ಕಾಪು ತಾಲೂಕಿಗೆ ಶೀಘ್ರ ಗಜೆಟ್‌ ನೋಟಿಫಿಕೇಶನ್‌ : ಶಾಸಕ ಸೊರಕೆ

Team Udayavani, Aug 16, 2017, 7:40 AM IST

Kaup-MLA-Vinay-Kumar-Sorake.jpg

ಕಾಪು: ಈಗಾಗಲೇ ಬಜೆಟ್‌ನಲ್ಲಿ ಕಾಪು ತಾಲೂಕು ಘೋಷಣೆಯಾಗಿದ್ದು, ಶೀಘ್ರದಲ್ಲಿ ಗಜೆಟ್‌ ನೋಟಿಫಿಕೇಶನ್‌ ಕೂಡಾ ಆಗಲಿದೆ. ಆ ಬಳಿಕ ವೇಗವಾಗಿ ತಾಲೂಕು ರಚನೆಯ ಯೋಜನೆಗಳು ಅನುಷ್ಠಾನಕ್ಕೆ ಬರಲಿವೆ ಎಂದು ಶಾಸಕ ವಿನಯಕುಮಾರ್‌ ಸೊರಕೆ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಾಪು ಬಂಗ್ಲೆ ಮೈದಾನದಲ್ಲಿ ನಡೆದ  ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಮಿನಿ ವಿಧಾನಸೌಧಕ್ಕೆ ಕ್ರಿಯಾಯೋಜನೆ: ತಾಲೂಕು ಘೋಷಣೆಯಾಗಿರುವ ಕಾಪುವಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ತಯಾರಿಸಲಾಗಿದ್ದು, ಮಿನಿ ವಿಧಾನಸೌಧ ಮಂಜೂರಾತಿ ಹಂತದಲ್ಲಿದೆ. 5 ಕೋಟಿ ರೂ. ವೆಚ್ಚದ ಕಾಪು ಪುರಸಭೆಯ ಮೊದಲ ಅಂತಸ್ತಿನ ಕಾಮಗಾರಿಯು ಭರದಿಂದ ನಡೆಯುತ್ತಿದ್ದು, ಡಿಸೆಂಬರ್‌ನಲ್ಲಿ ಉದ್ಘಾಟನೆಗೊಳ್ಳುವ ನಿರೀಕ್ಷೆಯಿದೆ ಎಂದರು.

ಕೊಳಚೆ ನೀರಿನ ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಅನುಮೋದನೆ : ಪುರಸಭಾ ವ್ಯಾಪ್ತಿಯ 9 ಕೆರೆಗಳು ಹಾಗೂ 5 ರುದ್ರಭೂಮಿಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದ್ದು, ವಾರ್ಷಿಕ ವರ್ಷದಲ್ಲಿ ಪುರಸಭಾ ವ್ಯಾಪ್ತಿಯಲ್ಲಿ 10 ಸಾವಿರ ಗಿಡ ನೆಡುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 4.5 ಕೋಟಿ ರೂ. ವೆಚ್ಚದ ಕೊಳಚೆ ನೀರಿನ ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಕರ್ನಾಟಕ ಜಲ ಮಂಡಳಿಯಿಂದ ಅನುಮೋದನೆ ದೊರೆತಿದೆ ಎಂದು ಹೇಳಿದರು.

ಹೆಜಮಾಡಿಯಲ್ಲಿ ಬಂದರು, ಬೆಳಪುವಿನಲ್ಲಿ 
ಸಂಶೋಧನಾ ಕೇಂದ್ರ ನಿರ್ಮಾಣಕ್ಕೆ ಒತ್ತು 140 ಕೋಟಿ ರೂ. ವೆಚ್ಚದ ಹೆಜಮಾಡಿ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಅನುಮೋದನೆ ದೊರಕುವ ನಿರೀಕ್ಷೆಯಿದೆ. 130 ಕೋಟಿ ವೆಚ್ಚದಲ್ಲಿ ಬೆಳಪುವಿನಲ್ಲಿ ವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆಯಾಗಲಿದೆ. ಕಳತ್ತೂರಿನಲ್ಲಿ ಮೊರಾರ್ಜಿ ವಸತಿ ಶಾಲೆ, ಎಲ್ಲೂರಿನಲ್ಲಿ ಐಟಿಐ ಸ್ಥಾಪನೆಯಾಗಲಿದ್ದು, ಕಾಪು ಕ್ಷೇತ್ರಕ್ಕೆ ಮೌಲಾನ ಆಜಾದ್‌ ಶಾಲೆ ಮಂಜೂರಾತಿಯಾಗಲಿದೆ. ಆ ಮೂಲಕ ಕಾಪು ಕ್ಷೇತ್ರವನ್ನು ಶೈಕ್ಷಣಿಕ ಅಭಿವೃದ್ಧಿ ಹೊಂದಿದ ಕ್ಷೇತ್ರವನ್ನಾಗಿ ಪರಿವರ್ತಿಸಲಾಗುವುದು ಎಂದರು.

ಕಾಪುವಿನ ಅಭಿವೃದ್ಧಿಗೆ ಎಲ್ಲರ ಸಹಕಾರ 
ಹೊಸದಾಗಿ ರಚನೆಗೊಂಡಿರುವ ಪುರಸಭೆಗಳ ಪೈಕಿ ಕಾಪು ಪುರಸಭೆ ಪ್ರಥಮ ಸ್ಥಾನದಲ್ಲಿದ್ದು, ಇದಕ್ಕೆ ಸರ್ವರ ಸಹಕಾರವೇ ಕಾರಣವಾಗಿದೆ. ಕಾಪು ಕ್ಷೇತ್ರದ ಅಭಿವೃದ್ಧಿಗೆ ಕ್ಷೇತ್ರದ ಹಿಂದಿನ ಶಾಸಕರುಗಳಾದ ಭಾಸ್ಕರ ಶೆಟ್ಟಿ, ವಸಂತ ವಿ.ಸಾಲ್ಯಾನ್‌ ಮತ್ತು ಲಾಲಾಜಿ ಆರ್‌. ಮೆಂಡನ್‌ ಅವರು ತಮ್ಮದೇ ಆದ ರೀತಿಯಲ್ಲಿ ವಿವಿಧ ಕೊಡುಗೆಗಳನ್ನು ನೀಡಿದ್ದಾರೆ. ಕಾಪುವಿನ ಸಮಗ್ರ ಅಭಿವೃದ್ಧಿಗೆ ರಾಜಕೀಯ ರಹಿತವಾದ ಬೆಂಬಲದ ಅಗತ್ಯವಿದ್ದು, ಸಾರ್ವಜನಿಕರೂ ಉತ್ತಮ ರೀತಿಯ ಸಹಕಾರ ನೀಡಬೇಕು ಎಂದರು. ಕಾಪು ಪುರಸಭಾ ಅಧ್ಯಕ್ಷೆ ಕು| ಸೌಮ್ಯಾ, ಉಪಾಧ್ಯಕ್ಷ ಕೆ. ಎಚ್‌. ಉಸ್ಮಾನ್‌, ಕರ್ನಾಟಕ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಎ. ಗಫ‌ೂರ್‌, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ , ಕಂದಾಯ ನಿರೀಕ್ಷಕ ರವಿಶಂಕರ್‌, ಉಪ ತಹಶೀಲ್ದಾರ್‌ ಬಾಲಕೃಷ್ಣ ರೈ, ಕಾಪು ಪುರಸಭಾ ಮುಖ್ಯಾಧಿಕಾರಿ ರಾಯಪ್ಪ, ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಕಾಪು ಪುರಸಭೆ, ತಾ. ಪಂ., ಜಿ. ಪಂ., ಗ್ರಾ. ಪಂ. ಸದಸ್ಯರುಗಳು, ವಿವಿಧ ರಾಜಕೀಯ ಮುಖಂಡರು ಉಪಸ್ಥಿತರಿದ್ದರು. ಕಾಪು ಬಂಗ್ಲೆ ಮೈದಾನ ಗೆಳೆಯರ ಬಳಗದ ಸಂಚಾಲಕ ರವೀಂದ್ರ ಎಂ. ಕಾಪು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.