವಿರುದ್ಧ ಏನೇನು ಸುದ್ದಿ ಹರಿದಾಡುತ್ತವೆಯೋ ಹರಿದಾಡಲಿ. ನಾನು ಸಮಯ ಬಂದಾಗ ಉತ್ತರಿಸುತ್ತೇನೆ. ಈಗ ಮಾತನಾಡುವುದು ಸೂಕ್ತವಲ್ಲ. ಹೇಳೊದಕ್ಕೂ ಕೇಳ್ಳೋದಕ್ಕೂ ಇದು ಸಮಯವಲ್ಲ’ ಎಂದು ಹೇಳಿದರು.
ಡಿಕೆಶಿ ಸಂಕಷ್ಟ ನಿವಾರಣೆಗೆ ಹೋಮ
ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಎದುರಾಗಿರುವ ಸಂಕಷ್ಟಗಳನ್ನು ದೂರವಾಗಿಸುವಂತೆ ಕೋರಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಸೋಮವಾರ ಮಹಾಲಕ್ಷ್ಮೀ ಬಡಾವಣೆಯ ಕರುಮಾರಿಯಮ್ಮ ದೇವಾಲಯದಲ್ಲಿ ಮೇಯರ್ ಜಿ.ಪದ್ಮಾವತಿ ನೇತೃತ್ವದಲ್ಲಿ ವಿಶೇಷ ಪೂಜೆ, ದುರ್ಗಾ ಹೋಮ, ಗಣಪತಿ ಹೋಮ, ನವಗ್ರಹ ಹೋಮ ನಡೆಸಲಾಯಿತು. ಪಕ್ಷದ ಮುಖಂಡರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್, ಡಿ.ಕೆ.ಶಿವಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ಸಂಕಷ್ಟದಿಂದ ಹೊರಬರಲಿ, ಅವರಿಗೆ ಎದುರಾಗಿರುವ ಕಷ್ಟಗಳು ದೂರವಾಗಲಿ ಎಂದು ಪೂಜೆ ಮಾಡಿಸಿದ್ದೇವೆ ಎಂದರು. ಹುಣ್ಣಿಮೆಯಂದು ವಿಶೇಷವಾಗಿ ಚಂಡಿಕಾ ಹೋಮ ಪೂಜೆ ಮಾಡಿಸಿದ್ದು, ಹಲವು ವರ್ಷಗಳಿಂದ ಶಿವಕುಮಾರ್ ಅವರು ಈ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.