ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಅಪಘಾತ ವಡ್ಡರ್ಸೆಯ ಮಹಿಳೆ ಸಾವು
Team Udayavani, Aug 14, 2017, 8:15 AM IST
ಕೋಟ: ಕುಟುಂಬ ಸಮೇತ ಟವೆರೋ ವಾಹನದಲ್ಲಿ ಮಂತ್ರಾಲಯಕ್ಕೆ ತೀರ್ಥಯಾತ್ರೆ ತೆರಳುತ್ತಿದ್ದ ಸಂದರ್ಭ ಅಪಘಾತ ನಡೆದು ಮಹಿಳೆ ಮೃತಪಟ್ಟ ಘಟನೆ ರವಿವಾರ ರಾಯಚೂರಿನ ಮಾನ್ವಿಯಲ್ಲಿ ಸಂಭವಿಸಿದೆ.
ಕೋಟ ಸಮೀಪ ವಡ್ಡರ್ಸೆಯ ನಿವಾಸಿ ಸುಗುಣ ಶೆಟ್ಟಿ (40) ಮೃತಪಟ್ಟ ಮಹಿಳೆ. ಅವರು ನೇರಳಕಟ್ಟೆಯಲ್ಲಿರುವ ಗಂಡ ಶಂಕರ ಶೆಟ್ಟಿಯವರ ಕುಟುಂಬದವರೊಂದಿಗೆ ಒಂಬತ್ತು ಮಂದಿ ಜತೆಯಾಗಿ ಶನಿವಾರ ಸಂಜೆ ಮಂತ್ರಾಲಯ ಯಾತ್ರೆಗೆ ಹೊರಟಿದ್ದು, ರವಿವಾರ ಬೆಳಗಿನ ಜಾವ ರಾಯಚೂರು ಬಳಿಯ ಮಾನ್ವಿ ಎಂಬಲ್ಲಿ ಇವರು ಪ್ರಯಾಣಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಈ ಘಟನೆ ನಡೆದಿದೆ.
ಪ್ರಯಾಣಿಕರಲ್ಲಿ ಆನಂದ ಶೆಟ್ಟಿ, ಚಂದ್ರಮತಿ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದು, ರಾಯಚೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರಿಗೆ ಸಣ್ಣ ಪುಟ್ಟ ಗಾಯವಾಗಿದೆ ಹಾಗೂ ವಾಹನದ ಚಾಲಕ ಸಾಲಿಗ್ರಾಮ,ಕಾರ್ಕಡದ ಮಹೇಶ್‌ಗೆ ಕೂಡ ಸಣ್ಣ-ಪುಟ್ಟ ಗಾಯಗಳಾಗಿದೆ.
ಸುಗುಣಾ ಶೆಡ್ತಿ ತನ್ನ ಮನೆ ವಡ್ಡರ್ಸೆಯಲ್ಲಿ ಕೃಷಿ ಕಾರ್ಯ ನಿರ್ವಹಿಸುತ್ತಿದ್ದರು. ಪತಿ ಶಂಕರ ಶೆಟ್ಟಿ ಶಿವಮೊಗ್ಗದಲ್ಲಿ
ಹೋಟೆಲ್ ಕೆಲಸ ನಿರ್ವಹಿಸ್ತುತಿದ್ದರು. ಮೃತರು ಪತಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅವರ ಕುಟುಂಬದವರು ರಾಯಚೂರಿಗೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.