ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರಿಗೆ ಯಕ್ಷಧ್ರುವ ಪ್ರಶಸ್ತಿ ಪ್ರದಾನ
Team Udayavani, Aug 15, 2017, 12:44 PM IST
ಮುಂಬಯಿ: ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮಂಗಳೂರು ಇದರ ಮುಂಬಯಿ ಘಟಕದ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮ-2017 ಸಮಾರಂಭವು ಆ. 13ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಅಪರಾಹ್ನ 2ರಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ್ದು, ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಯಕ್ಷಗಾನ ಭಾಗವತ ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರಿಗೆ ಸಂಸ್ಥೆಯ ಪ್ರತಿಷ್ಠಿತ ಯಕ್ಷಧ್ರುವ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಾಯಿತು.
ಟ್ರಸ್ಟ್‌ನ ಮುಂಬಯಿ ಘಟಕದ ಗೌರವಾಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಅಧ್ಯಕ್ಷ ಕಡಂದಲೆ ಸುರೇಶ್ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ದಂಪತಿಯನ್ನು ಗೌರವಿಸಲಾಯಿತು. ಅಧ್ಯಕ್ಷತೆಯನ್ನು ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ ಅವರು ವಹಿಸಿದ್ದರು.
ಗೌರವ ಅತಿಥಿಗಳಾಗಿ ವಿಶ್ವತ್ ಕೆಮಿಕಲ್ಸ್ ನ ಮುಖ್ಯ ಆಡಳಿತ ನಿರ್ದೇಶಕ ಬಿ. ವಿವೇಕ್ ಶೆಟ್ಟಿ, ಸಂಪೂರ್ಣ ಹೊಟೇಲ್ಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಪದ್ಮನಾಭ ಎಸ್. ಪಯ್ಯಡೆ, ಭವಾನಿ ಶಿಪ್ಪಿಂಗ್ ಸರ್ವಿಸಸ್‌ನ ಮುಖ್ಯ ಆಡಳಿತ ನಿರ್ದೇಶಕ ಕೆ. ಡಿ. ಶೆಟ್ಟಿ, ಅಂಧೇರಿ ಹೊಟೇಲ್ ರಿಜೇನ್ಸಿಯ ಜಯರಾಮ ಎನ್. ಶೆಟ್ಟಿ, ಬಂಟರ ಸಂಘ ಪುಣೆ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಕುರ್ಕಿಲ್‌ಬೆಟ್ಟು, ಸ್ಟೀಲ್ ಸ್ಟ್ರಾಂಗ್ ಇದರ ಸಿಎಂಡಿ ರಮೇಶ್ ಶೆಟ್ಟಿ, ಸನ್‌ಸಿಟಿ ಗ್ರೂಪ್ ಆಫ್ ಹೊಟೇಲ್ಸ್‌ನ ಶಾಂತಾರಾಮ ಶೆಟ್ಟಿ, ಬಾಬಾ ಗ್ರೂಪ್‌ನ ಕಾರ್ಯಾಧ್ಯಕ್ಷ ಮಹೇಶ್ ಶೆಟ್ಟಿ, ಪುಣೆಯ ಉದ್ಯಮಿ ಉಮೇಶ್ ಶೆಟ್ಟಿ ಪರೀಕಾ, ಕಟೀಲು ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಬಂಟರ ಸಂಘದ ಟ್ರಸ್ಟಿ ಕರ್ನಿರೆ ವಿಶ್ವನಾಥ ಶೆಟ್ಟಿ, ಹೊಟೇಲ್ ಅಶ್ವಿತ್ ಬೇಲಾಪುರ ನವಿಮುಂಬಯಿ ಸಂಜೀವ ಶೆಟ್ಟಿ, ಕ್ರಿಸ್ಟಲ್ ಅಟೊಮೇಶನ್ ಪ್ರೈವೇಟ್ ಲಿಮಿಟೆಡ್‌ನ ಚಂದ್ರಶೇಖರ್ ಎಸ್. ಶೆಟ್ಟಿ, ಸೂರತ್ ಹೊಟೇಲ್ ರಾಧಾಕೃಷ್ಣದ ರಾಧಾಕೃಷ್ಣ ಶೆಟ್ಟಿ, ತುಳು ಸಂಘ ಬರೋಡಾ ಇದರ ಅಧ್ಯಕ್ಷ ಶಶಿಧರ ಶೆಟ್ಟಿ, ಪ್ಯಾಪಿಲೋನ್ ಕ್ಯಾಟರರ್ ಸೂರತ್ ಜಯಂತ್ ಶೆಟ್ಟಿ, ಉದ್ಯಮಿ, ಸಮಾಜ ಸೇವಕಿ ರೇಷ್ಮಾ ರವಿರಾಜ್ ಮೊದಲಾದವರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮುಂಬಯಿ ಘಟಕದ ಉಪಾಧ್ಯಕ್ಷರುಗಳಾದ ಕೈರಬೆಟ್ಟು ವಿದ್ವಾನ್ ವಿಶ್ವನಾಥ್ ಭಟ್, ಉಳೂ¤ರು ಮೋಹನ್‌ದಾಸ್ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಅಶೋಕ್ ಪಕ್ಕಳ, ಸುರೇಶ್ ಬಿ. ಶೆಟ್ಟಿ ಮರಾಠ, ಸಂಚಾಲಕರುಗಳಾದ ಐಕಳ ಗಣೇಶ್ ಶೆಟ್ಟಿ, ಅಶೋಕ್ ಶೆಟ್ಟಿ ಪೆರ್ಮುದೆ, ಗೌರವ ಕಾರ್ಯದರ್ಶಿ ಕರ್ನೂರು ಮೋಹನ್ ರೈ, ಕೋಶಾಧಿಕಾರಿಗಳಾದ ಬಾಬು ಎನ್. ಶೆಟ್ಟಿ ಪೆರಾರ, ಸಿಎ ಸುರೇಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅಜೆಕಾರು ಹಾಗೂ ಸರ್ವ ಸದಸ್ಯರು ಸಹಕರಿಸಿದರು. ಅಶೋಕ್ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.