ಪಿಂಪ್ರಿ-ಚಿಂಚ್ವಾಡ್ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ, ಸ್ನೇಹಸಮ್ಮಿಲನ
Team Udayavani, Aug 8, 2017, 3:04 PM IST
ಪುಣೆ: ಪಿಂಪ್ರಿ -ಚಿಂಚ್ವಾಡ್ ಬಿಲ್ಲವ ಸಂಘ ಮತ್ತು ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ಸ್ನೇಹ ಸಮ್ಮಿಲನವು ಸಮಾರಂಭವು ಜು. 30ರಂದು ಪಿಂಪ್ರಿಯ ಆಚಾರ್ಯ ಆತ್ರೆ ಸಭಾಭವನದಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷ ಶ್ರೀಧರ ಜಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೋನವಾಲದ ಕೌನ್ಸಿಲರ್ ಶ್ರೀಧರ ಪೂಜಾರಿ ಹಾಗೂ ಗೌರವ ಅತಿಥಿಗಳಾಗಿ ತುಳು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆಯಿತ್ತರು.
ಮುಖ್ಯ ಅತಿಥಿ ಶ್ರೀಧರ ಪೂಜಾರಿ ಮಾತನಾಡಿ, ಪಿಂಪ್ರಿ ಚಿಂಚಾÌಡ್‌ನಲ್ಲಿನ ಈ ಸಮಿತಿ ಸಮಾಜ ಬಾಂಧವರನ್ನು ಒಗ್ಗೂಡಿಸಿಕೊಂಡು ಉತ್ತಮ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ. ಸಮಾಜದ ಪ್ರತಿಯೋರ್ವರನ್ನೂ ಸಂಘದೊಂದಿಗೆ ಬೆಸೆಯುವ ಕಾರ್ಯವನ್ನು ಮಾಡಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕಾರ್ಯ ಆಗಬೇಕಾಗಿದೆ ಎಂದರು.
ಗೌರವ ಅತಿಥಿಯಾಗಿ ತುಳು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರು ಮಾತನಾಡಿ, ನಮ್ಮ ಸಮಾಜದಲ್ಲಿನ ಪರಂಪರಾಗತ ಕಟ್ಟುಕಟ್ಟಳೆಗೆ ನಾವು ಸ್ಪಂದಿಸಿ ಗೌರವಿಸಬೇಕಾಗಿದೆ. ಪಿಂಪ್ರಿ-ಚಿಂಚಾÌಡ್‌ನಲ್ಲಿರುವ ಸಮಾಜ ಬಾಂಧವರ ಈ ಸಮಿತಿ ಸಮಾಜ ಬಾಂಧವರ ಹಿತ
ಚಿಂತನೆಗಾಗಿ ಭವಿಷ್ಯದಲ್ಲಿ ಉತ್ತಮ ಕಾರ್ಯಗಳನ್ನು ಮಾಡುವಂತಾಗಲಿ ಎಂದರು.
ಸಂಘದ ಅಧ್ಯಕ್ಷ ಶ್ರೀಧರ ಜಿ. ಪೂಜಾರಿ ಅವರು ಮಾತನಾಡಿ, ಸಮಿತಿಯ ಅಭಿವೃದ್ಧಿಯ ವಿವರಗಳನ್ನು ನೀಡುತ್ತಾ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಮಿತಿಯ ಕಾರ್ಯವೈಖರಿಯನ್ನು ವಿವರಿಸಿದರು. ಗತ ವರ್ಷ ದಲ್ಲಿ ಸಮಿತಿಯು ಹಮ್ಮಿಕೊಂಡ ಕಾರ್ಯಚಟುವಟಿಕೆ ಗಳ ವಿವರಗಳನ್ನು ಸಮಿತಿಯ ಗೌರವ ಕಾರ್ಯದರ್ಶಿ ಪ್ರವೀಣ್ ಕೆ. ಅಂಚನ್ ಸಮಿತಿಯ ಮುಂದಿಡುತ್ತಾ ನಮ್ಮ ಸಮಿತಿಯ ಪ್ರತಿಯೊಂದು ಕಾರ್ಯಚಟುವಟಿಕೆಗಳು ಬ್ರಹ್ಮಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಜ್ಞಾನೋದಯ ಹಾಗೂ ಸಂಘಟನೆಯಿಂದ ಶಕ್ತಿ ಎನ್ನುವ ಮೂಲ ಮಂತ್ರದ ಆಧಾರದಲ್ಲಿಯೇ ನಡೆಯುತ್ತದೆ ಎಂದರು.
ಗೌರವ ಕೋಶಾಧಿಕಾರಿ ವಿಜಯ ಪೂಜಾರಿ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅನುಮೋದನೆ ಪಡೆದುಕೊಂಡರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕುಸುಮಾ ಆರ್. ಸಾಲ್ಯಾನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸಮ್ಮಾನಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಧನಸಹಾಯ ನೀಡಲಾಯಿತು. ಸಂಸ್ಥೆಯ ಕಾರ್ಯಕ್ರಮಗಳಿಗೆ ನೆರವು ನೀಡಿ ಸಹಕರಿಸಿದ ದಾನಿಗಳನ್ನು ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು. ಮಮತಾ ಪಿ. ಅಂಚನ್ ಸ್ವಾಗತಿಸಿದರು. ನವೀನ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಮನೋರಂಜನೆಯ ಅಂಗವಾಗಿ ಮಕ್ಕಳು, ಮಹಿಳೆಯರು ಹಾಗೂ ಪುರುಷರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.