“ಕ್ವಿಟ್‌ ಇಂಡಿಯಾದಿಂದ  ಚಳವಳಿಗೆ ಹೊಸ ಸ್ಫೂರ್ತಿ’


Team Udayavani, Aug 10, 2017, 7:30 AM IST

quit-india.jpg

ಮಹಾನಗರ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಎರಡು ಪ್ರಮುಖ ಹೆಜ್ಜೆ ಗುರುತುಗಳಿವೆ. ಮೊದಲನೆಯದು 1857ರ ಸಿಪಾಯಿ ದಂಗೆಯಾಗಿದ್ದು, ಎರಡನೆಯದು 1942ರ ಕ್ವಿಟ್‌ ಇಂಡಿಯಾ ಚಳವಳಿ. ಭಾರತದ ಸ್ವಾತಂತ್ರ್ಯ ಚಳವಳಿಗೆ ಹೊಸ  ಸ್ಫೂರ್ತಿ ನೀಡಿ, “ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಎಂಬ ಒಮ್ಮತದ  ದನಿಗೆ ಕ್ವಿಟ್‌ ಇಂಡಿಯಾ ಚಳವಳಿ ಮಹತ್ವದ ವೇದಿಕೆ ಒದಗಿಸಿತು ಎಂದು ಮೇಯರ್‌ ಕವಿತಾ ಸನಿಲ್‌ ಹೇಳಿದರು.

ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಆಶ್ರಯದಲ್ಲಿ ಮಂಗಳೂರಿನ ಟಾಗೋರ್‌ ಪಾರ್ಕ್‌ನಲ್ಲಿ ಬುಧವಾರ ಜರಗಿದ ಕ್ವಿಟ್‌ ಇಂಡಿಯಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ತ್ರಿವರ್ಣ ಧ್ವಜದಡಿ ಎಲ್ಲರೂ ಒಗ್ಗೂಡಿ, ದೇಶದಿಂದ ಪರಕೀಯರನ್ನು ಮೂಲೋತ್ಪಾಟನೆ ಮಾಡಲು ಸಿದ್ಧವಾದ ಸಮಯವಿದು. 75 ವರ್ಷಗಳ ಹಿಂದೆ ಅಂದರೆ 1942ರಲ್ಲಿ ಕೈಗೊಂಡ ಕ್ವಿಟ್‌ ಇಂಡಿಯಾ ಚಳವಳಿ ಉಗ್ರಸ್ವರೂಪ ಪಡೆದು, ದೇಶವನ್ನೇ ಒಂದಾಗಿ ಬೆಸೆದು ಹೋರಾಟದ ಸ್ವರವನ್ನು ಇನ್ನಷ್ಟು ಗಟ್ಟಿಯಾಗಿಸುವಲ್ಲಿ ಸಹಕರಿಸಿತು.

ವಿಶೇಷವೆಂದರೆ ಆಂದೋಲನ ಆರಂಭ ವಾದ ಐದೇ ವರ್ಷದಲ್ಲಿ ಭಾರತ ಸ್ವಾತಂತ್ರ್ಯವನ್ನು ಪಡೆಯುವಂತಾಯಿತು ಎಂದರು. ನಗರದ ಟಾಗೋರ್‌ ಪಾರ್ಕ್‌ ಅಭಿವೃದ್ಧಿಗೆ  ಪಾಲಿಕೆ ವಿಶೇಷ ಆದ್ಯತೆ ನೀಡಲಿದೆ. ಗಾಂಧಿ ಪ್ರತಿಮೆ ಇರುವಲ್ಲಿ ಇನ್ನಷ್ಟು ಅಭಿವೃದ್ಧಿ ಚಟುವಟಿಕೆ ಕೈಗೊಳ್ಳುವ ಇರಾದೆಯಿಂದ ವಿಶೇಷ ಒತ್ತು ನೀಡಲಾಗುವುದು ಎಂದವರು ಹೇಳಿದರು. ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಪಾಧ್ಯಕ್ಷರಾದ ಎಂ.ಸೀತಾರಾಮ ಶೆಟ್ಟಿ, ಪ್ರಭಾಕರ ಶ್ರೀಯಾನ್‌, ಕಾರ್ಯದರ್ಶಿ ಎನ್‌.ಇಸ್ಮಾಯಿಲ್‌ ಉಪಸ್ಥಿತರಿದ್ದರು.
ನಾಗೇಶ್‌ ಕಲ್ಲೂರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.