ಕಾವ್ಯಾ ಸಾವು: ಆ. 31ರೊಳಗೆ ಸತ್ಯಾಂಶ ವರದಿ ಬಾರದಿದ್ದರೆ ಜಿಲ್ಲಾ ಬಂದ್‌


Team Udayavani, Aug 10, 2017, 8:00 AM IST

dinakara-shetty.jpg

ಮಂಗಳೂರು: ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್‌ ಆಟಗಾರ್ತಿ, ಮೂಡಬಿದಿರೆಯ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವು ಪ್ರಕರಣದ ಬಗ್ಗೆ ಆಗಸ್ಟ್‌ ಅಂತ್ಯದೊಳಗೆ ಪಾರದರ್ಶಕ ತನಿಖೆ ನಡೆಸಿ ಪೊಲೀಸರು ಸತ್ಯಾಂಶದ ವರದಿ ನೀಡದಿದ್ದರೆ ಸೆ. 10ರೊಳಗೆ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದು ಜಸ್ಟಿಸ್‌ ಫಾರ್‌ ಕಾವ್ಯಾ ಹೋರಾಟ ಸಮಿತಿಯ ದಕ್ಷಿಣ ಕನ್ನಡದ ಸಂಚಾಲಕ ದಿನಕರ ಶೆಟ್ಟಿ ಹೇಳಿದರು. 

ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಹಾಗೂ ನ್ಯಾಯ ಒದಗಿಸಬೇಕು, ಕಾವ್ಯಾ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಸ್ಟಿಸ್‌ ಫಾರ್‌ ಕಾವ್ಯಾ ಹೋರಾಟ ಸಮಿತಿ ಆಶ್ರಯದಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್‌ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.

ಆಳ್ವಾಸ್‌ ಸಂಸ್ಥೆಯ ಪರವಾಗಿ ಕೆಲವು ಹೋರಾಟ ನಡೆಸಲು ಮುಂದಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಒಂದೊಮ್ಮೆ ಕಾವ್ಯಾ ನಿಮ್ಮ ಮಗಳಾಗಿದ್ದರೆ ನೀವು ಈ ಸಂಸ್ಥೆಯ ಪರವಾಗಿ ಮಾತನಾಡುತ್ತಿದ್ದಿರಾ? ಈ ಪ್ರಕರಣದಲ್ಲಿ ನ್ಯಾಯ ಬೇಕೆಂದು ವಿದ್ಯಾರ್ಥಿಗಳು ಮಾತ್ರವಲ್ಲದೆ ಸಂಸ್ಥೆಯವರೂ ಒತ್ತಾಯಿಸುತ್ತಿದ್ದಾರೆ. ಅಲ್ಲದೆ ಡಾ| ಮೋಹನ ಆಳ್ವ ಅವರೇ ಸ್ವತಃ ಮಂಪರು ಪರೀಕ್ಷೆಗೂ ಸಿದ್ಧ ಎಂದು ಹೇಳಿದ್ದಾರೆ. ಹಾಗಿರುವಾಗ ಸಂಸ್ಥೆಯ ಪರವಾಗಿ ಹೋರಾಟ ನಡೆಸುವ ಆವಶ್ಯಕತೆ ಏನಿದೆ ಎಂದು ದಿನಕರ ಶೆಟ್ಟಿ ಪ್ರಶ್ನಿಸಿದರು. ಸಂಸ್ಥೆ ಪರ ಹೋರಾಟವನ್ನು ವಾಪಸ್‌ ಪಡೆಯದಿದ್ದರೆ ಮಂಗಳೂರು ಬಂದ್‌ಗೆ ಕರೆ ನೀಡಲು ಹಿಂಜರಿಯುವುದಿಲ್ಲ ಎಂದರು.

ಕಾವ್ಯಾ ತಾಯಿಯ ಪ್ರಶ್ನೆಗಳಿಗೆ ಉತ್ತರ ಸಿಗಬೇಕು: ಮೇಯರ್‌
ಮೇಯರ್‌ ಕವಿತಾ ಸನಿಲ್‌ ಮಾತನಾಡಿ, “ನಾನು ಮೇಯರ್‌ ಆಗಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ. ಕಾವ್ಯಾ ಸಾವು ಪ್ರಕರಣದಲ್ಲಿ ನ್ಯಾಯ ಸಿಗಬೇಕೆಂಬ ಹೋರಾಟದ ಪರವಾಗಿ ಇಲ್ಲಿಗೆ ಬಂದಿದ್ದೇನೆ. ಕಾವ್ಯಾ ತಾಯಿ ಬೇಬಿ ಅವರು ಮುಂದಿಡುವ ಕೆಲವು ಪ್ರಶ್ನೆಗಳಿಗೆ ಉತ್ತರ ಸಿಗಬೇಕು. ಈ ಹೋರಾಟದಲ್ಲಿ ರಾಜಕೀಯ ಮೂಗು ತೂರಿಸಬಾರದು. ನಿಷ್ಪಕ್ಷ ತನಿಖೆ ನಡೆದು ಸತ್ಯ ಹೊರಗೆ ಬರಬೇಕು. ಕಾವ್ಯಾ ಕುಟುಂಬಕ್ಕೆ ಸರಕಾರದಿಂದ 25 ಲಕ್ಷ ರೂ. ಪರಿಹಾರ ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಎನ್ನ ಬಾಲೆಗ್‌ ನ್ಯಾಯ ಕೊರೊಡು
ಕಾವ್ಯಾ ತಾಯಿ ಬೇಬಿ ಅವರು ಮಾತನಾಡಿ, “ಎನ್ನ ಬಾಲೆಗ್‌ ನ್ಯಾಯ ಕೊರೊಡು’ (ನಮ್ಮ ಪುತ್ರಿಗೆ ನ್ಯಾಯ ಸಿಗಬೇಕು). ಕಾವ್ಯಾ ದೇಹವನ್ನು ಎರಡು ಬೆಡ್‌ಶೀಟ್‌ಗಳಲ್ಲಿ ಸುತ್ತಿ ಶವ ಪೆಟ್ಟಿಗೆಯಲ್ಲಿ ಇರಿಸುತ್ತಿರುವ ವೀಡಿಯೋ ಪ್ರದರ್ಶಿಸಿ ಇದು ಸಿಸಿ ಕೆಮರಾ ಫುಟೇಜ್‌ ಎಂದು ನಂಬಿಸಲಾಗಿತ್ತದೆ. ಇದು ನಕಲಿ ಎಂಬ ಸಂಶಯ ನಮ್ಮದು. ನ್ಯಾಯ ಸಿಗುವ ತನಕ ಹೋರಾಟ ಮುಂದುವರಿಯ ಬೇಕು ಎಂದರು.

ಬಿರ್ವೆರ್‌ ಕುಡ್ಲ ಸಂಘಟನೆಯ ಅಧ್ಯಕ್ಷ ದೀಪಕ್‌ ಶೆಟ್ಟಿಗಾರ್‌, ಬಿಲ್ಲವ ಏಕೀಕರಣ ಸಮಿತಿಯ ಪ್ರಧಾನ ಕಾರ್ಯದರ್ಶಿ ದೀಪಕ್‌ ಕೋಟ್ಯಾನ್‌, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅನಿಲ್‌ ದಾಸ್‌, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ನಿತಿನ್‌ ಕುತ್ತಾರ್‌, ಅಖೀಲ ಭಾರತ ಬಿಲ್ಲವರ ಯೂನಿಯನ್‌ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ, ಯುವ ವಾಹಿನಿ ಮಹಿಳಾ ಘಟಕದ ರಶ್ಮಿ ಕರ್ಕೇರಾ, ಎಬಿವಿಪಿ ಮುಖಂಡ ಸುಧೀಶ್‌ ಶೆಟ್ಟಿ, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್‌ ಕುಮಾರ್‌ ಬಜಾಲ್‌, ಸಾಮಾಜಿಕ ಕಾರ್ಯಕರ್ತ ರೋಬರ್ಟ್‌ ರೊಜಾರಿಯೋ, ದಲಿತ ಸಂಘಟನೆಯ ನಾಯಕ ರಘು ಎಕ್ಕಾರು, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಶಾಶ್ವತ್‌ ಕೊಟ್ಟಾರಿ, ಮುಸ್ಲಿಂ ಸಂಘಟನೆಗಳ ಒಕ್ಕೂಟದ ಪರವಾಗಿ ಮಾಜಿ ಮೇಯರ್‌ ಕೆ. ಅಶ್ರಫ್‌, ಕಾರ್ಪೊರೇಟರ್‌ ಪ್ರತಿಭಾ ಕುಳಾç, ಕ್ರೀಡಾಪಟು ಮಮತಾ ಪೂಜಾರಿ, ಎನ್‌ಎಸ್‌ಯುಐ ನಾಯಕ ಸಾವುದ್‌, ಸಿಪಿಐ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೇರಿಂಜ, ಜೆಡಿಎಸ್‌ ಜಿಲ್ಲಾ ಕಾರ್ಯದರ್ಶಿ
ವಸಂತ ಪೂಜಾರಿ, ಅಖೀಲ ಭಾರತ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಯಶವಂತ ಮರೋಳಿ, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಮುಖಂಡ ಪ್ರತೀಕ್‌ ಪೂಜಾರಿ, ಸಾಮಾಜಿಕ ಕಾರ್ಯಕರ್ತರಾದ ಆತ್ರಾಡಿ ಅಮೃತಾ ಶೆಟ್ಟಿ, ಕ್ರೀಡಾಪಟು ಗೀತಾ ಬಾಯಿ, ಕೆಪಿಟಿ ವಿದ್ಯಾರ್ಥಿ ನಾಯಕ ಚಿತ್ತರಂಜನ್‌ ಶೆಟ್ಟಿ ಮುಂತಾದವರು ಪ್ರತಿಭಟನ ಸಭೆಯಲ್ಲಿ ಮಾತನಾಡಿದರು.

ಕಾವ್ಯಾ ತಂದೆ ಲೋಕೇಶ್‌ ಪೂಜಾರಿ ವಿವಿಧ ಸಂಘಟನೆಗಳ ಮುಖಂಡರಾದ ಅಶೋಕ್‌ ಕೊಂಚಾಡಿ, ವಿಷ್ಣುಮೂರ್ತಿ, ಉದಯ ಕುಮಾರ್‌, ಉದಯ ಪೂಜಾರಿ, ರಾಕೇಶ್‌ ಪೂಜಾರಿ, ಯೋಗೀಶ್‌ ಜಪ್ಪಿನಮೊಗರು, ಚರಣ್‌ ಶೆಟ್ಟಿ, ಮಾಧುರಿ, ದೀಕ್ಷಿತ್‌, ಜೀವನ್‌, ಪಿ.ಬಿ. ಡೆ’ಸಾ, ಎಂ.ಎಸ್‌. ಕೋಟ್ಯಾನ್‌, ಎಚ್‌.ಎಸ್‌. ಸಾಯಿರಾಂ, ಪದ್ಮರಾಜ್‌, ಜಯಂತಿ ಬಿ. ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.

ದಲಿತ ಸಂಘಟನೆಯ ನಾಯಕ ರಘುವೀರ್‌ ಸೂಟರ್‌ಪೇಟೆ ಸ್ವಾಗತಿಸಿದರು. ಸಿಪಿಐಎಂ ನಗರ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಬಜಾಲ್‌ ಕಾರ್ಯಕ್ರಮ ನಿರ್ವಹಿಸಿದರು.

ಪ್ರತಿಭಟನೆಯ ಪ್ರಯುಕ್ತ ನಗರದಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಜಿಲ್ಲಾಧಿಕಾರಿ ಕಚೇರಿ ಎದುರು ಹ್ಯಾಮಿಲ್ಟನ್‌ ಸರ್ಕಲ್‌ ತನಕವೂ ಪ್ರತಿಭಟನಕಾರರು ಜಮಾಯಿಸಿದ್ದು, ಸುಮಾರು 4,000 ಮಂದಿ ಭಾಗವಹಿಸಿದ್ದರು. ಇದರಿಂದ ಈ ಸ್ಟೇಟ್‌ ಬ್ಯಾಂಕ್‌ ಪರಿಸರದಲ್ಲಿ ಸುಮಾರು 3 ಗಂಟೆ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು ಮತ್ತು ಇತರ ಸಾಮಾಜಿಕ ಸಂಘಟನೆಗಳ ಸಹಿತ 30ಕ್ಕೂ ಅಧಿಕ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.