ರಾಮಮಂದಿರ ಪರ ಶಿಯಾ ವಕ್ಫ್ ಮಂಡಳಿ ಒಲವು; ಸುಪ್ರೀಂಗೆ ಅಫಿಡವಿಟ್
Team Udayavani, Aug 8, 2017, 4:53 PM IST
ನವದೆಹಲಿ: ಮಹತ್ವದ ಬೆಳವಣಿಗೆ ಎಂಬಂತೆ ವಿವಾದಿತ ರಾಮಜನ್ಮಭೂಮಿ ಸ್ಥಳದಿಂದ ದೂರದಲ್ಲಿ ಅಥವಾ ಮುಸ್ಲಿಮ್ ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಬಾಬ್ರಿ ಮಸೀದಿಯನ್ನು ನಿರ್ಮಿಸಲಾಗುವುದು ಎಂದು ಉತ್ತರಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿ ಮಂಗಳವಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದೆ.
ರಾಮ ಜನ್ಮಭೂಮಿ ವಿವಾದ ಪ್ರಕರಣ ಇತ್ಯರ್ಥಕ್ಕೆ ತ್ರಿಸದಸ್ಯ ನ್ಯಾಯಪೀಠವನ್ನು ಸುಪ್ರೀಂ ಕೋರ್ಟ್ ಸೋಮವಾರವಷ್ಟೇ ರಚನೆ ಮಾಡಿದ ಬೆನ್ನಲ್ಲೇ ಶಿಯಾ ವಕ್ಫ್ ಮಂಡಳಿ ಈ ಅಫಿಟವಿತ್ ಸಲ್ಲಿಸಿದೆ.
ಎಎನ್ ಐ ವರದಿ ಪ್ರಕಾರ, ಅಯೋಧ್ಯೆಯಲ್ಲಿರುವ ಶ್ರೀರಾಮನ ಜನ್ಮಸ್ಥಳದಿಂದ ದೂರದಲ್ಲಿ ಮುಸ್ಲಿಮ್ ಬಾಹುಳ್ಯ ಇರುವ ಪ್ರದೇಶದಲ್ಲಿ ಮಸೀದಿಯನ್ನು ನಿರ್ಮಿಸಲಾಗುವುದು ಎಂದು ಮಂಡಳಿ ಅಫಿಡವಿಟ್ ನಲ್ಲಿ ತಿಳಿಸಿರುವುದಾಗಿ ವರದಿ ಮಾಡಿದೆ.
ಅಲ್ಲದೇ ಬಾಬ್ರಿ ಮಸೀದಿ ಶಿಯಾ ವಕ್ಫ್ ಆಸ್ತಿಯಾಗಿದೆ. ಪರಸ್ಪರ ಸೌಹಾರ್ದತಯುತವಾಗಿ ಸಂಧಾನದ ಮೂಲಕವೇ ವಿವಾದವನ್ನು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಹಾಗಾಗಿ ವಿವಾದವನ್ನು ಹೊಂದಾಣಿಕೆ ಮೂಲಕ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲು ಸುಪ್ರೀಂ ಪೀಠದಲ್ಲಿ ಮಂಡಳಿ ಕಾಲಾವಕಾಶವನ್ನು ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.