ಕ್ಯಾಂಟೀನಲ್ಲಿ ನಗು ನಗುತ್ತಾ ಊಟ ಕೊಡಿ

Team Udayavani, Aug 12, 2017, 10:39 AM IST

indira canteen copy.jpg

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್‌ ಯೋಜನೆ ಜಾರಿಗೆ ಬಿಬಿಎಂಪಿ ಪೂರ್ವ ಸಿದ್ಧತೆಗಳನ್ನು ನಡೆಸಿದ್ದು, ಅದರಂತೆ ಕ್ಯಾಂಟೀನ್‌ಗಳಲ್ಲಿ ಕಾರ್ಯ ನಿರ್ವಹಿಸುವ ಕೇಟರಿಂಗ್‌ ಸಿಬ್ಬಂದಿ ಹಾಗೂ ಕ್ಯಾಂಟೀನ್‌ನ ಮೇಲುಸ್ತುವರಿ ನೋಡಿಕೊಳ್ಳುವ ಜಂಟಿ ಆಯುಕ್ತರಿಗೆ ತರಬೇತಿ ನೀಡಲಾಗುತ್ತಿದೆ. ಕ್ಯಾಂಟೀನ್‌ಗೆ ಬರುವ ನಾಗರಿಕರಿಗೆ ನಗು ಮೊಗದಿಂದ ಊಟ ನೀಡಿ. ಸ್ವತ್ಛತೆಗೆ ಆದ್ಯತೆ ಇರಲಿ ಎಂದು ಸಲಹೆ ನೀಡಲಾಯಿತು. ನಗರದಲ್ಲಿ ಸುಮಾರು 100 ಕಡೆಗಳಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್‌ಗಳು ಆಗಸ್ಟ್‌ 16ರಂದು ಲೋಕಾರ್ಪಣೆಗೊಳ್ಳಲಿವೆ. ಯಾವುದೇ ಸಮಸ್ಯೆ ಎದುರಾಗದಂತೆ ಕ್ಯಾಂಟೀನ್‌ಗಳು
ಸಜ್ಜಾಗುತ್ತಿದ್ದು, ಆ ನಿಟ್ಟಿನಲ್ಲಿ ಕ್ಯಾಂಟೀನ್‌ಗಳಲ್ಲಿನ ಸ್ವತ್ಛತೆ, ಊಟ ವಿತರಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಕೇಟರಿಂಗ್‌ ಸಿಬ್ಬಂದಿಗೆ ಗುರುವಾರ ತರಬೇತಿ ನೀಡಲಾಯಿತು. ಇದೇ ವೇಳೆ ಪಾಲಿಕೆಯಿಂದ ಅಭಿವೃದ್ಧಿಪಡಿಸಲಾ ಗಿರುವ ಇಂದಿರಾ ಕ್ಯಾಂಟೀನ್‌ ಆ್ಯಪ್‌ ಬಳಕೆ ಕುರಿತು ವಲಯ ಜಂಟಿ ಆಯುಕ್ತರಿಗೆ ತರಬೇತಿ ನೀಡಲಾಗಿದೆ. ತಮ್ಮ ವಲಯದಲ್ಲಿನ ವಿವಿಧ ವಾರ್ಡ್‌ಗಳಲ್ಲಿನ ಅಡುಗೆ
ಮನೆಯಿಂದ ಕ್ಯಾಂಟೀನ್‌ಗಳಿಗೆ ಊಟ ರವಾನೆ ಸೇರಿದಂತೆ ಆ್ಯಪ್‌ ಬಳಕೆ ಕುರಿತು ಅವರಿಗೆ ಮಾಹಿತಿ ನೀಡಲಾಗಿದೆ. ಜತೆಗೆ ಕ್ಯಾಂಟೀನ್‌ಗಳಿಗೆ ಹೆಚ್ಚಿನ ಊಟದ ಅವಶ್ಯಕತೆಯಿದ್ದರೆ ಜಂಟಿ ಆಯುಕ್ತರು ಹೆಚ್ಚಿನ ಆಹಾರಕ್ಕಾಗಿ ಮನವಿ ಮಾಡುವುದು ಅಥವಾ ಆಹಾರ ಪ್ರಮಾಣ ಕಡಿಮೆ ಮಾಡುವುದು ಹೇಗೆ ಎಂಬ ಕುರಿತು ತರಬೇತಿಯಲ್ಲಿ ತಿಳಿಸಿಕೊಡಲಾಗಿದೆ. “ಇಂದಿರಾ ಕ್ಯಾಂಟೀನ್‌ಗೆ ಬರುವ ಗ್ರಾಹಕರಿಗೆ ನಗುಮೊಗದಿಂದ ಆಹಾರ ವಿತರಿಸಿ” ಎಂದು ಪಾಲಿಕೆಯ ವಿಶೇಷ ಆಯುಕ್ತ ಮನೋಜ್‌ ರಾಜನ್‌ ಅವರು ಸಿಬ್ಬಂದಿಗೆ ಸೂಚಿಸಿದ್ದಾರೆ. ಮಲ್ಲೇಶ್ವರ ಐಪಿಪಿ ಸೆಂಟರ್‌ನಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಕೇಟರಿಂಗ್‌ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‌ಗೆ ಬಡವರು ಹಾಗೂ ಮಧ್ಯಮ ವರ್ಗದವರು ಹೆಚ್ಚಾಗಿ ಬರುತ್ತಾರೆ. ಅವರಿಗೆ ಆಹಾರ
ಪೂರೈಸುವುದು ಒಂದು ಉತ್ತಮ ಕಾರ್ಯವೆಂದು ಭಾವಿಸಿ. ನಗುಮುಖದಿಂದ ಅವರಿಗೆ ಆಹಾರ ವಿತರಿಸಿ,’ ಎಂದು ತಿಳಿಸಿದರು.
ಕ್ಯಾಂಟೀನ್‌ಗೆ ಬರುವಂತಹ ಗ್ರಾಹಕರಿಗೆ ಬಿಸಿಯೂಟವನ್ನು ಪೂರೈಸಬೇಕು ಮತ್ತು ಕ್ಯಾಂಟೀನ್‌ನ್ನು ಸದಾ ಸ್ವತ್ಛವಾಗಿರಿಸಿಕೊಳ್ಳಬೇಕು. ಇದರೊಂದಿಗೆ ಅಧಿಕಾರಿಗಳು ಸಿಬ್ಬಂದಿ ಶುಚಿಯಾದ ವಸ್ತ್ರಗಳು ಹಾಗೂ ಆಹಾರ ಪೂರೈಕೆ ಮಾಡುವ ವೇಳೆ ಗ್ಲೌಸ್‌ಗಳನ್ನು
ಹಾಕಿಕೊಳ್ಳಬೇಕು. ಒಂದೊಮ್ಮೆ ಸಿಬ್ಬಂದಿ ಅವುಗಳನ್ನು ಉಲ್ಲಂ ಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಇಂದಿರಾ ಆ್ಯಪ್‌ ವಿಶೇಷತೆಗಳು:ಇಂದಿರಾ ಕ್ಯಾಂಟೀನ್‌ ಆ್ಯಪ್‌ ಮೂಲಕ ಸಾರ್ವಜನಿಕರು ತಾವಿರುವ ಜಾಗದ ಸುತ್ತಮುತ್ತಲಿನಲ್ಲಿರುವ ಐದು ಕ್ಯಾಂಟೀನ್‌ಗಳ ಮಾಹಿತಿಯನ್ನು ಪಡೆಯಬಹುದಾಗಿದೆ. ಇದರೊಂದಿಗೆ ಆ ದಿನದ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ “ಮೆನು” ಮಾಹಿತಿ ದೊರೆಯಲಿದೆ. ಇದರೊಂದಿಗೆ ಸಾರ್ವಜನಿಕರು ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಊಟ ಮಾಡಿದ ನಂತರ
ಕ್ಯಾಂಟೀನ್‌ನಲ್ಲಿನ ಆಹಾರದ ಗುಣಮಟ್ಟ ಹಾಗೂ ಸ್ವತ್ಛತೆ ಸೇರಿ ಯಾವುದೇ ಲೋಪಗಳಿದ್ದರೂ ಆ್ಯಪ್‌ ಮೂಲಕವೇ ದೂರು
ನೀಡಬಹುದಾಗಿದೆ. ಅದಕ್ಕೆ ಅನುಗುಣವಾಗಿ ಪಾಲಿಕೆಯ ಅಧಿಕಾರಿಗಳು ಕ್ಯಾಂಟೀನ್‌ನಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ.

ಟಾಪ್ ನ್ಯೂಸ್

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.