ಮೂವರು ಐಪಿಎಸ್ ಅಧಿಕಾರಿಗಳ ವರ್ಗ ರದ್ದು
Team Udayavani, Aug 10, 2017, 7:00 AM IST
ಬೆಂಗಳೂರು: ಇತ್ತೀಚೆಗೆ ತಾನೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಈ ಪೈಕಿ ಮೂವರ ವರ್ಗಾವಣೆಯನ್ನು ರದ್ದುಗೊಳಿಸಿದೆ.
ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದ ಸಿ.ವಂಶಿಕೃಷ್ಣ ಅವರ ವರ್ಗಾವಣೆ
ರದ್ದುಗೊಳಿಸಿ, ದಾವಣಗೆರೆ ಪೂರ್ವ ವಲಯದ ಎಸಿಬಿ ಎಸ್ಪಿಯಾಗಿ ನೇಮಿಸಲಾಗಿದೆ. ಅದೇ ರೀತಿ ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡಿದ್ದ ಹನುಮಂತರಾಯ ಅವರನ್ನು ಮಂಗಳೂರು ನಗರ ಡಿಸಿಪಿ (ಕಾನೂನು ಹಾಗೂ ಸುವ್ಯವಸ್ಥೆ)ಹುದ್ದೆಗೆ ನಿಯೋಜಿಸಿದೆ. ಮಂಗಳೂರು ನಗರ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಜಾಗಕ್ಕೆ ವರ್ಗಾವಣೆಗೊಂಡಿದ್ದ ಎಂ.ಪುಟ್ಟಮಾದಯ್ಯ ಅವರನ್ನು ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾಗಿ ಬದಲಾವಣೆ ಮಾಡಲಾಗಿದೆ.
ಇಬ್ಬರು ಐಎಎಸ್ ವರ್ಗ: ಈ ಮಧ್ಯೆ ಎರಡು ಜಿಲ್ಲಾಧಿಕಾರಿಗಳನ್ನು ಬದಲಾವಣೆ ಮಾಡಿರುವ ಸರ್ಕಾರ ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಎಸ್.ಜಿಯಾವುಲ್ಲಾ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತು ಹುದ್ದೆಯ ನಿರೀಕ್ಷೆಯಲ್ಲಿದ್ದ ಮಂಜುಶ್ರೀ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.