ಕೊಟ್ಟಾರ: ಆಟಿಡೊಂಜಿ ದಿನ, ಸಾಧಕರಿಗೆ ಸಮ್ಮಾನ
Team Udayavani, Aug 11, 2017, 8:00 AM IST
ಕೊಟ್ಟಾರ: ಪತಂಜಲಿ ಯೋಗ ಪೀಠ ಮತ್ತು ಭಾರತೀಯ ಸ್ವಾಭಿಮಾನ ಟ್ರಸ್ಟ್ ವತಿಯಿಂದ ಆಟಿಡೊಂಜಿ ದಿನ ಕೊಟ್ಟಾರದಲ್ಲಿ ನಡೆಯಿತು.
ಉದ್ಘಾಟಿಸಿದ ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಾಜಿ ಸದಸ್ಯ ದಯಾನಂದ ಕತ್ತಲ್ಸಾರ್ ಮಾತನಾಡಿ, ಅಂದಿನ ಆಟಿ ತಿಂಗಳು ಕಷ್ಟದ ದಿನವಾದರೂ ತುಳುನಾಡಿನ ಸಂಸ್ಕೃತಿಯ ಸಂಪನ್ನತೆಯನ್ನು ಬೆಳೆಸಿದರು. ಪ್ರಕೃತಿದತ್ತವಾದ ಎಲೆ, ಗಡ್ಡೆ ಗೆಣಸುಗಳನ್ನು ತಿನ್ನುತ್ತಿದ್ದರು. ಆದ್ದರಿಂದಲೇ ಅವರು ಹೆಚ್ಚು ವರ್ಷಗಳ ಕಾಲ ಬದುಕುತ್ತಿದ್ದರು ಎಂದು ಹೇಳಿದರು.
ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಎಂ. ಜಗದೀಶ ಶೆಟ್ಟಿ ಮಾತನಾಡಿ, ಆಟಿ ತುಳುನಾಡಿನ ಆಚಾರ, ವಿಚಾರಗಳನ್ನು ನೆನಪಿಸುವ ಸುಂದರ ಹಬ್ಬ. ಇಂತಹ ಆಚರಣೆಗಳ ಮೂಲಕ ನಮ್ಮ ಹಿರಿಯರು ಬದುಕಿದ ರೀತಿಯ ಬಗ್ಗೆ ಯುವಜನರಿಗೆ ಅರಿವು ಮೂಡುತ್ತದೆ ಎಂದರು.
ಸಾಹಿತಿ ಇರಾ ನೇಮು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಚುಟುಕು ಕವಿ ಶೇಖರ ಭಂಡಾರಿ, ಪ್ರಗತಿಪರ ರೈತ ವಿಶ್ವನಾಥ ರೈ, ಗಿರೀಶ್ ಶೆಟ್ಟಿ, ಶೋಭಾರಾಣಿ ಉಪಸ್ಥಿತರಿದ್ದರು.ವಿವಿಧ ಕ್ಷೇತ್ರಗಳ ಸಾಧಕರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.ಸುಬ್ರಾಯ ನಾಯಡ್ ಅವರು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.