“ಹಣದಾಸೆ, ಮಾದಕ ಜಾಲ-ಜೀವನ ಹಾಳು’
Team Udayavani, Aug 9, 2017, 6:45 AM IST
ಉಡುಪಿ: ಹಣದಾಸೆ ಮತ್ತು ಮಾದಕ ವಸ್ತುಗಳು ನಮ್ಮ ಜೀವನವನ್ನು ಹಾಳು ಮಾಡುತ್ತವೆ. ಸ್ವನಿಯಂತ್ರಣ ಮತ್ತು ಕಠಿನ ಪರಿಶ್ರಮದಿಂದ ಜೀವಮಾನವಿಡೀ ಸಂತೋಷವಾಗಿರಬಹುದು. ಮೊದಲು ನಾವು ನಮ್ಮನ್ನು ಪ್ರೀತಿಸಬೇಕು. ನಮಗೆ ಅನುಕೂಲವಾಗಲೆಂದೇ ಕಾನೂನುಗಳನ್ನು ಜಾರಿಗೆ ತರಲಾಗಿದೆ.ಅವುಗಳನ್ನು ಪಾಲಿಸುವುದು ನಮ್ಮ ಕರ್ತವ್ಯ ಎಂದು ಉಡುಪಿಯ ನ್ಯಾಯವಾದಿ ಅಮ್ಜದ್ ಹೆಜಮಾಡಿ ಅವರು ಹೇಳಿದರು.
ಅವರು ಪಟ್ಲ ಯು.ಎಸ್. ನಾಯಕ್ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳು ಸಂಸ್ಕಾರವಂತರಾಗಬೇಕು. ನಮ್ಮ ವ್ಯಕ್ತಿತ್ವದ ಬೆಳವಣಿಗೆ ತಾಯಿಯ ಗರ್ಭದಲ್ಲಿರುವಾಗಲೇ ಆರಂಭವಾಗುತ್ತದೆ. ತಾಯಿಗಿಂತ ಶ್ರೇಷ್ಠವಾದುದು ಯಾವುದೂ ಇಲ್ಲ. ತಾಯಿ‰, ತಂದೆ‰, ಗುರುಗಳು ದೇವರಿಗೆ ಸಮಾನ. ಅವರನ್ನು ಮತ್ತು ಹಿರಿಯರನ್ನು ಗೌರವಿಸಬೇಕು ಎಂದರು.
ವಿದ್ಯಾ ಸಂಸ್ಥೆ ಯ ಕಾರ್ಯದರ್ಶಿ ಅಣ್ಣಯ್ಯ ನಾಯಕ್, ಉದ್ಯಮಿ ಗುರುದಾಸ್ ಭಂಡಾರಿ, ಮುಖ್ಯ ಶಿಕ್ಷಕ ಶ್ರೀಕಾಂತ ಪ್ರಭು ಉಪಸ್ಥಿತರಿದ್ದರು. ಎಚ್.ಎನ್. ನಟರಾಜ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸ್ವದೇಶ್ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.