![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 14, 2017, 12:04 PM IST
ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 71 ನೇ ಸ್ವಾತಂತ್ರ್ಯ ದಿನಾಚರಣೆಗೆ ಭರದ ಸಿದ್ಧತೆ ನಡೆದಿದೆ. ಯಾವುದೇ ಕಟ್ಟೆಚ್ಚರ ಇಲ್ಲದಿದ್ದರೂ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯವನ್ನುದ್ದೇಶಿಸಿ ಸ್ವಾತಂತ್ರೊéàತ್ಸವ ಭಾಷಣ ಮಾಡಲಿದ್ದಾರೆ. ದೇಶಭಕ್ತಿಗೀತೆ, ನಾಡಗೀತೆ ,ರೈತಗೀತೆಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭದ ಮೆರಗು ಹೆಚ್ಚಿಸಲಿವೆ ಎಂದು ಬಿಬಿಎಂಪಿ ಆಯುಕ್ತ ಹಾಗೂ ಸಮಾರಂಭದ ಆಯೋಜನಾ ಸಮತಿ ಅಧ್ಯಕ್ಷ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಭಾನುವಾರ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಮತ್ತು ಭದ್ರತೆ ಕುರಿತು ಎನ್.ಮಂಜುನಾಥ ಪ್ರಸಾದ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ವಿ.ಶಂಕರ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. “ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಗೆ ವೇದಿಕೆ ನಿರ್ಮಾಣ, ಶಾಮಿಯಾನ, ಬ್ಯಾರಿಕೇಡಿಂಗ್, ಆಸನ ವ್ಯವಸ್ಥೆ ಹಾಗೂ ಧ್ವಜಾರೋಹಣಕ್ಕೆ ಧ್ವಜ ಸ್ತಂಭ ನಿರ್ಮಿಸಲಾಗಿದೆ.
ಜತೆಗೆ ವೇದಿಕೆಗೆ ಅಲಂಕಾರಿಕ ಬ್ರಾಸ್ ಪರಿಕರಗಳನ್ನು ಅಳವಡಿಕೆ ಮಾಡಲಾಗಿದೆ,’ ಎಂದು ತಿಳಿಸಿದರು. “ಆಗಸ್ಟ್ 15ರಂದು ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿಗಳು ಸಮಾರಂಭಕ್ಕೆ ಆಗಮಿಸುವರು. ಭಾರತೀಯ ರಕ್ಷಣಾ ಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು ಅವರಿಗೆ ಪರಿಚಯಿಸಲಾಗುತ್ತದೆ. ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ. ಇದೇ ವೇಳೆ ಹೆಲಿಕಾಪ್ಟರ್ ಮೂಲಕ ರಾಷ್ಟ್ರಧ್ವಜಕ್ಕೆ ಪುಷ್ಪಾರ್ಚನೆ ಮಾಡಲಾಗುತ್ತದೆ,’ ಎಂದರು.
“ನಂತರ ಪೆರೇಡ್ ವೀಕ್ಷಿಸಲಿರುವ ಮುಖ್ಯಮಂತ್ರಿಗಳು ಗೌರವರಕ್ಷೆ ಸ್ವೀಕರಿಸುವರು. ಆಮೇಲೆ ನಾಡಿನ ಜನತೆ ಸ್ವಾತಂತ್ರೋತ್ಸವದ ಸಂದೇಶ ನೀಡಲಿದ್ದಾರೆ. ಪಥಸಂಚಲನದಲ್ಲಿ ಕೇರಳ ಪೊಲೀಸ್, ಸ್ಕೌಟ್ಸ್ ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳೊಂದಿಗೆ ಕವಾಯಿತು ಮತ್ತು ಬ್ಯಾಂಡ್‌ನ ಒಟ್ಟು 34 ತುಕಡಿಗಳಲ್ಲಿ ಸುಮಾರು 1,190 ಮಂದಿ ಭಾಗವಹಿಸಲಿದ್ದಾರೆ,’ ಎಂದು ಹೇಳಿದರು.
ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 2700 ಮಕ್ಕಳು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ಜೀವರಕ್ಷಕ ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ ಎಂದರು. ಸಮಾರಂಭದಲ್ಲಿ ತುರ್ತು ಸನ್ನಿವೇಶ ನಿಭಾಯಿಸಲು ವೈದ್ಯಕೀಯ ಸವಲತ್ತುಗಳನ್ನು ನಿಯೋಜಿಸಲಾಗಿದೆ ಎಂದರು.
ನಂತರ ಮಾತನಾಡಿದ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಸಮಾರಂಭದ ಭದ್ರತೆಗೆ 9 ಡಿಸಿಪಿ, 16 ಎಸಿಪಿ, 51 ಇನ್ಸ್‌ಪೆಕ್ಟರ್, 91 ಸಬ್ ಇನ್ಸ್‌ಪೆಕ್ಟರ್‌ಗಳನ್ನು ಹಾಗೂ ಮೈದಾನದ ಬಳಿ 8 ಸಶಸ್ತ್ರ ಪೊಲೀಸ್ ತುಕಡಿ ಹಾಗೂ 40 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಮೈದಾನದಲ್ಲಿ 50 ಸಿಸಿಟಿವಿ ಕ್ಯಾಮೆರಾ ಹಾಗೂ 4 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.
ಆಸನ ವ್ಯವಸ್ಥೆಯ ವಿವರ
ಪ್ರವೇಶ ದ್ವಾರ ಆಸನ ವ್ಯವಸ್ಥೆ ಆಸನಗಳ ಸಂಖ್ಯೆ
ಜಿ2 ಅತಿಗಣ್ಯ ವ್ಯಕ್ತಿಗಳು 2500
ಜಿ1 ಗಣ್ಯ ವ್ಯಕ್ತಿಗಳು, ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಇಲಾಖೆಯ ಅಧಿಕಾರಿಗಳು, ಪತ್ರಿಕಾ ಪ್ರತಿನಿಧಿಗಳು 2500
ಜಿ3 ಇತರೆ ಎಲ್ಲ ಇಲಾಖೆಯ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು, ಬಿಎಸ್‌ಎಫ್ ಅಧಿಕಾರಿಗಳು 3000
ಜಿ4 ಸಾರ್ವಜನಿಕರಿಗಾಗಿ 4000
ಪಾರ್ಕಿಂಗ್ ವ್ಯವಸ್ಥೆ
ಬಿಳಿ ಕಾರ್ ಪಾಸ್ (ದ್ವಾರ-2): ಗಣ್ಯರು, ಮಿಲಿಟರಿ ಅಧಿಕಾರಿಗಳು, ಕಬ್ಬನ್ ರಸ್ತೆಯಲ್ಲಿ ಸಂಚರಿಸಿ ಪ್ರವೇಶ ದ್ವಾರ-2ರ ಮುಖಾಂತರ ಒಳ ಪ್ರವೇಶಿಸಬೇಕು. ನಂತರ ಬಲ ತಿರುವು ಪಡೆದು ಪೆರೇಡ್ ಮೈದಾನದ ಪಶ್ಚಿಮ ಭಾಗದಲ್ಲಿ ವಾಹನಗಳಿಗೆ ಮೀಸಲಿರಿಸಿರುವ ಜಾಗದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು.
ಹಳದಿ ಕಾರ್ ಪಾಸ್ (ದ್ವಾರ-1): ಎಲ್ಲ ಆಹ್ವಾನಿತರು ಕಬ್ಬನ್ ರಸ್ತೆಯಲ್ಲಿ ಸಂಚರಿಸಿ ಮಾಣಿಕ್ ಷಾ ಪೆರೇಡ್ ಮೈದಾನಕ್ಕೆ ಉತ್ತರಾಭಿಮುಖವಾಗಿ ಪ್ರವೇಶ ದ್ವಾರ 1ರ ಮೂಲಕ ಒಳ ಪ್ರದೇಶಿಸಬೇಕು. ಮೈದಾನದ ಉತ್ತರ-ಪಶ್ಚಿಮ ಭಾಗದಲ್ಲಿ ಕಲ್ಪಿಸಲಾಗಿರುವ ಜಾಗದಲ್ಲಿ ವಾಹನಗಳ ನಿಲುಗಡೆ ಮಾಡಬೇಕು.
ಪಿಂಕ್ ಪಾಸ್ ಮತ್ತು ಹಸಿರು ಪಾಸ್: ಆಹ್ವಾನಿತರು ತಮ್ಮ ವಾಹನಗಳನ್ನು ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್‌ನಿಂದ ಕೆ.ಆರ್.ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಕಾಮರಾಜ ರಸ್ತೆ ಆರ್ಮಿ ಶಾಲೆ ಮುಂಭಾಗ, ಮೈನ್ ಗಾರ್ಡ್ ಕ್ರಾಸ್ ರಸ್ತೆ, ಸಫೀನ ಪ್ಲಾಜಾ ಬಳಿ ನಿಲುಗಡೆ ಮಾಡಬಹುದಾಗಿದೆ. ಪಿಂಕ್ ಪಾಸ್ ಹೊಂದಿರುವವರು ಗೇಟ್ ಸಂಖ್ಯೆ 3ರ ಮೂಲಕ ಹಾಗೂ ಹಸಿರು ಪಾಸ್ ಹೊಂದಿರುವವರು ಗೇಟ್ ಸಂಖ್ಯೆ 4 ಮತ್ತು 5ರಲ್ಲಿ ಕಾಲ್ನಡಿಗೆ ಮೂಲಕ ಒಳಪ್ರವೇಶಿಸಬೇಕು.
ಸಾಂಸ್ಕೃತಿಕ ಕಾರ್ಯಕ್ರಮ ವಿವರಗಳು
– ನಾಡಗೀತೆ ಮತ್ತು ರೈತಗೀತೆ
– ವೀರ ಸಿಂಧೂರ ಲಕ್ಷ್ಮಣ
– ವಸುದೈವ ಕುಟುಂಬಕಂ
– ಜೈ ಜವಾನ್ ಜೈ ಕಿಸಾನ್, ಶಾಂತಿ-ಕ್ರಾಂತಿ
– ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಹಾನ್ ದೇಶಭಕ್ತ ಮುಂಡರ್ಗಿ ಭೀಮರಾಯ
– ಶ್ವೇತ ಅಶ್ವ- 30 ಜನ ಮಿಲಿಟರಿ ಸಿಬ್ಬಂದಿಯಿಂದ ಮೋಟಾರು ಸೈಕಲ್ ಪ್ರದರ್ಶನ
ಸ್ವಾತಂತ್ರೊತ್ಸವ ಸಮಾರಂಭಕ್ಕಾಗಿ ಸಂಚಾರದಲ್ಲಿ ಬದಲಾವಣೆ
ಸಮಾರಂಭದ ಹಿನ್ನೆಲೆಯಲ್ಲಿ ಬೆಳಗ್ಗೆ 8.30ರಿಂದ ಬೆಳಗ್ಗೆ 10.30ರವರೆಗೆ ಕಬ್ಬನ್ ರಸ್ತೆಯಲ್ಲಿ ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಲಾಗಿದೆ.
1) ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫೆಂಟ್ರಿ ರಸ್ತೆ – ಸಫೀನಾ ಪ್ಲಾಜಾ – ಎಡ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ – ಆಲೀಸ್ ಸರ್ಕಲ್ – ಡಿಸ್ಪೆನ್ಸರಿ ರಸ್ತೆ – ಕಾಮರಾಜ್ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
2) ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿಆರ್‌ವಿ ಜಂಕ್ಷನ್ ಕಡೆಗೆ ಬರುವ ವಾಹನಗಳು, ಕಾಮರಾಜ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‌ನಲ್ಲಿ ಕಾಮರಾಜ ರಸ್ತೆಗೆ ಎಡತಿರುವು ಪಡೆದು, ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು, ಎಂ.ಜಿ.ರಸ್ತೆಯ ಮುಖಾಂತರ ಬಂದು, ಅನಿಲ್ ಕುಂಬ್ಳೆ ವೃತ್ತದ ಮೂಲಕ ಸಾಗಬೇಕು.
3) ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ರಸ್ತೆಯಲ್ಲಿ ಸಾಗಿ ಬಲಕ್ಕೆ ತಿರುವು ಪಡೆದು-ಇನ್‌ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ – ಎಡಕ್ಕೆ ತೆರಿವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್ – ಡಿಸ್ಪೆನ್ಸರಿ ರಸ್ತೆ – ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್‌ಗೆ ಸಾಗಬೇಬಹುದಾಗಿದೆ.
4) ಕಾಫಿ ಬೋರ್ಡ್ ಕಡೆಯಿಂದ ಬಂದು ಬಿಆರ್‌ವಿ ಜಂಕ್ಷನ್ ಕಡೆ ಹೋಗುವ ವಾಹನಗಳು ಟ್ರಾಫಿಕ್ ಹೆಡ್‌ಕಾÌರ್ಟರ್ ಬಳಿ ನೇರವಾಗಿ ಇನ್‌ಫೆಂಟ್ರಿ ರಸ್ತೆಯಲ್ಲಿ ಸಾಗಿ ಸಫೀನಾ ಪ್ಲಾಜಾ ಬಳಿ ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ – ಆಲಿ ಸರ್ಕಲ್ -ಡಿಸ್ಪೆನ್ಸರಿ ರಸ್ತೆ – ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
5) ಎಂ.ಜಿ.ರಸ್ತೆಯಲ್ಲಿ ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ವೃತ್ತದಿಂದ ಬಂದು, ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ಗೆ ಹೋಗುವ ವಾಹನಗಳು ನೇರವಾಗಿ ಎಂ.ಜಿ.ರಸ್ತೆಯಲ್ಲಿ ಸಾಗಿ ಅನಿಲ್‌ಕುಂಬ್ಳೆ ವೃತ್ತದ ಬಳಿಗೆ ಬಂದು, ಬಲ ತಿರುವು ಪಡೆದು – ಬಿಆರ್‌ವಿ ಜಂಕ್ಷನ್‌ನಲ್ಲಿ ನೇರವಾಗಿ ಸಂಚರಿಸಿ ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಮುಂದೆ ಸಾಗಬಹುದು.
You seem to have an Ad Blocker on.
To continue reading, please turn it off or whitelist Udayavani.