ತುಮಕೂರು ನಾಲೆಗಳಿಗೆ ನೀರು ಹರಿಸಲು ಗಡುವು


Team Udayavani, Aug 9, 2017, 5:06 PM IST

22-44.jpg

ಚಿಕ್ಕನಾಯಕನಹಳ್ಳಿ: ಸರ್ಕಾರ ಹೇಮಾವತಿ ನಾಲೆಯಿಂದ ಬಲದಂಡೆ ನಾಲೆಗೆ ನೀರು ಹರಿಸಿದಂತೆಯೇ ತುಮಕೂರು ನಾಲೆಗಳಿಗೂ ಹರಿಸುವಂತೆ ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಆಗ್ರಹಿಸಿದ್ದಾರೆ.

ಎಲ್ಲೆ ತಾಲೂಕುಗಳಿಗೂ ನೀರು ಹರಿಸಿ: ಪಟ್ಟಣದ ನವೋದಯ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹೇಮಾವತಿ ಅಣೆಕಟ್ಟೆಯಲ್ಲಿ 12 ರಿಂದ 13 ಟಿಎಂಸಿ ನೀರು ಶೇಖರಣೆಯಾಗಿದ್ದು,  ಜಿಲ್ಲಾ ಉಸ್ತುವಾರಿ ಸಚಿವರು 16 ಟಿಎಂಸಿ ನೀರು ಶೇಖರಣೆಯಾದ ನಂತರ ನೀರು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ. ತುಮಕೂರಿನ ಬುಗುಡನಹಳ್ಳಿ ಕೆರೆಗೆ ನೀರು ಹರಿಸುವ ಸಂದರ್ಭದಲ್ಲಿ ಆದ್ಯತೆ ಮೇಲೆ ಚಿಕ್ಕನಾಯಕನಹಳ್ಳಿ ಕೆರೆ ಸೇರಿದಂತೆ ತುರುವೇಕೆರೆ, ಗುಬ್ಬಿ, ಕೊರಟಗೆರೆ, ಕುಣಿಗಲ್‌ ಕೆರೆಗಳಿಗೂ ನೀರನ್ನು ಹರಿಸುವಂತೆ ಒತ್ತಾಯಿಸಿದರು.

19 ರೊಳಗೆ ನೀರು ಹರಿಸಿ: ಈಗಾಗಲೇ ಹೇಮಾವತಿ ನಾಲೆಯಿಂದ ಕುಡಿಯುವ ನೀರು ಬಿಡುವಂತೆ ಜಿಲ್ಲಾ ಮಟ್ಟದಲ್ಲಿ ಬಿಜೆಪಿ ವತಿಯಿಂದ ಹೋರಾಟ ಮಾಡಿದ್ದೇವೆ. ಆ.17 ರವರೆಗೆ ಹೇಮಾವತಿ ನಾಲೆಯಿಂದ ನೀರು ಬಿಡುಗಡೆ ಮಾಡಲು ಕಾದು ನೋಡುತ್ತೇವೆ. 19 ನೇ ತಾರೀಖೀನ ಒಳಗೆ ನೀರು ಬಿಡದೇ ಹೋದರೆ ಜಿಲ್ಲಾ ಮಟ್ಟದಲ್ಲಿ ಚರ್ಚೆ ನಡೆಸಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಿಲ್ಲೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ಭೇಟಿಗೆ ಮುಂಚೆಯೇ ನೀರು ಹರಿಸುವಂತೆ ಅವರು ಒತ್ತಾಯಿಸಿದರು.

ತಹಶೀಲ್ದಾರ್‌ಗೆ ಕಂದಾಯ ಇಲಾಖೆ ಬಗ್ಗೆ ಅರಿವಿಲ್ಲ: ಬೇರೆ ಇಲಾಖೆಯಿಂದ ಬಂದಿರುವ ತಹಶೀಲ್ದಾರ್‌ ಗಂಗೇಶ್‌ ಅವರಿಗೆ ಕಂದಾಯ ಇಲಾಖೆ ಬಗ್ಗೆ ಏನೂ ಗೊತ್ತಿಲ್ಲ. ತಾಲೂಕು ಕಚೇರಿಯಲ್ಲಿ ಪ್ರತಿಯೊಂದು ವಿಷಯಕ್ಕೂ ಉಪತಹಶೀಲ್ದಾರ್‌ ನಾಗೇಂದ್ರಪ್ಪಅವರನ್ನೇ ವಿಚಾರಿಸಿ ಕೆಲಸ ಮಾಡಲಾಗುತ್ತಿದೆ. ಇದರಿಂದಲೂ ಸಹ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ವಿಳಂಬವಾಗುತ್ತಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು.

ಗೋಶಾಲೆ ಹಣ ಲೂಟಿ: ತಾಲೂಕಿನ 6 ಗೋ ಶಾಲೆಗಳಿಗೆ 4.5 ಕೋಟಿ ರೂ. ಖರ್ಚು ಮಾಡಿದ್ದಾರೆ. ಯಾವ ಯಾವ ಗೋಶಾಲೆಗಳಿಗೆ ಎಷ್ಟು ಮೇವು ಸರಬರಾಜಾಗಿದೆ ಎಂಬುದರ ಬಗ್ಗೆ ಸಮರ್ಪಕ ಮಾಹಿತಿ ಇಲ್ಲ, ಸರಿಯಾದ ದಾಖಲೆಗಳು ಇಲ್ಲದೆ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಎಚ್‌.ಆರ್‌ ಶಶಿಧರ್‌ ಮಾತನಾಡಿ, ತಾಲೂಕು ಹಾಗೂ ಗ್ರಾಪಂಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದು, ಪಿಡಿಒ ಹಾಗೂ ಗ್ರಾಪಂ ಅಧ್ಯಕ್ಷರು ಸರಿಯಾಗಿ ಗಮನ ಹರಿಸುತ್ತಿಲ್ಲ. ನೀರಿನ ಟ್ಯಾಂಕ್‌ಗಳು ಸ್ವತ್ಛಗೊಳಿಸುವಂತೆ ಅವರು ಆಗ್ರಹಿಸಿದರು.

ತಾಲೂಕಿನಲ್ಲಿರುವ ಶುದ್ಧª ಕುಡಿಯುವ ನೀರಿನ ಘಟಕಗಳಲ್ಲಿ ವಸೂಲಾದ ಹಣವನ್ನು ಯಾರ ಖಾತೆಗೆ ಹೋಗುತ್ತದೆ ಎಂಬುದರ ಬಗ್ಗೆ ಸರಿಯಾದ ಮಾಹಿತಿ ಇಲ್ಲ, ಘಟಕಗಳು ಕೆಟ್ಟು ಹೋದಾಗ ಯಾವ ಗುತ್ತಿಗೆದಾರರನ್ನು ಸಂಪರ್ಕಿಸಿಬೇಕು ಎಂಬುದರ ಬಗ್ಗೆ ತಿಳಿಯುತ್ತಿಲ್ಲ ಎಂದು ಅವರು ಕಿಡಿಕಾರಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿರಂಜನಮೂರ್ತಿ, ತಾಪಂ ಸದಸ್ಯ ಕೇಶವಮೂರ್ತಿ, ಎಪಿಎಂಸಿ ಸದಸ್ಯ ಶಿವರಾಜ್‌, ಮುಖಂಡ ಬರಗೂರು ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

saavu

ಮಂಜನಾಡಿ ಗ್ಯಾಸ್‌ ಸ್ಫೋ*ಟ ಪ್ರಕರಣ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

1-tallur

ತಲ್ಲೂರು: ಪಿಕಪ್‌- ಕಾರು ಢಿಕ್ಕಿ

1-gooli

Gangolli:ಅರ್ಧ ಗಂಟೆಗೂ ಹೆಚ್ಚು ಭೀತಿ ಮೂಡಿಸಿದ ಗೂಳಿ ಕಾಳಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.