ಡಿಕೆಶಿ ಉಸ್ತುವಾರಿಗೆ ಗುಜರಾತ್‌ ಶಾಸಕರ ಮನವಿ?


Team Udayavani, Aug 10, 2017, 6:45 AM IST

800x480_IMAGE71167643.jpg

ಬೆಂಗಳೂರು: ಜಿದ್ದಾಜಿದ್ದಿನ ಗುಜರಾತ್‌ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡ ಅಹಮದ್‌ ಪಟೇಲ್‌ ಗೆಲುವು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಪಕ್ಷದ ಮಟ್ಟಿಗೆ ಮತ್ತಷ್ಟು ಪ್ರಭಾವಿ ನಾಯಕನಾಗುವ ಸಾಧ್ಯತೆಗಳಿವೆ. ಅದರಲ್ಲೂ, ಮುಂಬರುವ ಗುಜರಾತ್‌ ವಿಧಾನಸಭಾ ಚುನಾವಣೆಗೆ ಪಕ್ಷದ ತಂತ್ರ ಹೆಣೆಯಲು ಉಸ್ತುವಾರಿ ವಹಿಸಿಕೊಳ್ಳುವಂತೆ ಸ್ವತಃ ಆ ರಾಜ್ಯದ ಶಾಸಕರೇ ಮನವಿ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಗುಜರಾತ್‌ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಎದುರಾದ “ಅಪಾಯ’ವನ್ನು ತಪ್ಪಿಸಲು ಗುಜರಾತ್‌ ಶಾಸಕರಿಗೆ ರಕ್ಷಣೆ ನೀಡುವಂತೆ ಕಾಂಗ್ರೆಸ್‌ ಹಲವು ಪ್ರಮುಖ ನಾಯಕರ ಮೊರೆ ಹೋಗಿತ್ತು ಎನ್ನಲಾಗಿದೆ.

ಆದರೆ, ಇದನ್ನು ಸವಾಲಾಗಿ ಸ್ವೀಕರಿಸಿದ್ದ ಡಿ.ಕೆ. ಶಿವಕುಮಾರ್‌ ಹೈಕಮಾಂಡ್‌ ಆದೇಶದಂತೆ ತಮ್ಮ ಜಿಲ್ಲೆಯಲ್ಲಿಯೇ ಗುಜರಾತ ಶಾಸಕರಿಗೆ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿ ತಾವೂ ಹಾಗೂ ಸಹೋದರ ಸಂಸದ ಡಿ.ಕೆ. ಸುರೇಶ್‌ ಅಲ್ಲಿಯೇ ಠಿಕಾಣಿ ಹೂಡಿ ಗುಜರಾತ್‌ ಶಾಸಕರು ಕದಲದಂತೆ ನೋಡಿಕೊಂಡಿರುವುದು ಹೈಕಮಾಂಡ್‌ ಮೆಚ್ಚುಗೆಗೆ ಪಾತ್ರವಾಗಿದೆ. ಈ ಮೊದಲಿನಿಂದಲೂ ಕಾಂಗ್ರೆಸ್‌ನ
ಟ್ರಬಲ್‌ ಶೂಟರ್‌ ಆಗಿ ಕಾಣಿಸಿಕೊಳ್ಳುತ್ತಿರುವ ಡಿಕೆಶಿ ಹಲವು ಸಂದರ್ಭಗಳಲ್ಲಿ ಪಕ್ಷದ “ಮಾನ’ ಕಾಪಾಡಿದ್ದಾರೆ.

ಹಿಂದೆ ಮಹಾರಾಷ್ಟ್ರದಲ್ಲಿ ವಿಲಾಸ್‌ರಾವ ದೇಶಮುಖ್‌ ಬಹುಮತ ಸಾಬೀತುಪಡಿಸಲು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು
ಅವರನ್ನು ಕರ್ನಾಟಕಕ್ಕೆ ಕಳುಹಿಸಿಕೊಟ್ಟಿದ್ದರು. ಆಗ ಶಿವಕುಮಾರ್‌ ಅವರೇ ಆ ಶಾಸಕರ ಜವಾಬ್ದಾರಿ ವಹಿಸಿಕೊಂಡಿದ್ದರು. ಆಗ ವಿಲಾಸ್‌ ರಾವ್‌ ದೇಶಮುಖ್‌ ಸದನದಲ್ಲಿ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಇದಲ್ಲದೇ ಕನಕಪುರ ಲೋಕಸಭೆಯ ಉಪ ಚುನಾವಣೆಯಲ್ಲಿ ದೇವೇಗೌಡರ ವಿರುದಟಛಿ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ ಯಾರೂ ಮುಂದೆ ಬರದಿದ್ದಾಗ ಹೈ ಕಮಾಂಡ್‌ ಕಣ್ಣಿಗೆ ಬಿದ್ದಿದ್ದು ಇದೇ ಶಿವಕುಮಾರ್‌. 

ಇನ್ನು 2013 ರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡಿದಾಗ ಸ್ವತಃ ತಮ್ಮ ಸಹೋದರ ಡಿ.ಕೆ. ಸುರೇಶರನ್ನು ಕಣಕ್ಕಿಳಿಸಿ, ಆ ಕ್ಷೇತ್ರವನ್ನು ಕಾಂಗ್ರೆಸ್‌ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ರಾಮುಲು ರಾಜೀನಾಮೆ ನೀಡಿದಾಗ ಆ ಕ್ಷೇತ್ರದ ಚುನಾವಣೆಯ ಜವಾಬ್ದಾರಿ ಹೊತ್ತಿದ್ದ ಶಿವಕುಮಾರ್‌ ಎನ್‌.ವೈ. ಗೋಪಾಲಕೃಷ್ಣರನ್ನು ಗೆಲ್ಲಿಸುವಲ್ಲಿ ಸಫ‌ಲರಾಗಿದ್ದರು.

ಇತ್ತೀಚೆಗೆ ನಡೆದ ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಯಲ್ಲೂ ನಿರ್ಣಾಯಕ ಪಾತ್ರವಹಿಸಿದ್ದರು. ಐಟಿ ದಾಳಿ ನಡುವೆಯೂ ಹೈ ಕಮಾಂಡ್‌ ಆದೇಶವನ್ನು ಪಾಲಿಸಿ, ಪಕ್ಷ ನಿಷ್ಠೆ ಮೆರೆದಿರುವುದಕ್ಕೆ ರಾಷ್ಟ್ರಮಟ್ಟದಲ್ಲಿ ಪಕ್ಷದ ವೇದಿಕೆಯಲ್ಲಿ ಅವರಿಗೆ ಸೂಕ್ತ ಗೌರವ ದೊರೆಯುತ್ತದೆ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ. ಡಿ.ಕೆ. ಶಿವಕುಮಾರ್‌ಗೆ ಹೆಚ್ಚಿನ ಜವಾಬ್ದಾರಿ ನೀಡುವ ಕುರಿತಂತೆ ಸಧ್ಯ ಸಾಕಷ್ಟು ಊಹಾ ಪೋಹದ ಚರ್ಚೆಗಳು ನಡೆಯುತ್ತಿದ್ದು, ಅವರಿಗೆ ಖಾಲಿ ಇರುವ ಗೃಹ ಖಾತೆ ನೀಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ವರ್ಷಾಂತ್ಯದಲ್ಲಿ ಗುಜರಾತನಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಉಸ್ತುವಾರಿಯಾಗಿ ನೇಮಿಸುತ್ತಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಗುಜರಾತ್‌ ಚುನಾವಣೆಯಲ್ಲಿ ಅಹಮದ್‌ ಪಟೇಲ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಇಂಧನ ಸಚಿವ ಡಿ.ಕೆ.
ಶಿವಕುಮಾರ್‌ಗೆ ಗುಜರಾತ್‌ ಉಸ್ತುವಾರಿ ವಹಿಸಿದರೆ, ಸಮರ್ಥವಾಗಿ ನಿಭಾಯಿಸುತ್ತಾರೆ 

– ಸತೀಶ್‌ ಜಾರಕಿಹೊಳಿ, ಎಐಸಿಸಿ ಕಾರ್ಯದರ್ಶಿ

– ಶಂಕರ್‌ ಪಾಗೋಜಿ

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.