ದೇಶಾದ್ಯಂತ ಸಿಎ ಹೊಸ ಪಠ್ಯಕ್ರಮ ಜಾರಿ: ಶ್ರೀನಿವಾಸ


Team Udayavani, Aug 14, 2017, 12:41 PM IST

hub2.jpg

ಹುಬ್ಬಳ್ಳಿ: ದೇಶಾದ್ಯಂತ ಜುಲೈ 1ರಿಂದ ಜಾರಿಗೊಂಡಿರುವ ಲೆಕ್ಕ ಪರಿಶೋಧಕರ (ಸಿಎ) ಹೊಸ ಪಠ್ಯಕ್ರಮ ಅಂತಾರಾಷ್ಟ್ರೀಯ ಮಟ್ಟದಾಗಿದ್ದು, ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ತಗಲುವುಷ್ಟು ವೆಚ್ಚದಲ್ಲೇ ಮೂರು ವರ್ಷದ ಈ ಕೋರ್ಸ್‌ ಅನ್ನು ಪೂರ್ಣಗೊಳಿಸಬಹುದೆಂದು ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ದಕ್ಷಿಣ ಭಾರತ ಪ್ರಾದೇಶಿಕ ಪರಿಷತ್‌ (ಎಸ್‌ಐಆರ್‌ಸಿ-ಸಿರ್ಕ್‌) ಚೇರನ್‌ ಸಿ.ಎಸ್‌. ಶ್ರೀನಿವಾಸ ತಿಳಿಸಿದರು. 

ರವಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಹೊಸ ಪಠ್ಯಕ್ರಮದಿಂದ ಲೆಕ್ಕ  ಪರಿಶೋಧಕರು ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ. ನಗರ ಪ್ರದೇಶದ ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣಕ್ಕಾಗಿ ವರ್ಷಕ್ಕೆ ಕನಿಷ್ಠ 75,000 ರೂ.ದಿಂದ 1 ಲಕ್ಷ ರೂ. ಶುಲ್ಕ ಪಾವತಿಸಬೇಕು.

ಆದರೆ ಮೂರು ವರ್ಷಗಳ ಸಿಎ ಕೋರ್ಸ್‌ಗೆ 75-85 ಸಾವಿರ ರೂ. ವೆಚ್ಚವಾಗಲಿದೆ. ಇನ್ನುಳಿದ ಶಿಕ್ಷಣಕ್ಕೆ ಹೋಲಿಸಿದರೆ ಸಿಎ ಕೋರ್ಸ್‌ ತುಂಬಾ ಕಡಿಮೆ ಖರ್ಚಿನದ್ದಾಗಿದೆ ಎಂದರು. ಪ್ರತಿ 10-12 ವರ್ಷಕ್ಕೊಮ್ಮೆ ಪಠ್ಯಕ್ರಮ ಬದಲಾಗುವುದು ಸಾಮಾನ್ಯ ಪ್ರಕ್ರಿಯೆ. ನೂತನ ಪಠ್ಯಕ್ರಮದಲ್ಲಿ ಸಿಪಿಟಿ ಸೇರಿದಂತೆ ಫೌಂಡೇಶನ್‌, ಇಂಟರ್‌ಮಿಡಿಯಟ್‌, ಫೈನಾನ್ಸ್‌ ಕೋರ್ಸ್‌ ಪರಿಚಯಿಸಲಾಗಿದೆ.

ನಾಲ್ಕು ಗ್ರುಪ್‌ ಮಾಡಲಾಗಿದೆ. ವಿದ್ಯಾರ್ಥಿಗಳು ತೇರ್ಗಡೆಗೊಳ್ಳಲು ಒಂದು ಗ್ರುಪ್‌ನ ನಾಲ್ಕು ವಿಷಯಗಳಲ್ಲಿ ಕನಿಷ್ಠ 40 ಅಂಕ ಪಡೆಯಬೇಕು. ಅಗ್ರೀಗೇಟ್‌ ಶೇ.50 ಮಾಡಬೇಕು. ಈ ವರ್ಷ ಎಕನಾಮಿಕ್ಸ್‌ ಫೈನಾನ್‌ವೆಂಬ ಹೊಸ ವಿಷಯ ಪರಿಚಯಿಸಿರುವುದು ವಿಶೇಷವಾಗಿದೆ. ಮೂರು ವರ್ಷಗಳ ವ್ಯಾಸಂಗದ ಬಳಿಕ ವಿದ್ಯಾರ್ಥಿಗಳು ಲೆಕ್ಕ ಪರಿಶೋಧಕರ ಬಳಿ ಅಭ್ಯಸಿಸಬೇಕಾಗುತ್ತದೆ (ಪ್ರಾಕ್ಟಿಸ್‌). 

ಈ ವೇಳೆ ವಿದ್ಯಾರ್ಥಿಗಳಿಗೆ ಕಲಿಕಾ ವಸ್ತು ಹಾಗೂ ಮೂರು ವರ್ಷ ಅಂದಾಜು 45-40 ಸಾವಿರ ರೂ. ಶಿಷ್ಯವೇತನ ನೀಡಲಾಗುತ್ತದೆ. ಸಿಎ ಕೋರ್ಸ್‌ವೆಂದರೆ ತುಂಬಾಕಷ್ಟಕರವೆಂಬ ಭಾವನೆ ಬಹಳಷ್ಟು ಜನರಲ್ಲಿದ್ದರೂ ಅದು ಅಸಾಧ್ಯವೆನಲ್ಲ. ಶ್ರಮವಹಿಸಿ ಅಧ್ಯಯನ ಮಾಡಿದರೆ ಯಶಸ್ಸು ಖಚಿತ. ಸಿಎ ಕೋರ್ಸ್‌ ಶ್ರೀಮಂತರಿಗೆ ಮಾತ್ರವಲ್ಲ, ಬಡವರಿಗೂ ಸಹಕಾರಿ ಆಗಲಿದೆ.

ಬಡತನದಿಂದ ಬಂದವರು ಕಷ್ಟಪಟ್ಟು ಓದಿ ಉತ್ತೀರ್ಣವಾದ ಉದಾಹರಣೆಗಳು ಸಾಕಷ್ಟಿವೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಎಲ್ಲ ಸಹಕಾರ ನೀಡಲಾಗುತ್ತದೆ ಎಂದರು. ದೇಶದಲ್ಲಿ ಪ್ರಸ್ತುತ 2.70 ಲಕ್ಷ ಲೆಕ್ಕ ಪರಿಶೋಧಕರಿದ್ದು, ಅದರಲ್ಲಿ ದಕ್ಷಿಣ ಪ್ರಾಂತ್ಯದಲ್ಲಿ 53 ಸಾವಿರ ಇದ್ದಾರೆ.

8 ಲಕ್ಷ ವಿದ್ಯಾರ್ಥಿಗಳು ಸಿಎ ಕಲಿಯುತ್ತಿದ್ದಾರೆ. ದೇಶಾದ್ಯಂತ ಐಸಿಎಐನ 163 ಶಾಖೆಗಳಿದ್ದು, ದಕ್ಷಿಣ ಪ್ರಾಂತ್ಯದಲ್ಲಿ 45 ಶಾಖೆಗಳಿವೆ. ಸದ್ಯ ಸಿಎಗಳ ಕೊರತೆಯಿಲ್ಲದಿದ್ದರೂ ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚಿದ್ದಂತೆ ಸಿಎಗಳ ಸಂಖ್ಯೆಯೂ ವೃದ್ಧಿಯಾಗಬೇಕಾಗುತ್ತದೆ. ಈಗ ದೇಶದಲ್ಲಿ ಜಿಎಸ್‌ಟಿ ಜಾರಿಯಾಗಿದ್ದು, ಇದರಿಂದಾಗಿ ಸಿಎಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆಗಳೇ ಹೆಚ್ಚು ಎಂದರು.

ಐಸಿಎಐದ ಕೇಂದ್ರ ಕೌನ್ಸಿಲ್‌ನ ಸದಸ್ಯ ಬಾಬು ಅಬ್ರಾಹಂ ಕಲ್ಲಿವಯಲಿಲ್‌, ಸಿರ್ಕ್‌ ಹುಬ್ಬಳ್ಳಿ ಶಾಖೆಯ ಮಾಜಿ ಅಧ್ಯಕ್ಷ ಚಂದ್ರಶೇಖರ ಢವಳಗಿ, ನಂದರಾಜ ಖಟಾವಕರ, ಕೆ.ವಿ. ದೇಶಪಾಂಡೆ, ಪೊನ್ನಾರಾಜ, ಮಧುಸೂದನ ಪಿಸೆ, ರಾಘವೇಂದ್ರ ಜೋಶಿ, ವೈ.ಎಂ. ಖಟಾವಕರ ಸುದ್ದಿಗೋಷ್ಠಿಯಲ್ಲಿದ್ದರು.   

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.