ಉಡುಪಿ: ಪಂಜಿನ ಮೆರವಣಿಗೆ
Team Udayavani, Aug 14, 2017, 8:05 AM IST
ಉಡುಪಿ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಉಡುಪಿ ನಗರ ಘಟಕ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ರವಿವಾರ ಬೃಹತ್ ಪಂಜಿನ ಮೆರವಣಿಗೆ ನಡೆಸಿತು. ಜೋಡುಕಟ್ಟೆಯಿಂದ ಆರಂಭಗೊಂಡ ಮೆರವಣಿಗೆ ಬಸ್ ನಿಲ್ದಾಣವರೆಗೆ ಸಾಗಿತು.
ಬಳಿಕ ನಡೆದ ಸಭೆಯಲ್ಲಿ ವಿಹಿಂಪ ಜಿಲ್ಲಾಧ್ಯಕ್ಷ ಪಿ. ವಿಲಾಸ ನಾಯಕ್ ದಿಕ್ಸೂಚಿ ಭಾಷಣ ಮಾಡಿ ದೇಶವನ್ನು ಮತ್ತೆ ಒಂದುಗೂಡಿಸಬೇಕಾದ ಅಗತ್ಯವನ್ನು ಪ್ರತಿಪಾದಿಸಿದರು. ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ ಮೆಂಡನ್,
ಜಿಲ್ಲಾ ಸುರಕ್ಷಾ ಪ್ರಮುಖ್ ಅನಿಲ್ಕುಮಾರ್, ನಗರ ಸಂಚಾಲಕ ಲೋಕೇಶ್ ಶೆಟ್ಟಿಗಾರ್, ವಿಹಿಂಪ ನಗರಾಧ್ಯಕ್ಷ ಸಂತೋಷ ಸುವರ್ಣ ಉದ್ಯಾವರ ಮೊದಲಾದವರು ಉಪಸ್ಥಿತರಿದ್ದರು. ಮೆರವಣಿಗೆ ಆರಂಭದಲ್ಲಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಆರೆಸ್ಸೆಸ್ ಪ್ರಮುಖ ಟಿ. ಶಂಭು ಶೆಟ್ಟಿ, ಬಿಜೆಪಿ ನಾಯಕರಾದ ಯಶಪಾಲ್ ಸುವರ್ಣ, ಬಾಲಕೃಷ್ಣ ಶೆಟ್ಟಿ, ಸುಪ್ರಸಾದ ಶೆಟ್ಟಿ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.
ಚೀನಿ ವಸ್ತುಗಳಿಗೆ ಬೆಂಕಿ
ಚೀನಿ ವಸ್ತುಗಳಿಗೆ ಬೆಂಕಿ ಹಾಕುವ ಮೂಲಕ ಕಾರ್ಯ ಕ್ರಮವನ್ನು ಸಮಾಪನ ಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.