ದೇಶ ಒಡೆಯುವ ದೃಷ್ಕೃತ್ಯಗಳ ಬಗ್ಗೆ ಇರಲಿ ಎಚ್ಚರ
Team Udayavani, Aug 16, 2017, 11:30 AM IST
ಬೆಂಗಳೂರು: ಸ್ವಾತಂತ್ರ್ಯಕ್ಕಾಗಿ ಜೀವತ್ಯಾಗ ಮಾಡಿದ ಮಹನೀಯರನ್ನು ಸದಾ ಸ್ಮರಿಸಿಕೊಂಡು ದೇಶ ಒಡೆಯುವ ದುಷ್ಕೃತ್ಯಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ನಾರಾಯಣರಾವ್ ತಿಳಿಸಿದ್ದಾರೆ.
ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸ್ವಾತಂತ್ರೊತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ಕೆಲವೆಡೆ ದೇಶ ಒಡೆಯುವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಘಟನೆಗಳು ನಡೆಯುತ್ತಿವೆ. ಇದರ ಬಗ್ಗೆ ಜಾಗರೂಕತೆ ವಹಿಸಬೇಕು.
ಸಂದರ್ಭ ಬಂದರೆ ಹೋರಾಟದ ಮೂಲಕ ಧ್ವನಿ ಎತ್ತಬೇಕು,’ ಎಂದು ಹೇಳಿದರು. “ಸಾಕಷ್ಟು ಮಹನೀಯರ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಬಂದಿದ್ದು, ಸಮಾನತೆ, ಸಹಬಾಳ್ವೆ, ಜಾತ್ಯತೀತತೆ ತತ್ವದಡಿ ಎಲ್ಲರನ್ನೂ ಒಗ್ಗೂಡಿಸುವ ಹಾಗೂ ಪರಸ್ಪರ ಬೆಸೆಯುವ ಕೆಲಸ ನಿರಂತರವಾಗಿ ಆಗಬೇಕು,’ ಎಂದರು.
ಜೆಡಿಎಸ್ ಸದಾ ಸಮಾನತೆ ಬಯಸುವ ಪಕ್ಷ. ಮಹಾತ್ಮಗಾಂಧೀಜಿ, ಜಯಪ್ರಕಾಶ್ ನಾರಾಯಣ್, ಬಿ.ಆರ್.ಅಂಬೇಡ್ಕರ್ ಅವರ ಆಶಯಗಳ ಪ್ರಕಾರ ನಡೆಯುತ್ತಿರುವ ಪಕ್ಷ. ಎಲ್ಲರಿಗೂ ಸಮಬಾಳು, ಸಮಪಾಲು ನಮ್ಮ ಮಂತ್ರ ಎಂದು ಹೇಳಿದರು. ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ವಿಧಾನಪರಿಷತ್ ಸದಸ್ಯರಾದ ರಮೇಶ್‌ಬಾಬು, ಟಿ.ಎ.ಶರವಣ, ಪಕ್ಷದ ಮುಖಂಡರಾದ ಜಫ್ರುಲ್ಲಾಖಾನ್, ಎ.ಪಿ.ರಂಗನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.