ದಲಿತ ಮನೆ ಮೇಲೆ ಕಿಡಿಗೇಡಿಗಳ ಪೆಟೊŠàಲ್‌ ದಾಳಿ

Team Udayavani, Aug 12, 2017, 3:47 PM IST

11svpur-ph-1 copy.jpg

ಶ್ರೀನಿವಾಸಪುರ: ಹಳೇ ವೈಷಮ್ಯದಿಂದ ಕಿಡಿಗೇಡಿಗಳ ಗುಂಪೊಂದು ದಲಿತ ಮನೆ ಮೇಲೆ ಪೆಟ್ರೋಲ್‌ ದಾಳಿ ನಡೆಸಿದ ಪರಿಣಾಮ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು ಮನೆಯ ಇತರ ಸದಸ್ಯರು ಪ್ರಾಣಾಪಾಯಾದಿಂದ ಪಾರಾಗಿರುವ ಘಟನೆ ನಡೆದಿದೆ.ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಶ್ರೀನಿವಾಸಪುರ ಪಟ್ಟಣದ ಜಗಜೀವನರಾಮ್‌ ಪಾಳ್ಯದ ಕೂಲಿಕಾರ್ಮಿಕ ವೇಣುಗೋಪಾಲ್‌ ಕುಟುಂಬ ದಾಳಿಗೆ ತುತ್ತಾಗಿದ್ದು, ಘಟನೆಯಿಂದ ವೇಣುಗೋಪಾಲ್‌ ಸಹೋದರ ನಾರಾಯಣಸ್ವಾಮಿ ಎರಡು ಕಾಲು ತೀವ್ರಗಾಗಿ ಸುಟ್ಟಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕೋಲಾರ ಆಸ್ಪತ್ರೆಗೆ ದಾಖಲಾಗಿದೆ. ಮನೆಯ ಬಾಗಿಲು ಹಾಗೂ ಕಿಟಕಿ ಗಾಜುಗಳನ್ನು ಒಡೆದು ಪೆಟ್ರೋಲ್‌ ಸುರಿದಿದ್ದರಿಂದ ಇಡೀ ಮನೆ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುವಾರ ಮನೆಯಲ್ಲಿ ಮಕ್ಕಳು ಸೇರಿದಂತೆ ಮನೆಯ ಸದಸ್ಯರು ನಿದ್ರೆಗೆ ಜಾರಿದ ನಂತರ ಕಿಡಿಗೇಡಿಗಳು ಪೆ‌ಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇನ್ನು ಘಟನೆಯಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಎಂ.ವೆಂಕಟರಾಮಪ್ಪ ಹಾಗೂ ಪಿಎಸ್‌ಐ .ವಿ.ಶ್ರೀಧರ್‌
ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಷುಲಕ ಕಾರಣಕ್ಕೆ ಗಲಾಟೆ: ವೇಣು ತನ್ನ ಸಂಬಂಧಿ ಜಮೀನಿನಲ್ಲಿ ಸೆಂಟ್ರಿಂಗ್‌ ಹಾಕುವ ವಸ್ತುಗಳನ್ನು ಇಟ್ಟಿದ್ದು, ಕಿಟ್ಟ ಎನ್ನುವರು ಇದೇ ಜಾಗದಲ್ಲಿ ಕೆಲವು ವಸ್ತುಗಳನ್ನು ಅಡ್ಡ ಹಾಕಿದ್ದಾರೆ. ಈ ವೇಳೆ ವಸ್ತುಗಳನ್ನು ತೆ‌ಗೆಯುವ ವಿಚಾರವಾಗಿ ಆಗಸ್ಟ್‌ 7 ರಂದು ಸಂಜೆ 7 ಗಂಟೆ ಸಮಯದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಘಟನೆಯಲ್ಲಿ ಮಧ್ಯ ಪ್ರವೇಶಿದ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ಎಂಬುವರು ತನ್ನ ಸಹಚರರೊಂದಿಗೆ ವೇಣುಗೋಪಾಲ್‌ ಮನೆಗೆ ನುಗ್ಗಿ ಗಲಾಟೆ ಮಾಡಿ ,ಮನೆಯ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದು, ದಾಳಿ ವೇಳೆ ಎರಡು ಗುಂಪಿನ ಸದಸ್ಯರಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ದ್ವೇಷದ ದಾಳಿ: ಇವೆಲ್ಲದರ ಮಧ್ಯೆ ಗುರುವಾರ ರಾತ್ರಿ ಸದರಿ ವಿಷಯದಲ್ಲಿ ಭಾಗಿಯಾದವರು ವೇಣು ಮನೆ ಮೇಲೆ ದಾಳಿ ನಡೆಸಿದ್ದು, ಪೆಟ್ರೋಲ್‌ ಸುರಿದು ಕೊಲೆ ಪ್ರಯತ್ನ ಮಾಡಿದ್ದಾರೆ ಎಂದು ಕೋಲಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಕುಟುಂಬದ ಸದಸ್ಯೆ ಅನಿತಾ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಹೇಳಿಕೊಂಡಿದ್ದಾರೆ. ಇದೀಗ ಅನಿತಾ ಕುಟುಂಬ ಸಂಪೂರ್ಣ ರಕ್ಷಣೆಗಾಗಿ ಜಿಲ್ಲಾ ಪೊಲೀಸ್‌ ರಕ್ಷಣಾಧಿಕಾರಿ ಅವರನ್ನುಕೋರಿದ್ದಾರೆ. ಘಟನೆ ನಡೆದ ಪ್ರದೇಶದಲ್ಲಿ ಉದ್ರಿಕ್ತ ಪರಿಸ್ಥಿತಿ ಇರುವುದರಿಂದ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ. ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದು, ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ರಾತ್ರಿ ಅಂಬೇಡ್ಕರ್‌ ಸೇವಾ ಸಮಿತಿ ಸಂಸ್ಥಾಪಕ ಜಿಲ್ಲಾಧ್ಯಕ್ಷ ಸಂದೇಶ್‌, ರಾಜ್ಯಾಧ್ಯಕ್ಷ ಪಿಳ್ಳಪ್ಪಹಾಗೂ ಸದಸ್ಯರು ಶ್ರೀನಿವಾಸಪುರಕ್ಕೆ ಭೇಟಿ ನೀಡಿ ನೊಂದ ಕುಟುಂಬಕ್ಕೆ ಧೈರ್ಯಹೇಳಿದ್ದಾರೆ  

ಟಾಪ್ ನ್ಯೂಸ್

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.