ಅರಸು ಜನ್ಮ ದಿನ: ಅರ್ಥಪೂರ್ಣ ಆಚರಣೆಗೆ ನಿರ್ಧಾರ

Team Udayavani, Aug 16, 2017, 7:10 AM IST

Z-ARASU-DINA-1.jpg

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಹಾಗೂ ನಾನಾ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಡಿ. ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್‌, 20ರಂದು ನಗರದಲ್ಲಿ ಆಯೋಜಿಸಲು ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.    
     
ಡಿ. ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಆಯೋಜಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. 

ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ ಅವರು ಮಾತನಾಡಿ ಹಿಂದುಳಿದ ವರ್ಗದ ಹರಿಕಾರ ಎಂದೇ ಖ್ಯಾತರಾದ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿ ಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗೆ ನಿರ್ದೇಶ ನೀಡಿದರು.
 
ಡಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ಭೂ ಸುಧಾರಣೆ ಕಾನೂ ನುಗಳು, ಹಾವನೂರು ಆಯೋಗ ರಚನೆ, ಮಲ ಹೊರುವ ಪದ್ಧತಿ ನಿಷೇಧ, ಉಳುವವನೇ ಭೂಮಿಯ ಒಡೆಯ ಹೀಗೆ ಹತ್ತು ಹಲವು ಸಾಮಾಜಿಕ ಸುಧಾರಣಾ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಆ ನಿಟ್ಟಿನಲ್ಲಿ ಅರಸು ಅವರ 102ನೇ ಜನ್ಮ ದಿನಾಚರಣೆಯಲ್ಲಿ ಎಲ್ಲರನ್ನೂ ಒಟ್ಟುಗೂಡಿಸಿ ಆಚರಿಸುವಂತಾಗಬೇಕು.  ಜನತೆಯ ಕಾರ್ಯಕ್ರಮ ಮಾದರಿಯಲ್ಲಿ ಅರ್ಥಪೂರ್ಣವಾಗಿ ನೆರವೇರಿಸಲು ಶ್ರಮಿಸಬೇಕು. ಇದಕ್ಕಾಗಿ ಎಲ್ಲ ಸಂಘ ಸಂಸ್ಥೆಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.  

ಪ್ರಮುಖರಾದ ಕೋಡಿ ಚಂದ್ರಶೇಖರ್‌ ಅವರು ಮಾತನಾಡಿ ಜಿಲ್ಲೆಯಲ್ಲಿ ವಿವಿಧ ಜನಾಂಗಗಳ ಸಂಘ ಸಂಸ್ಥೆಗಳನ್ನು ಆಹ್ವಾನಿಸುವಂತಾಗಬೇಕು. ಅಧಿಕಾರಿಗಳು ಮತ್ತು ಅಧಿಕಾರೇತರರು ಸೇರಿಕೊಂಡು ಸಂಘಟನಾತ್ಮಕವಾಗಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 
 
ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್‌ ಕುಮಾರ್‌ ಅವರು ಡಿ. ದೇವರಾಜ ಅರಸು ಜನ್ಮ ದಿನಾಚರಣೆ ಯನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು. 
 
ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್‌ ಅವರು ಡಿ. ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಅವರು ಕೋರಿದರು. 
 
ಆಹಾರ ಮತ್ತು ನಾಗರಿಕ ಸರಬರಾಜು ಇಲಾ ಖೆಯ ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ನಟೇಶ್‌, ಪೊಲೀಸ್‌ ಇನ್ಸ್‌ಪೆಕ್ಟರ್‌ ಐ.ಪಿ. ಮೇದಪ್ಪ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇ ಶರಾದ ಭಾಗ್ಯಲಕ್ಷ್ಮೀ, ತಹಶೀಲ್ದಾರ್‌ ಕುಸುಮಾ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕೆ.ಸಿ. ದಯಾನಂದ ಮೊದಲಾದವರಿದ್ದರು. 

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.