ಬಿಜೆಪಿ ಮಹಾ ನಿಲುವು ಸ್ಪಷ್ಟಪಡಿಸಲಿ
Team Udayavani, Aug 14, 2017, 12:41 PM IST
ಧಾರವಾಡ: ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೋಮವಾರ ಸಂಜೆಯೊಳಗೆ ಮಹದಾಯಿ ಸಮಸ್ಯೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಶ್ರೀರಾಮಸೇನಾ ರಾಷ್ಟ್ರಾಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರವೇ ಇದೆ. ಹೀಗಾಗಿ ಮಹದಾಯಿ ವಿವಾದದ ಚೆಂಡು ಇದೀಗ ಬಿಜೆಪಿ ಅಂಗಳಕ್ಕೆ ಬಿದ್ದಿದೆ. ಭೀಕರ ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಪರಿಹಾರ ದೊರಕಿಸುವ ಕೆಲಸ ಆಗಬೇಕಿದ್ದು, ಈ ಎರಡೂ ವಿಷಯಗಳ ಕುರಿತು ಅಮಿತ್ ಶಾ ರಾಜ್ಯದ ರೈತರಿಗೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಎರಡು ದಿನಗಳಿಂದ ಚುನಾವಣೆ ಉದ್ದೇಶದಿಂದ ರಾಜ್ಯ ಪ್ರವಾಸ ಕೈಗೊಂಡಿದ್ದಾರೆಯೇ ಹೊರತು ಬರಗಾಲ, ರೈತರ ಸ್ಥಿತಿ ಮತ್ತು ಮಹದಾಯಿ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ. ಇದೀಗ ಗೋವಾ ಸರ್ಕಾರ ಪರಿಸರ ಹಾನಿ ನೆಪವೊಡ್ಡಿ ಕರ್ನಾಟಕಕ್ಕೆ ನೀರು ಕೊಡುವುದಿಲ್ಲ ಎಂಬ ಸ್ಪಷ್ಟ ಹೇಳಿಕೆ ನೀಡಿದೆ.
ಚುನಾವಣೆ ಪೂರ್ವದಲ್ಲಿ ಒಂದು ರೀತಿ ಹೇಳಿಕೆ ನೀಡಿದ್ದ ಗೋವಾ ಬಿಜೆಪಿ ಮುಖಂಡರು ಅಧಿಕಾರಕ್ಕೆ ಬಂದ ನಂತರ ನಾಲಿಗೆ ಹೊರಳಿಸುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಈ ವಿಷಯದಲ್ಲಿ ರಾಹುಲ್ ಗಾಂಧಿ ಕಾಳಜಿ ತೋರುತ್ತಿಲ್ಲ.
ಮಹದಾಯಿ ಸಮಸ್ಯೆ ಸಂಬಂಧ ಅಮಿತ್ ಶಾ ಅವರಿಗೂ ಪತ್ರ ಬರೆಯಲಾಗಿದೆ. ರಾಜಕೀಯ ನಾಟಕ ನಿಲ್ಲಿಸಬೇಕು. ಬಿಜೆಪಿ ಮುಖಂಡರು ಮಾತು ನಿಲ್ಲಿಸಿ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಕಳೆದ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರಿಗೆ ತೋರಿದ ದಾರಿಯನ್ನೇ ಜನರು ಬಿಜೆಪಿಗೆ ತೋರಲಿದ್ದಾರೆ ಎಂದು ಎಚ್ಚರಿಸಿದರು.
ಚುನಾವಣೆ ಬಹಿಷ್ಕರಿಸಿ: ಮಹದಾಯಿ ಸಮಸ್ಯೆ ಪರಿಹರಿಸುವಲ್ಲಿ ಬಿಜೆಪಿ, ಕಾಂಗ್ರೆಸ್ ವಿಫಲವಾಗಿದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ನಾಲ್ಕು ಜಿಲ್ಲೆಗಳ 11 ತಾಲೂಕಿನ ರೈತರು ಚುನಾವಣೆ ಬಹಿಷ್ಕರಿಸಬೇಕು. ನಾಲ್ಕು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಈವರೆಗೂ ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ. ಹೀಗಾಗಿ ಜನರು ತಕ್ಕ ಪಾಠ ಕಲಿಸಬೇಕು ಎಂದರು.
ಅನ್ಸಾರಿ ಕ್ಷಮೆ ಯಾಚಿಸಲಿ: ಉಪರಾಷ್ಟ್ರಪತಿ ಹುದ್ದೆಯಿಂದ ಇತ್ತೀಚೆಗೆ ನಿವೃತ್ತಿ ಹೊಂದಿದ ಹಮೀದ್ ಅನ್ಸಾರಿಯವರು ದೇಶದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ದೇಶದ ಕ್ಷಮೆ ಯಾಚಿಸಬೇಕು. ಎರಡು ಅವಧಿ ಉನ್ನತ ಹುದ್ದೆ ಅಧಿಕಾರ ಅನುಭವಿಸಿದವರು ದೇಶದ ಬಗ್ಗೆ ಕಾಳಜಿ, ಗೌರವ ಇದ್ದರೆ ಇಂತಹ ಹೇಳಿಕೆ ನೀಡುತ್ತಿರಲಿಲ್ಲ.
ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಹಿಂದುಗಳೇ ಸುರಕ್ಷಿತವಾಗಿಲ್ಲ. ಕೇರಳದಲ್ಲಿ ಹತ್ತು ವರ್ಷದಲ್ಲಿ ಅಂದಾಜು 800, ಕರ್ನಾಟಕದಲ್ಲಿ ಎರಡು ವರ್ಷದಲ್ಲಿ 21 ಹಿಂದೂಗಳ ಹತ್ಯೆಯಾಗಿರುವುದೇ ಸಾಕ್ಷಿ. ಈ ಅಂಶಗಳನ್ನು ಅನ್ಸಾರಿ ಅವರು ಗಮನಿಸಿಲ್ಲವೇ ಎಂದು ಪ್ರಶ್ನಿಸಿದರು.
ಜಮ್ಮು-ಕಾಶ್ಮೀರದಲ್ಲಿ ಏಳು ಲಕ್ಷ ಹಿಂದೂಗಳನ್ನು ಹೊರಹಾಕಿದರು. ಮುಸ್ಲಿಂ ರಾಷ್ಟ್ರಗಳಲ್ಲಿ ಸಿಗದ ಅಧಿಕಾರ, ಅವಕಾಶಗಳನ್ನು ಭಾರತದಲ್ಲಿ ಮುಸ್ಲಿಮರಿಗೆ ನೀಡಲಾಗಿದೆ. ಆದರೂ ಇಂತಹ ಮೂರ್ಖತನದ ಹೇಳಿಕೆ ನೀಡುವುದು ಸರಿಯಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಈಶ್ವರಗೌಡ ಪಾಟೀಲ, ಮಂಜುನಾಥ ಕವಳಿ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.