“ಅಂತರ್ಜಲ ಹೆಚ್ಚಳಕ್ಕೆ ಹೆಬ್ಟಾಳ ಕೆರೆ ಶುದ್ಧೀಕರಿಸಿದ ನೀರು’

Team Udayavani, Aug 10, 2017, 3:44 PM IST

hebballake copy.jpg

ದೇವನಹಳ್ಳಿ: ವಾಡಿಕೆ ಮಳೆ ಇಲ್ಲದೆ ಕುಡಿಯುವ ನೀರಿಗೆ ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ. ನೀರಿಲ್ಲ ಎಂಬ ಭಾವನೆ ಬರದಂತೆ ಬೋರ್‌ವೆಲ್‌ ಕೊರೆಸುವುದರ ಮೂಲಕ ಜನರಿಗೆ ನೀರು ಒದಗಿಸಲಾಗುತ್ತಿದೆ ಎಂದು ಶಾಸಕ ಪಿಳ್ಳಮುನಿಶಾಮಪ್ಪ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2017-18ನೇ ಸಾಲಿನ ಸಾಂಸ್ಕೃತಿಕ ಕ್ರೀಡಾ, ಎನ್‌ಎಸ್‌ಎಸ್‌, ರೆಡ್‌ಕ್ರಾಸ್‌ ಮತ್ತು ಸ್ಕೌಟ್ಸ್‌ ಮತ್ತು ಗೈಡ್ಸ್‌ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಹೆಬ್ಟಾಳ ಕೆರೆಯಿಂದ ಕೊಳಚೆ ನೀರನ್ನು ಶುದ್ಧೀಕರಿಸಿ ತಾಲೂಕಿನ ಕೆರೆಗಳಿಗೆ ಹರಿಸಲಾಗುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ನೀರನ್ನು ಮೂರು ಸಲ ಶುದ್ಧೀಕರಿಸಿ ಕೆರೆಗೆ ಹರಿಸಬೇಕು ಎಂದು ಮನವಿ ಮಾಡಿದರು.
ಹಣ ಪೋಲಾಗದಿರಲಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದಿಂದ 1.25 ಕೋಟಿ ರೂ. ಬಿಡುಗಡೆ ಮಾಡಿ ಕಾಲೇಜಿನಲ್ಲಿ ಆಡಿಟೋರಿಯಂ ನಿರ್ಮಾಣ ಮಾಡಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್‌ಟಿಯನ್ನು ಸರ್ಕಾರಕ್ಕೆ ತಾವು ಕಟ್ಟುತ್ತೇವೆ. ಅದರಿಂದ ಅಭಿವೃದ್ಧಿ ಕೆಲಸಗಳು ಮಾಡುತ್ತಾರೆ. ಸಾರ್ವಜನಿಕರ ಒಂದು ರೂಪಾಯಿ ಹಣ ಪೋಲಾಗದಂತೆ ನೋಡಿಕೊಳ್ಳಬೇಕು ಎಂದು ವಿವರಿಸಿದರು. ನೀರು ಮಿತವಾಗಿ ಬಳಸಿ: ಜಿಲ್ಲಾ ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು
ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ರಮೇಶ್‌ ಮಾತನಾಡಿ, ವಿಶ್ವದಲ್ಲಿ ನೀರನ್ನು ಬಹಳ ನಿಕೃಷ್ಟವಾಗಿ ನೋಡು ತ್ತಿದ್ದೇವೆ. ಆದರೆ, ಮುಂದೊಂದುದಿನ ನೀರಿಗಾಗಿ ಯುದ್ಧ ಮಾಡುವ ಕಾಲ ಬಹಳ ದಿನಗಳಿಲ್ಲ. ಹಿಂದೆ ನೀರು ಸಂಗ್ರಹಿಸುವ ಪರಿಪಾಠ ಇರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಕಾಂಕ್ರೀಟ್‌ ಕಾಡುಗಳು ಹೆಚ್ಚಾದಂತೆ ಮನೆಯಲ್ಲಿ ನೀರಿನ ತೊಟ್ಟಿಗಳಲ್ಲಿ ನೀರನ್ನು ಸಂಗ್ರಹಿಸುವುದು ಹೆಚ್ಚಾಗಿದೆ. ಪ್ರತಿಯೊಬ್ಬರು ಮಿತವಾಗಿ ನೀರನ್ನು ಬಳಸಬೇಕು ಎಂದು ಹೇಳಿದರು. ವಾರ್ಷಿಕ ಸಾಧನೆ ವಿವರ: ಪ್ರಥಮ ದರ್ಜೆ
ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಚಂದ್ರಶೇಖರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಮಾರ್ಟ್‌ ತರಗತಿ ನಡೆಸಲಾಗುತ್ತಿದೆ. ನೀರಿಗೆ ತೊಂದರೆಯಾದ ಸಮಯದಲ್ಲಿ ಶಾಸಕರು ಬೋರ್‌ವೆಲ್‌ ಕೊರೆಸಿದ್ದರೂ ನೀರಿನ ಪ್ರಮಾಣ ಕಡಿಮೆಯಾದಾಗ ರೀಬೋರ್‌ವೆಲ್‌ ಮಾಡಿಸಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಕ್ಯಾಂಟಿನ್‌ ಮಾಡಿ, ಕಡಿಮೆ ದರದಲ್ಲಿ ಊಟ ಸಿಗುವಂತೆ ಮಾಡಲಾಗಿದೆ. ಆಡಿಟೋರಿಯಂ, ಸೆಮಿನಾರ್‌ ಹಾಲ್‌ ಅವಶ್ಯಕತೆ ಇದೆ. ಕಳೆದ ಸಾಲಿನ ಫ‌ಲಿತಾಂಶದಲ್ಲಿ ಶೇ.90ಕ್ಕಿಂತಲೂ ಹೆಚ್ಚು ಅಂಕ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ವಿವರಿಸಿದರು. ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಗೋಪಾಲ್‌, ಸದಸ್ಯ ಗೋಪಾಲಕೃಷ್ಣ, ತಾಲೂಕು ಸೊಸೈಟಿ ನಿರ್ದೇಶಕ ಡೈರಿ ನಾಗೇಶ್‌ ಬಾಬು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಆರ್‌.ಭರತ್‌, ಬಿ.ಪಿಳ್ಳರಾಜು, ಜಿ.ಸುನಿಲ್‌, ಆರ್‌. ಮುತ್ತುಕುಮಾರ್‌, ಕ್ರೀಡಾಪಟು ಮಂಜುನಾಥ್‌,
ಸಾಂಸ್ಕೃತಿಕ ವೇದಿಕೆ ಸಂಚಾಲಕ ಡಾ.ಕೃಷ್ಣಮೂರ್ತಿ, ಕ್ರೀಡಾ, ಎನ್‌ಎಸ್‌ಎಸ್‌ ಘಟಕ ಸಂಚಾಲಕ ರವಿಚಂದ್ರ, ರೆಡ್‌ಕ್ರಾಸ್‌ ಸಂಚಾಲಕ ಡಾ.ಸಜ್ಜದ್‌ ಪಾಷ, ಡಾ.ರವಿಕುಮಾರ್‌ ಇದ್ದರು. 

ಟಾಪ್ ನ್ಯೂಸ್

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.