ಜೈಲು ಅಧಿಕ್ಷಕರ ಹೇಳಿಕೆ ದಾಖಲಿಸಿದ ತನಿಖಾ ತಂಡ
Team Udayavani, Aug 15, 2017, 11:15 AM IST
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದ್ದು, ಜೈಲಿನ ಅಧೀಕ್ಷಕ ಕೃಷ್ಣಕುಮಾರ್ ಮತ್ತು ಉಪಾಧೀಕ್ಷಕಿ ಅನಿತಾ ಅವರಿಂದ ಹೇಳಿಕೆ ದಾಖಲಿಸಿಕೊಂಡಿದೆ.
ಜುಲೈ 13ರಂದು ಡಿಐಜಿ ರೂಪಾ ಜೈಲಿನ ಅಕ್ರಮಗಳ ಬಗ್ಗೆ ಸಾಕ್ಷ್ಯಾಗಳ ಸಮೇತ ಅಂದಿನ ಡಿಜಿ ಸತ್ಯನಾರಾಯಣರಾವ್ ಅವರಿಗೆ ವರದಿ ಸಲ್ಲಿಸಿದ್ದರು. ಈ ವರದಿಯಲ್ಲಿ ಜೈಲಿನ ಅಧೀಕ್ಷಕ ಕೃಷ್ಣಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಲಾಗಿತ್ತು. ಇದೇ ವೇಳೆ ಜೈಲಿನ ಕೆಲ ಕೈದಿಗಳು ಅನಿತಾ ವಿರುದ್ಧ ಲಂಚ ಪಡೆದ ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಪ್ರತ್ಯೇಕವಾಗಿ 3-4 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಬಹುಮಹಡಿಯ ಕಟ್ಟಡದಲ್ಲಿರುವ ವಿನಯ್ ಕುಮಾರ್ ಕಚೇರಿಗೆ ಕರೆಸಿಕೊಂಡ ತನಿಖಾಧಿಕಾರಿಗಳು, ಅನಿತಾ ಅವರನ್ನು ಸುಮಾರು 3ಗಂಟೆಗೂ ಅಧಿಕ ಕಾಲ ಪ್ರಶ್ನಾವಳಿಗಳನ್ನು ನೀಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಹಾಗೆಯೇ ಕೃಷ್ಣಕುಮಾರ್ ಅವರಿಂದಲೂ ಈಗಾಗಲೇ ಒಂದು ಬಾರಿ ಹೇಳಿಕೆ ದಾಖಲಿಸಿಕೊಂಡಿದ್ದು, ಮತ್ತೂಮ್ಮೆ ಕಚೇರಿಗೆ ಬರುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಕೃಷ್ಣಕುಮಾರ್ ಹೇಳಿಕೆಯಲ್ಲಿ “ರೂಪಾ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಇದರಲ್ಲಿ ತಮ್ಮ ಪಾತ್ರವೇನಿಲ್ಲ. ವಿನಾಃ ಕಾರಣ ತಮ್ಮ ವಿರುದ್ಧ ದೂರುತ್ತಿದ್ದಾರೆ,’ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.