ಕಳಪೆ ಕಾಮಗಾರಿಗೆ ಅಧಿಕಾರಿಗಳೇ ಹೊಣೆ


Team Udayavani, Aug 15, 2017, 3:18 PM IST

15-Z-5.jpg

ಸೊರಬ: ಕಳಪೆ ಕಾಮಗಾರಿಗೆ ಗುತ್ತಿಗೆದಾರರು ಎಷ್ಟು ಜವಾಬ್ದಾರರೋ ಅಂತಹ ಕಾಮಗಾರಿಗಳಿಗೆ ಸಹಕರಿಸುವ ಅಧಿಕಾರಿಗಳನ್ನು ಅಷ್ಟೇ ಜವಾಬ್ದಾರರನ್ನಾಗಿ ಮಾಡುವ ಜೊತೆಗೆ ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕ ಮಧು ಬಂಗಾರಪ್ಪ ಎಚ್ಚರಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಅನೇಕ ರಸ್ತೆಗಳು ಹಾಳಾಗಿವೆ. ಆನವಟ್ಟಿ, ಉಳವಿ, ತಲಗಡ್ಡೆ ಗ್ರಾಮಗಳಲ್ಲಿ ಓವರ್‌ ಹೆಡ್‌ ಟ್ಯಾಂಕ್‌ಗಳು ಶಿಥಿಲಗೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಕೂಡಲೆ ಅವುಗಳನ್ನು ತೆರವುಗೊಳಿಸಿ ಹೊಸದಾಗಿ ಟ್ಯಾಂಕ್‌ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಕುಸಿದು ಬೀಳುವ ಹಂತದಲ್ಲಿರುವ ಅಂಗನವಾಡಿ ಕಟ್ಟಡಗಳು, ಶಾಲಾ ಕಟ್ಟಡಗಳನ್ನು ಆನಾಹುತಗಳು ಸಂಭವಿಸುವ ಮೊದಲು ಕೋರಿಕೆಯ ಮೇರೆಗೆ ತೆರವುಗೊಳಿಸಲು ಸಂಬಂಧಿ ಸಿದವರಿಗೆ ಕೂಡಲೇ ವರದಿ ನೀಡುವಂತೆ ಅಧಿ ಕಾರಿಗಳಿಗೆ ಸೂಚಿಸಿದರು.

ಸರ್ಕಾರದಿಂದ ಈಗಾಗಲೇ ಇಲಾಖೆಗಳಿಗೆ ಅನುದಾನ ನೀಡಿದ್ದರೂ ಅಧಿಕಾರಿಗಳ  ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಪ್ರಾರಂಭಗೊಳ್ಳದೆ ಅನುದಾನ ವಾಪಸು ಹೋಗಿರುವುದು ತಮ್ಮ ಗಮನಕ್ಕೆ ಬಂದಿದೆ. ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕಾಮಗಾರಿ ಗುಣಮಟ್ಟ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುವಂತೆ ನಿಗಾ ವಹಿಸಬೇಕು. ಇಲ್ಲದಿದ್ದರೆ ಆಯಾ ಇಲಾಖೆಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

2014-15ನೇ ಸಾಲಿನಲ್ಲಿ ತಾಲೂಕಿನ ಚಿಕ್ಕಶಕುನ ಗ್ರಾಮದ ಪ್ರೌಡಶಾಲೆಯ ಕುಡಿಯುವ ನೀರು ಹಾಗು ಕೊಡಕಣಿ ಗ್ರಾಮದ ಅಂಗನವಾಡಿ ಕೇಂದ್ರಗಳ ದುರಸ್ಥಿಗಾಗಿ ಅನುದಾನ ಬಿಡುಗಡೆಯಾಗಿತ್ತು, ಆದರೆ ದುರಸ್ಥಿ ಕಾರ್ಯ ಮಾತ್ರ ನಡೆದಿಲ್ಲ. ಕಾಮಗಾರಿ ಅಪೂರ್ಣಗೊಂಡಿರುವ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ. ಅಧಿಕಾರಿಗಳ ಬೇಜಾಬ್ದಾರಿಯಿಂದ ಇಂತಹ ನೂರಾರು ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಕೆಲವು ಗ್ರಾಮಗಳಲ್ಲಿ
ರಸ್ತೆಗಳು ಅತಿಕ್ರಮಗೊಂಡರೂ ಅಧಿಕಾರಿಗಳು ತೆರವುಗೊಳಿಸುವಲ್ಲಿ ಮುಂದಾಗುತ್ತಿಲ್ಲ. ಸರ್ಕಾರದ ಆಶಯಗಳಿಗೆ ಪೂರಕವಾಗಿ ಕೆಲಸ ನಿರ್ವಹಿಸದಿರುವ ಅಧಿಕಾರಿಗಳ ಅವಶ್ಯಕತೆ ತಾಲೂಕಿಗೆ ಬೇಕಾಗಿಲ್ಲ. ಕೂಡಲೇ ಅಂತಹ ಅಧಿ ಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ತಾಲೂಕಿನ ಅಭಿವೃದ್ಧಿಗೆ ಮುಂದಾಗಬೇಕೆಂದು ನಾಮ ನಿರ್ದೇಶಿತ ಕೆಡಿಪಿ ಸದಸ್ಯ ಪರಸಪ್ಪ ಚಿಕ್ಕಶಕುನ ಸಭೆಯಲ್ಲಿ ಶಾಸಕರ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಮಧು ಬಂಗಾರಪ್ಪ, ಅಭಿವೃದ್ಧಿ ವಿಷಯದಲ್ಲಿ ಅಧಿಕಾರಿಗಳ ನಿರ್ಲಕ್ಷ ಸಹಿಸಲಾಗದು. ಎಲ್ಲಾ ಅಧಿಕಾರಿಗಳು ಅಭಿವೃದ್ಧಿಗೆ
ಪೂರಕವಾಗಿ ಕಾರ್ಯ ನಿರ್ವಹಿಸುವ ಜೊತೆಗೆ ಪ್ರಗತಿಗೆ ಮುಂದಾಗಬೇಕೆಂದು ಸೂಚಿಸಿದರು. ಮೆಸ್ಕಾಂ ಎಂಜನಿಯರ್‌ ನವೀನ ಕುಮಾರ್‌ ಸಭೆಗೆ ಮಾಹಿತಿ ನೀಡಿ, ತಾಲೂಕಿನಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿರುವ ಸುಮಾರು 3200 ಮನೆಗಳಿಗೆ ವಿದ್ಯುತ್‌ ಸಂಪರ್ಕವಿಲ್ಲ. ಈ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುವುದು. ತಾಲೂಕು ಕಚೇರಿ, ಸಾರ್ವಜನಿಕ ಆಸ್ಪತ್ರೆ ಹಾಗೂ ಪೊಲೀಸ್‌ ಠಾಣೆಗೆ ಇಲಾಖೆಯಿಂದ ಸೋಲಾರ್‌ ಗ್ರಿಡ್‌ ಅಳವಡಿಸಲಾಗುತ್ತಿದ್ದು, ಇದರಿಂದ ಪ್ರತಿ ತಿಂಗಳು ರೂ 8ಸಾವಿರ ಹಣ ಉಳಿತಾಯವಾಗಲಿದೆ. ನಿರಂತರ ಜ್ಯೋತಿ ಯೋಜನೆಯಡಿ ಶೀಘ್ರದಲ್ಲೇ ತಾಲೂಕಿಗೆ 24 ತಾಸು ವಿದ್ಯುತ್‌ ನೀಡಲಾಗುವುದು ಎಂದರು.

ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಕೊರತೆ, ಕೃಷಿ ಇಲಾಖೆ, ಶಿಕ್ಷಣ, ಸಮಾಜ ಕಲ್ಯಾಣ, ರೇಷ್ಮೆ, ಇನ್ನೂ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾವಾರು ಪ್ರಗತಿಯ ಮಾಹಿತಿ ನೀಡಿದರು. ತಾಪಂ ಅಧ್ಯಕ್ಷೆ ನಯನಾ ಶ್ರೀಪಾದ ಹೆಗಡೆ, ಉಪಾಧ್ಯಕ್ಷ ಸುರೇಶ್‌, ಡಿಸಿಸಿ ಬ್ಯಾಂಕ್‌ ನಿರ್ದೇಶಕ
ಶ್ರೀಪಾದ ಹೆಗಡೆ ನಿಸರಾಣಿ, ಜಿಪಂ ಸದಸ್ಯರಾದ ಸತೀಶ್‌ ಅರ್ಜುನಪ್ಪ, ಶಿವಲಿಂಗ ಗೌಡ್ರು, ರಾಜೇಶ್ವರಿ, ತಾರಾ ಶಿವಾನಂದಪ್ಪ, ವೀರೇಶ್‌  ಕೊಟಗಿ, ಇಒ ಮಂಜುಳಾ, ಜಿಪಂ ಎಂಜಿನಿಯರ್‌ ನಂಜುಂಡಪ್ಪ, ತೋಟಗಾರಿಕಾ ಅಧಿಕಾರಿ ಸೋಮಶೇಖರ್‌ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ನಾಮನಿರ್ದೇಶಿತ ಸದಸ್ಯರು ಇದ್ದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.