ಶ್ರೇಷ್ಠ ಸಂವಿಧಾನದಿಂದ ಪ್ರಜಾಪ್ರಭುತ್ವ ಬಲಿಷ್ಠ
Team Udayavani, Aug 16, 2017, 12:27 PM IST
ಮೈಸೂರು: ದೇಶದ ಐಕ್ಯತೆ ಕಾಪಾಡಿಕೊಂಡು ವಿದೇಶಗಳ ಬೆದರಿಕೆಯನ್ನು ಸಮರ್ಥವಾಗಿ ಎದುರಿಸಲು ಬಲಿಷ್ಠ ಭಾರತ ನಿರ್ಮಾಣಕ್ಕೆ ಮುಂದಾಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು. ಜಿಲ್ಲಾಡಳಿತದ ವತಿಯಿಂದ ನಗರದ ಬನ್ನಿಮಂಟಪದಲ್ಲಿರುವ ದಸರಾ ಪಂಚಿನ ಕವಾಯತು ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ 71ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ದೊರೆತು 70 ವರ್ಷಗಳು ಕಳೆದಿದ್ದು, ಪ್ರಸ್ತುತ ದೇಶದೆಲ್ಲೆಡೆ 71ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಆದರೆ ದೇಶದಲ್ಲಿ ಇಂದಿಗೂ ಅನೇಕ ಸಮಸ್ಯೆಗಳು ಹಾಗೂ ಸವಾಲುಗಳು ಕಾಡುತ್ತಿದ್ದು, ಹೀಗಾಗಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಆ ಮೂಲಕ ಏಕತೆಯಿಂದ ಎಲ್ಲಾ ಸವಾಲುಗಳನ್ನು ಎದುರಿಸಿ ದೇಶದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಭಾ ರತವನ್ನು ವಿಶ್ವದಲ್ಲೇ ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಬೇಕಿದೆ ಎಂದು ಹೇಳಿದರು.
ಬಲಿಷ್ಠ ಪ್ರಜಾಪ್ರಭುತ್ವ: ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ವಿಫಲವಾಗಿದೆ. ಆದರೆ, ಭಾರತ ಶ್ರೇಷ್ಠ ಸಂವಿಧಾನವನ್ನು ಹೊಂದಿರುವ ಕಾರಣ ಇಲ್ಲಿನ ಪ್ರಜಾಪ್ರಭುತ್ವ ಇಂದಿಗೂ ಬಲಿಷ್ಠವಾಗಿದೆ ಎಂದರು. ಬ್ರಿಟಿಷರ ದಾಸ್ಯದಿಂದ ಹೊರಬರಲು ನಡೆಯುತ್ತಿದ್ದ ಹೋರಾಟದ ಜತೆಗೆ ಸಮಾಜದಲ್ಲಿದ್ದ ಅಸ್ಪೃಶ್ಯತೆ, ಮೂಢನಂಬಿಕೆ, ಅನಕ್ಷರತೆ ಇನ್ನಿತರ ತಾರತಮ್ಯಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅನೇಕ ಮಹನೀಯರು ಶ್ರಮಿಸಿದ್ದು, ಇವರುಗಳನ್ನು ಸ್ಮರಿಸುವ ಜತೆಗೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಸಂವಿಧಾನಕ್ಕೆ ಎಲ್ಲರೂ ಗೌರವಿಸಬೇಕಿದೆ.
ಮಹಾತ್ಮಗಾಂಧೀಜಿ ಅಹಿಂಸಾ ಮಾರ್ಗದಿಂದಲೇ ಬ್ರಿಟಿಷ್ ಸಾಮ್ರಾಜ್ಯವನ್ನು ಮಣಿಸಿ ಜಗತ್ತಿಗೆ ಅಹಿಂಸೆ ಮತ್ತು ಸತ್ಯಾಗ್ರಹ ಮಾರ್ಗಗಳನ್ನು ಕಲಿಸಿದ್ದಾರೆ. ಆದ್ದರಿಂದ ದೇಶಕ್ಕಾಗಿ ಹೋರಾಡಿದವರ ಚರಿತ್ರೆಗಳ ಕುರಿತು ಯುವಜನರಿಗೆ ತಿಳಿಸಬೇಕು ಎಂದು ಸಲಹೆ ನೀಡಿದರು.
ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ, ಮೇಯರ್ ಎಂ.ಜೆ.ರವಿಕುಮಾರ್, ಉಪ ಮೇಯರ್ ರತ್ನಲಕ್ಷ್ಮಣ, ನಿಗಮ-ಮಂಡಳಿ ಅಧ್ಯಕ್ಷರುಗಳಾದ ಎಚ್.ಎ.ವೆಂಕಟೇಶ್, ಬಿ.ಸಿದ್ದರಾಜು, ಮಲ್ಲಿಗೆ ವೀರೇಶ್, ಜಿಲ್ಲಾಧಿಕಾರಿ ರಂದೀಪ್ ಡಿ., ಜಿಪಂ ಸಿಇಒ ಪಿ.ಶಿವಶಂಕರ್, ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್, ಕೆಪಿಎ ನಿರ್ದೇಶಕ ವಿಪುಲ್‌ಕುಮಾರ್, ಎಸ್ಪಿ ರವಿ ಡಿ.ಚನ್ನಣ್ಣನವರ, ಮುಡಾ ಆಯುಕ್ತ ಡಾ.ಮಹೇಶ್, ಪಾಲಿಕೆ ಆಯುಕ್ತ ಜಗದೀಶ್, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಮತ್ತಿತರರು ಹಾಜರಿದ್ದರು.
ಮಳೆಯಿಂದಾಗಿ ಪಥಸಂಚಲನಕ್ಕೆ ಅಡ್ಡಿ: ಸೋಮವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಅನೇಕ ಕಡೆಗಳಲ್ಲಿ ನೀರು ನಿಂತಿದ್ದರಿಂದ ಸ್ವಾತಂತ್ರ್ಯೋತ್ಸವದ ಪಥಸಂಚಲನ ನಡೆಸಲು ಸಾಧ್ಯವಾಗಲಿಲ್ಲ. ಆಕರ್ಷಕ ಪಥಸಂಚಲನದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಲು ಸಿದ್ಧರಾಗಿ ಬಂದಿದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ತುಕಡಿಗಳ ಪೊಲೀಸರು ಹಾಗೂ ಕರುಣಾಮಯಿ ಫೌಂಡೇಷನ್ ಟ್ರಸ್ಟ್‌ನ ಅಂಧ ಮಕ್ಕಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಗೌರವ ವಂದನೆ ಸಲ್ಲಿಸಿ, ಪಥಸಂಚಲನ ನಡೆಸದೆ ನಿರ್ಗಮಿಸಿದರು.
ಸಾಂಸ್ಕೃತಿಕ ಮೆರಗು: ಮಳೆಯ ನಡುವೆಯೂ ವಿವಿಧ ಶಾಲೆಗಳ ಮಕ್ಕಳು ನೃತ್ಯ ಪ್ರದರ್ಶನ ನೀಡುವ ಮೂಲಕ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಮೆರಗು ನೀಡಿದರು. ಶಕ್ತಿನಗರದ ಅಧ್ಯಯನ ಪ್ರೌಢಶಾಲೆ ಮಕ್ಕಳು ನೇಗಿಲಯೋಗಿ ಹಾಡಿಗೆ ಹೆಜ್ಜೆ ಹಾಕಿದರೆ, ಎನ್.ಆರ್.ಮೊಹಲ್ಲಾದ ಸೇಂಟ್ ಆನ್ಸ್ ಶಾಲೆ ಮಕ್ಕಳು ಸಾಮಾಜಿಕ ಪಿಡುಗಿಗೆ ಸಂಬಂಧಿಸಿದಂತೆ ನೃತ್ಯ ರೂಪಕ, ಪೀಪಲ್ಸ್ ಪಾರ್ಕ್‌ನ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಬಾಗದ ಮಕ್ಕಳು ಬಾರತಾಂಬೆ ನಿನ್ನ ಜನುಮದಿನ ಗೀತಗೆ ನೃತ್ಯ ಮಾಡಿ ಗಮನ ಸೆಳೆದರು.
ಲ್ಯಾಪ್‌ಟಾಪ್ ವಿತರಣೆ: ಸಮಾರಂಭದ ಅಂಗವಾಗಿ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಉತ್ತೀರ್ಣರಾಗಿರುವ ಜಿಲ್ಲೆಯ ಐವರು ವಿದ್ಯಾರ್ಥಿಗಳಿಗೆ ಸಚಿವರು ಲ್ಯಾಪ್‌ಟಾಪ್ ವಿತರಿಸಿದರು. ಹುಣಸೂರು ತಾಲೂಕು ಗಾವಡಗೆರೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಎಂ.ಪೂಜಾ, ಗುರುಪುರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಬಿ.ಹೃತಿಕ್, ಎಚ್.ಡಿ.ಕೋಟೆ ತಾಲೂಕಿನ ಯರಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಬಿ.ಎನ್ ಸುಷ್ಮಾ, ಮೈಸೂರು ತಾಲೂಕು ಬೀರಿಹುಂಡಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಮಹಾಲಕ್ಷ್ಮೀ, ಕಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಿ.ಕೆ.ರಮೇಶ್ ಅವರಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.