ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ದರೋಡೆ; ಪ್ರಯಾಣಿಕರು ಕಂಗಾಲು
Team Udayavani, Aug 16, 2017, 3:55 PM IST
ನವದೆಹಲಿ: ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ಮತ್ತು ಬರಿಸಿ ಸುಮಾರು 12 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣಗಳನ್ನು ಲೂಟಿ ಮಾಡಿರುವ ಘಟನೆ ಬುಧವಾರ ನಡೆದಿದೆ.
ತಮ್ಮ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿರುವುದಾಗಿ ಆಗಸ್ಟ್ ಕ್ರಾಂತಿ ರಾಜಧಾನಿ ರೈಲಿನ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ದೂರು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ರೈಲಿನ 8, 10 ಬೋಗಿಗಳಲ್ಲಿ ಈ ಘಟನೆ ನಡೆದಿದೆ. ಅಲ್ಲದೆ ರೈಲಿನಲ್ಲಿ ಸೂಕ್ತ ಭದ್ರತಾ ಸಿಬ್ಬಂದಿಯೇ ಇರಲಿಲ್ಲವಾಗಿತ್ತು ಎಂದು ಮಹಿಳಾ ಪ್ರಯಾಣಿಕರೊಬ್ಬರು ದೂರಿದ್ದಾರೆ. ಆಕೆಯ ಚಿನ್ನಾಭರಣ ಹಾಗೂ 50 ಸಾವಿರ ನಗದು ಕಳ್ಳತನವಾಗಿರುವುದಾಗಿ ತಿಳಿಸಿದ್ದಾರೆ.
ಪ್ರಯಾಣಿಕರು ನೀಡಿರುವ ಮಾಹಿತಿ ಪ್ರಕಾರ, ಬಹುತೇಕ ಪ್ರಯಾಣಿಕರು ದಿಢೀರ್ ಆಗಿ ನಿದ್ರೆಗೆ ಜಾರಿದ್ದರು. ಬಳಿಕ ಎಚ್ಚರವಾದಾಗ ನಮ್ಮ, ನಮ್ಮ ಪರ್ಸ್ ಗಳು ನಾಪತ್ತೆಯಾಗಿರುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಪ್ರಯಾಣಿಕರಾದ ಅಲ್ಕಾ ಜೈನ್ ಅವರ ಪರ್ಸ್, ಐ ಫೋನ್, ಪಾಸ್ ಪೋರ್ಟ್, ಆಧಾರ್ ಕಾರ್ಡ್ ಹಾಗೂ 18 ಸಾವಿರ ರೂ. ನಗದು ಕಳವಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದು ಬೋಗಿಯಲ್ಲಿ ಬೊಬ್ಬೆ ಕೇಳಿಸಿದಾಗ ಅಲ್ಲಿ ಹೋಗಿ ನೋಡಿದಾಗಲೂ ಆಕೆಯ ಪರ್ಸ್ ಕಳ್ಳತನವಾಗಿರುವುದು ಗಮನಕ್ಕೆ ಬಂದಿತ್ತು ಎಂದು ಹೇಳಿದ್ದಾರೆ.
ಸುಮಾರು ಆರು ಮಂದಿ ಪ್ರಯಾಣಿಕರನ್ನು ದರೋಡೆ ಮಾಡಲಾಗಿದೆ. ಈ ಬಗ್ಗೆ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ರೈಲ್ವೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.