ಸಮಾಜದ ಒಳಿತಿಗಾಗಿಯೇ ಜನ್ಮ ತಾಳಿದ ಶ್ರೀಕೃಷ್ಣ
Team Udayavani, Aug 15, 2017, 11:32 AM IST
ಎಚ್.ಡಿ.ಕೋಟೆ: ಭಾರತ ಅಪಾರವಾದ ಸಂಸ್ಕೃತಿಯನ್ನು ಒಳಗೊಂಡಿರುವ ದೇಶವಾಗಿದ್ದು, ರಾಮಾಯಣ ಮತ್ತು ಮಹಾ ಭಾರತದಂತಹ ಮಹಾ ಕಾವ್ಯಗಳಲ್ಲೇ ಉಲ್ಲೇಖವಿದೆ. ಅದರಲ್ಲೂ ಮಹಾ ಭಾರತದಲ್ಲಿ ಪ್ರಧಾನ ಪಾತ್ರ ನಿರ್ವಹಿಸಿರುವ ಶ್ರೀಕೃಷ್ಣ ಸಮಾಜದ ಒಳಿತಿಗಾಗಿಯೇ ಜನ್ಮ ತಾಳಿ ದುಷ್ಟರನ್ನು ಶಿಕ್ಷಿಸಲೆಂದೇ ಅನೇಕ ಅವತಾರಗಳನ್ನು ಕಾಣಬೇಕಾಯಿತು ಎಂದು ತಹಶೀಲ್ದಾರ್ ಎಂ.ನಂಜುಂಡಯ್ಯ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಶ್ರೀಕೃಷ್ಣ ಜಯಂತಿ ಆಚರಣಾ ಸಮಾರಂಭದಲ್ಲಿ ಮಾತನಾಡಿ, ಶ್ರೀಕೃಷ್ಣರ ಬಾಲಲೀಲೆ, ಯೌವ್ವನದ ಕಥೆಗಳನ್ನು ಹಾಗೂ ಸಂಪೂರ್ಣ ಮಹಾಭಾರತದಲ್ಲಿ ನಿರ್ವಹಿಸಿದ ಪಾತ್ರ ಎಲ್ಲವನ್ನು ನಾವು ಶಾಲಾ ದಿನಗಳಲ್ಲೇ ಓದಿದ್ದೇವೆ. ಅಂಥ ಮಹಾಪುರುಷರ ಆದರ್ಶ ಪಾಲಿಸೋಣ ಎಂದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಸಿ.ನರಸಿಂಹಮೂರ್ತಿ ಮಾತನಾಡಿ, ಶ್ರೀಕೃಷ್ಣ ಬಗ್ಗೆ ನಂಬಿಕೆ ಭಾವನಾತ್ಮಕ ಗೌರವವಿದೆ. ಆದರೆ ವಿದ್ಯಾರ್ಥಿಗಳಾದ ನೀವು ಮಹಾಭಾರತದ ಶ್ರೀಕೃಷ್ಣರಾಗುವ ಬದಲು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಬಾಬಾ ಸಾಹೇಬರ ಪರಿಕಲ್ಪನೆಯಲ್ಲಿ ಓದಿ ವಿದ್ಯಾವಂತರಾಗಿ ಎಂದು ಹೇಳಿದರು.
ಪುರಸಭೆ ಅಧ್ಯಕ್ಷೆ ಮಂಜುಳಾ ಗೋವಿಂದಚಾರಿ, ಸದಸ್ಯರಾದ ನರಸಿಂಹಮೂರ್ತಿ, ಅನಿಲ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಡಿ.ಮಂಚಯ್ಯ, ಮುಖಂಡರಾದ ಜೆ.ಪಿ.ಲೋಕೇಶ್, ರೇಷ್ಮೆ ಇಲಾಖೆ ಕೇಶವಮೂರ್ತಿ, ಬಿಇಒ ಸುಂದರ್, ಪುರಸಭೆ ಮುಖ್ಯಾಧಿಕಾರಿ ವಿಜಯಕುಮಾರ, ಶಿಕ್ಷಣ ಇಲಾಖೆಯ ಭೀಮಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.