ವೀರನಾರಿಯರ ಸಬಲೀಕರಣದಲ್ಲಿ ವಸಂತರತ್ನ ಫೌಂಡೇಷನ್‌ ಆಫ್ ಆರ್ಟ್‌

Team Udayavani, Aug 15, 2017, 11:12 AM IST

15-STATE-10.jpg

ಬೆಂಗಳೂರು: ದೇಶದ ರಕ್ಷಣೆಗೆ ಯೋಧರು ಮಾಡುವ ತ್ಯಾಗ, ಬಲಿದಾನದ ಕುರಿತು ನಾವು ಹೆಮ್ಮೆ ಪಡುತ್ತೇವೆ. ಯೋಧನಿಗೆ ದೇಶವೇ ನಮಿಸುತ್ತದೆ, ಆದರೆ ದೇಶಕ್ಕಾಗಿ ಪತಿಯನ್ನು ಕಳೆದುಕೊಂಡ ಯೋಧನ ಮುಗ್ಧ ಪತ್ನಿಯ ತ್ಯಾಗ, ಆಕೆ ತನ್ನ ಜೀವನದಲ್ಲಿ ಎದುರಿಸುವ ಸಂಕಷ್ಟಗಳು ಯಾರ ಗಮನಕ್ಕೂ ಬಾರದೇ ಹೋಗುವ ಸಂದರ್ಭಗಳೇ ಹೆಚ್ಚು. ಇಂಥ ವೀರನಾರಿಯರ ಶ್ರೇಯೋಭಿವೃದ್ಧಿಗಾಗಿ ಸಂಸ್ಥೆಯೊಂದು ಸದ್ದಿಲ್ಲದೇ ದುಡಿಯುತ್ತಿದೆ. ಸಂಸ್ಥೆಯ ಹೆಸರು “ವಸಂತರತ್ನ ಫೌಂಡೇಷನ್‌ ಫಾರ್‌ ಆರ್ಟ್‌’. ಹುತಾತ್ಮ ಯೋಧರ ಪತ್ನಿಯರ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ, ಸಾಧ್ಯವಾದಷ್ಟೂ ಅಸಹಾಯಕ ವೀರನಾರಿಯರನ್ನು ತಲುಪಿಸುವ ಕಾರ್ಯದಲ್ಲಿ ಈ ಸಂಸ್ಥೆ ನಿರತವಾಗಿದೆ.

ಖ್ಯಾತ ಭರತನಾಟ್ಯ ಕಲಾವಿದೆ ಸುಭಾಷಿಣಿ ವಸಂತ್‌ 2007ರಲ್ಲಿ ಹುತಾತ್ಮರಾದ ತಮ್ಮ ಪತಿ ದಿ. ಕರ್ನಲ್‌ ವಸಂತ್‌ ಅವರ ಸ್ಮರಣಾರ್ಥವಾಗಿ 2008ರಲ್ಲಿ ಈ ಸಂಸ್ಥೆಯನ್ನು ಸ್ಥಾಪಿಸಿದರು. ಸಂಸ್ಥೆ ರೂಪಿಸಿದ ಕಾರ್ಯಕ್ರಮಗಳು ಹೀಗಿವೆ. ದೇಶದ ಪುಟ್ಟ ಹಳ್ಳಿಗಳಿಂದ ದೇಶದ ಗಡಿ ಕಾಯಲು ಹೋದ ಬಹುತೇಕ ಯೋಧರು, ಯೋಧರ ಪತ್ನಿಯರು ಆರ್ಥಿಕವಾಗಿ ಸದೃಢರಿರುವುದಿಲ್ಲ. ಸುಶಿಕ್ಷಿತರೂ ಆಗಿರುವುದಿಲ್ಲ. ಇಂಥ ಎಷ್ಟೋ ಮಹಿಳೆಯರಿಗೆ ಸರ್ಕಾರ ತಮಗೆ ನೀಡುವ ಸೌಲಭ್ಯಗಳನ್ನು ಪಡೆಯುವ ಕ್ರಮವೂ ತಿಳಿದಿರುವುದಿಲ್ಲ. ಅಂಥ ಮಹಿಳೆಯರಿಗೆ ಸರ್ಕಾರದ ಸೌಲಭ್ಯ ತಲುಪುವಂತೆ
ಸಂಸ್ಥೆ ಸಹಾಯ ಮಾಡುತ್ತದೆ. ಅಲ್ಲದೇ ಶಿಬಿರಗಳನ್ನು ಏರ್ಪಡಿಸಿ ಮಹಿಳೆಯರಿಗೆ ಕಂಪ್ಯೂಟರ್‌ ಕಲಿಕೆ, ಇಂಗ್ಲಿಷ್‌ ಕಲಿಕೆ, ಕೌಶಲ ತರಬೇತಿಗಳನ್ನು ನೀಡುವ ಮೂಲಕ ಅವರು ಸ್ವಾವಲಂಬಿಯಾಗುವಂತೆ ತರಬೇತಿ ನೀಡುತ್ತದೆ. ಸಂಸ್ಥೆ ಹುತಾತ್ಮ ಯೋಧರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಸಲುವಾಗಿ 30,000 ರೂ. ಹಣವನ್ನು ಅಗತ್ಯವಿರುವ ಪ್ರತಿ ಮಕ್ಕಳ ಹೆಸರಿನಲ್ಲಿ ಎಫ್ಡಿ ಇಡುತ್ತದೆ. ಮಕ್ಕಳು 18 ವರ್ಷದವರಾದಾಗ ಅದನ್ನು ಅವರು ಸಂಪೂರ್ಣವಾಗಿ ತಮ್ಮ ಶಿಕ್ಷಣಕ್ಕೆ ಬಳಸಿಕೊಳ್ಳಬಹುದು. ಜವಾನರ ಹೆಸರನ್ನು ಅಮರವಾಗಿಸುವ ಸಲುವಾಗಿ ಅವರು ಕಲಿತ ಶಾಲೆಗಳಲ್ಲಿ ಅವರ ಹೆಸರಿನಲ್ಲಿ ಉತ್ತಮ ವಿದ್ಯಾರ್ಥಿ ಪ್ರಶಸ್ತಿ ನೀಡುತ್ತದೆ. ಪತಿಯನ್ನು ಕಳೆದುಕೊಂಡು ಪತ್ನಿ ಮಾನಸಿಕವಾಗಿ ಕುಗ್ಗುವುದು ಸಾಮಾನ್ಯ. ಅದರೆ ಇಂಥ ಸಂದರ್ಭವನ್ನು ಮೆಟ್ಟಿನಿಂತು ಸಮಾಜವನ್ನು ಎದುರಿಸುವ ಮತ್ತು ತಮ್ಮೊಳಗಿನ ಶಕ್ತಿಯನ್ನು ಕಂಡುಕೊಳ್ಳಲು ಮಹಿಳೆಯರಿಗೆ ಮನಃಶಾಸ್ತ್ರಜ್ಞರಿಂದ ಆಪ್ತ ಸಲಹೆಯನ್ನೂ ಸಂಸ್ಥೆ ಒದಗಿಸುತ್ತದೆ.

“ಗಡಿಯಲ್ಲಿ ಪತಿಯನ್ನು ಕಳೆದುಕೊಂಡ ಮಹಿಳೆಗೆ ತನ್ನಂತಹದ್ದೇ ಸ್ಥಿತಿಯಲ್ಲಿರುವ ಮಹಿಳೆ ನೀಡುವ ಆತ್ಮಸ್ಥೈರ್ಯ ಎಲ್ಲದಕ್ಕಿಂತ ಹೆಚ್ಚಿನ ಬಲ ನೀಡುತ್ತದೆ. ಹೀಗಾಗಿ ವೀರನಾರಿಯರೇ ವೀರನಾರಿಯರಿಗೆ ಬೆಂಬಲವಾಗಿ ನಿಲ್ಲುವಂಥ ಕೆಲಸವನ್ನು ನಮ್ಮ ಸಂಸ್ಥೆ ಮೂಲಕ ಮಾಡುತ್ತಿದ್ದೇವೆ ಎಂದು ಹೇಳುತ್ತಾರೆ’ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದ್ಯರಲ್ಲೊಬ್ಬರಾದ ಸಲ್ಮಾ ಶಫಿಕ್‌.

 ಚೇತನಾ ಜೆ.ಕೆ

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.