“ಕಾಪು ಕ್ಷೇತ್ರದ ಅಭಿವೃದ್ಧಿಯೇ ಮೂಲ ಮಂತ್ರ’

Team Udayavani, Aug 16, 2017, 7:25 AM IST

13-Congress-1a.jpg

ಕಾಪು: ಪಕ್ಷದ ಕಾರ್ಯಕರ್ತರ ಬೆಂಬಲ ಮತ್ತು ಕ್ಷೇತ್ರದ ಮತದಾರರ ಮತಗಳ ಕಾರಣದಿಂದಾಗಿ ಕಳೆದ ಚುನಾವಣೆಯಲ್ಲಿ ಗೆಲ್ಲುವಂತಾಗಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಾ ಬಂದಿದ್ದೇನೆ. ಯಾವುದೇ ಅಡೆತಡೆಗಳು ಬಂದರೂ ಕ್ಷೇತ್ರದ ಅಭಿವೃದ್ಧಿಯೇ ತನ್ನ ಮೂಲ ಮಂತ್ರ ಎಂದು ಕಾಪು ಶಾಸಕ ವಿನಯಕುಮಾರ್‌ ಸೊರಕೆ ಹೇಳಿದರು.

ಕಾಪು ರಾಜೀವ ಭವನದಲ್ಲಿ ಆ. 12ರಂದು ನಡೆದ ಕಾಪು ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ ಕ್ಷೇತ್ರಾಭಿವೃದ್ಧಿ ನಿಧಿ ಮತ್ತು ಬೇರೆ ಬೇರೆ ಇಲಾಖೆಗಳಿಂದ ವಿವಿಧ ಮೂಲಗಳಿಂದ ನೂರಾರು ಕೋ. ರೂ. ಅನುದಾನವನ್ನು ಕ್ರೋಢೀಕರಿಸಿಕೊಂಡು ಸಮಗ್ರ ಅಭಿವೃದ್ಧಿ ಹೊಂದಿದ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸ ಬೇಕೆನ್ನುವುದೇ ಮೂಲ ಗುರಿಯಾಗಿದೆ. ಕ್ಷೇತ್ರದ ಅಭಿವೃದ್ಧಿಯನ್ನು ಜನರಿಗೆ ತಲುಪಿಸುವ ಪ್ರಯತ್ನ ಪ್ರತಿಯೋರ್ವ ಕಾರ್ಯಕರ್ತರಿಂದಲೂ ನಡೆಯಬೇಕಿದೆ ಎಂದರು.

ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಮುಖಂಡರಾದ ಕಾಪು ದಿವಾಕರ ಶೆಟ್ಟಿ, ಡಾ| ದೇವಿಪ್ರಸಾದ್‌ ಶೆಟ್ಟಿ, ಅಶೋಕ್‌ ಕುಮಾರ್‌ ಕೊಡವೂರು ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಜವಾಬ್ದಾರಿಯ ಕುರಿತಾಗಿ ಮಾತನಾಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡ ಮನಹರ್‌ ಇಬ್ರಾಹಿಂ, ರಾಜ್ಯ ಮಹಿಳಾ ಕಾಂಗ್ರೆಸ್‌ ಪ್ರ. ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಫರ್ಜಾನ, ಜಿಲ್ಲಾ ಕಿಸಾನ್‌ ಘಟಕದ ಅಧ್ಯಕ್ಷ ಕ್ರೆಸ್ಟಿನ್‌ ಅಲ್ಮೇಡಾ, ಕಿಸಾನ್‌ ಘಟಕದ ರಾಘವೇಂದ್ರ ನಾಯಕ್‌, ಕರುಣಾಕರ ಶೆಟ್ಟಿ ಅವರನ್ನು ಪಕ್ಷದ ವತಿಯಿಂದ ಅಭಿನಂದಿಸಲಾಯಿತು.

ಇತೀ¤ಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್‌, ಪಕ್ಷದ ಮುಖಂಡ ರಾಜು ಮಾಸ್ಟರ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಿಜೆಪಿ ತೊರೆದ ರಮೇಶ್‌ ಕುಮಾರ್‌ ಅವರ ನೇತೃತ್ವದಲ್ಲಿ ಹಲವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಪುರಸಭಾಧ್ಯಕ್ಷೆ ಕು| ಸೌಮ್ಯಾ ಎಸ್‌., ಉಪಾಧ್ಯಕ್ಷ ಎಚ್‌. ಉಸ್ಮಾನ್‌, ಜಿ. ಪಂ. ಸದಸ್ಯ ವಿಲ್ಸನ್‌ ರೋಡ್ರಿಗಸ್‌, ತಾ. ಪಂ. ಸದಸ್ಯೆ ಗೀತಾ ವಾಗ್ಲೆ, ಪಕ್ಷದ ಮುಖಂಡರಾದ ಗೋಪಾಲ ಪೂಜಾರಿ, ವಿಶ್ವಾಸ್‌ ಅಮೀನ್‌, ಸರಸು ಡಿ. ಬಂಗೇರ, ಮನಹರ್‌ ಇಬ್ರಾಹಿಂ, ಮೆಲ್ವಿನ್‌ ಡಿ’ಸೋಜಾ, ಕ್ರೆಸ್ಟಿನ್‌ ಅಲ್ಮೇಡಾ, ಎಚ್‌. ಅಬ್ದುಲ್ಲಾ, ನವೀನ್‌ ಶೆಟ್ಟಿ, ಕಿಶೋರ್‌ ಕುಮಾರ್‌, ಗ್ರಾ. ಪಂ. ಅಧ್ಯಕ್ಷರುಗಳು, ಪಕ್ಷದ ಚುನಾಯಿತ ಪ್ರತಿನಿಧಿಗಳು, ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.ಕಾಪು ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ವಿನಯ ಬಲ್ಲಾಳ್‌ ಸ್ವಾಗತಿಸಿ, ವಂದಿಸಿದರು.
 
ಟಾಪ್ ನ್ಯೂಸ್

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.