ಪುಷ್ಕರ್ ಬ್ಯಾನರ್ ನಲ್ಲಿ ದಿಗಂತ್ ಚಿತ್ರ
Team Udayavani, Aug 10, 2017, 2:59 PM IST
ದಿಗಂತ್ ಕಡೆಯಿಂದ ಹೊಸ ಸಿನಿಮಾದ ಸುದ್ದಿ ಬಾರದೇ ತುಂಬಾ ದಿನಗಳೇ ಆಗಿತ್ತು. “ಹ್ಯಾಪಿ ನ್ಯೂ ಇಯರ್’ ನಂತರ ದಿಗಂತ್ ಯಾವೊಂದು ಚಿತ್ರವನ್ನು ಒಪ್ಪಿದ್ದ ಸುದ್ದಿ ಬಂದಿಲ್ಲ. ಇನ್ನು “ಚಾರ್ಲಿ’ ಎಂಬ ಚಿತ್ರದಲ್ಲಿ ದಿಗಂತ್ ನಟಿಸುತ್ತಾರೆ ಎಂಬ ಸುದ್ದಿ ಇತ್ತಾದರೂ, ಆ ಚಿತ್ರ ನಿಂತೇ ಹೋಯಿತು. ಈಗ ದಿಗಂತ್ ಹೊಸದೊಂದು ಸಿನಿಮಾ ಒಪ್ಪಿರುವ ಸುದ್ದಿ ಬಂದಿದೆ.
ಅದು ಪುಷ್ಕರ್‌ಹಾಗೂ ಪರಂವಾ ಸ್ಟುಡಿಯೋದ ಜೊತೆ. ಹೌದು, ದಿಗಂತ್ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಆ ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸುತ್ತಿದ್ದಾರೆ. ಈಗಾಗಲೇ ಮಾತುಕತೆಯಾಗಿದ್ದು, ನವೆಂಬರ್‌ನಲ್ಲಿ ಚಿತ್ರ ಆರಂಭವಾಗಲಿದೆ. ಈ ಚಿತ್ರವನ್ನು ಸೆನ್ನಾ ಹೆಗಡೆ ಎನ್ನುವವರು ನಿರ್ದೇಶಿಸುತ್ತಿದ್ದಾರೆ.
ಕಾಸರಗೋಡು ಮೂಲದ ಸೆನ್ನಾ ಹೆಗಡೆಯವರಿಗೆ ಕನ್ನಡದಲ್ಲಿ ಇದು ಮೊದಲ ಸಿನಿಮಾ. ಈ ಹಿಂದೆ ಮಲಯಾಳಂನಲ್ಲಿ “0-41*’ ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗ ಕನ್ನಡದಲ್ಲಿ ದಿಗಂತ್‌ಗೆ ಸಿನಿಮಾ ಮಾಡುತ್ತಿದ್ದಾರೆ. ದಿಗಂತ್ ಅವರ ಮ್ಯಾನರೀಸಂಗೆ ತಕ್ಕಂತೆ ಈ ಸಿನಿಮಾ ಇದ್ದು, “ಪಂಚರಂಗಿ’ ನಂತರ ದಿಗಂತ್ ಅವರಿಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇದೊಂದು ರೊಮ್ಯಾಂಟಿಕ್-ಕಾಮಿಡಿ ಚಿತ್ರವಾಗಿದ್ದು, ದಿಗಂತ್ ಕೆರಿಯರ್‌ನಲ್ಲಿ ವಿಭಿನ್ನ ಚಿತ್ರವಾಗಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ.
ಪುಷ್ಕರ್ ಫಿಲಂಸ್ ಹಾಗೂ ಪರಂವಾ ಸ್ಟುಡಿಯೋ ಸಾಲು ಸಾಲು ಚಿತ್ರಗಳನ್ನು ಮಾಡುತ್ತಿದ್ದು, ಹೊಸ ಹೊಸ ನಿರ್ದೇಶಕರ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದೆ. ಅದರಲ್ಲಿ ದಿಗಂತ್ ಸಿನಿಮಾ ಕೂಡಾ ಒಂದು. ಸದ್ಯ ನಾಯಕ ಹಾಗೂ ನಿರ್ದೇಶಕ ಅಷ್ಟೇ ಅಂತಿಮವಾಗಿದ್ದು, ನಾಯಕಿ ಸೇರಿದಂತೆ ತಾಂತ್ರಿಕ ವರ್ಗ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಈ ನಡುವೆಯೇ ಪುಷ್ಕರ್ ಫಿಲಂಸ್ “ಭೀಮಸೇನ ನಳಮಹಾರಾಜ’ ಚಿತ್ರೀಕರಣ ಆರಂಭವಾಗಿದೆ. ಈ ಚಿತ್ರದಲ್ಲಿ ಅರವಿಂದ್ ಅಯ್ಯರ್ ನಾಯಕರಾಗಿ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.