ನಮ್ಮ ಹಕ್ಕು ನೀಡದಿದ್ರೆ ಪ್ರತಿಭಟನೆ ತೀವ್ರ: ಎಚ್ಚರಿಕೆ
Team Udayavani, Aug 13, 2017, 11:40 AM IST
ಪಿರಿಯಾಪಟ್ಟಣ: ಕಳೆದ 10 ವರ್ಷಗಳಿಂದ ನಮ್ಮ ಅರಣ್ಯ ಭೂಮಿ ಹಕ್ಕಿನಡಿಯಲ್ಲಿ ವೈಯಕ್ತಿಕ ಮತ್ತು ಸಮುದಾಯಿಕ ಹಕ್ಕನ್ನು ನೀಡದೆ ಕಡೆಗಣಿಸಿದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಕರ್ನಾಟಕ ಅರಣ್ಯ ಮೂಲಭೂತ ಸಮುದಾಯ ಪ್ರತಿನಿಧಿ ಶೈಲೇಂದ್ರಕುಮಾರ್ ಎಚ್ಚರಿಕೆ ನೀಡಿದರು. ಪಟ್ಟಣದ ತಾಪಂ ಆವರಣದಲ್ಲಿ ರಾಜ್ಯ ಮೂಲ ಬುಡಕಟ್ಟುಗಳ ಒಕ್ಕೂಟದ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಮಾತನಾಡಿದರು.
ಅಷ್ಟೇ ಅಲ್ಲದೆ ತಾಲೂಕಿನ ಕರಡೀಬೊಕ್ಕೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ವಿನಾಕಾರಣ ಕಿರುಕುಳ ನೀಡುತ್ತಿದ್ದು, ಭೂ ಮಾಲೀಕರು ಶುಂಠಿ ಸೇರಿದಂತೆ ಇನ್ನಿತರ ಬೆಳೆಗಳನ್ನು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಬೆಳೆಯುತ್ತಿದ್ದರೂ ಮೌನ ತಾಳಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಗಿರಿಜನರು ತಮ್ಮ ದಿನಬಳಕೆಗಾಗಿ ಗುಡಿಸಲು ಬಳಿ ಬೆಳೆದಿರುವ ಗೆಡ್ಡೆ ಗೆಣಸನ್ನು ನಾಶಪಡಿಸಿ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸದರು.
ಮಲಗನಕೆರೆ ಗಿರಿಜನ ಹಾಡಿಯಲ್ಲಿ ಜೇನುಕುರುಬ ಸಮುದಾಯಕ್ಕೆ ಸೇರಿದ ಗೆಜ್ಜ ಎಂಬ ವ್ಯಕ್ತಿ ಗುಡಿಸಲನ್ನು ನಿರ್ಮಿಸಿಕೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳು ಅಡ್ಡಿ ಪಡಿಸುತ್ತಿರುವುದರಿಂದ ತನ್ನ ತಂದೆ ಬೆಳೆಸಿದ ಮಾವಿನ ಮರದ ಮೇಲೆ ಜೀವನ ಸಾಗಿಸುತ್ತಿದ್ದಾನೆ. ಇಂತಹ ಹಲವಾರು ರೀತಿಯ ತೊಂದರೆಗಳು ಆಗುತ್ತಿರುವ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತದ ಗಮನಕ್ಕೆ ತರಲಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.
ಆದ್ದರಿಂದ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯ ಪ್ರವೇಶಿಸಿ ನಮಗೆ ವೈಯಕ್ತಿಕ ಮತ್ತು ಸಮುದಾಯ ಹಕ್ಕುಪತ್ರಗಳನ್ನು ನೀಡದಿದ್ದರೆ ಜಂಬೂಸವಾರಿಗೆ ತೆರಳುವ ಗಜಪಡೆ ಜಾಥಾ ಕಾರ್ಯಕ್ರಮದಲ್ಲಿ ಮಾವುತರನ್ನು ಒಟ್ಟುಗೂಡಿಸಿ ಮುಖ್ಯಮಂತ್ರಿಗಳ ಎದುರಲ್ಲೇ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾಪಂ ಸದಸ್ಯೆ ಜಾನಕಮ್ಮ ಮಾತನಾಡಿ, ಕಳೆದ 10 ವರ್ಷಗಳಿಂದ ಗಿರಿಜನರಿಗೆ ಮೂಲಭೂತ ಸೌಕರ್ಯ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಾರತಮ್ಯ ಮಾಡುತ್ತಿದ್ದು ಜನರು ನರಕ ಅನುಭವಿಸುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟವರು ಗಮನ ಹರಿಸಿ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಧರಣಿ ಮುಂದುವರೆಸುವುದಾಗಿ ತಿಳಿಸಿದರು. ಸಮುದಾಯದ ಕಾರ್ಯಕರ್ತರಾದ ಪುಟ್ಟ, ಪರ್ವಯ್ಯ, ಶಿವಣ್ಣ, ಇಂದ್ರಮಣಿ, ಕಿರಣ್, ಮಂಜುಳಾ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.