ಹೈದರಾಬಾದ್ ನಿಜಾಮನಿಗಿದ್ದ ಕಳಕಳಿ ಮೋದಿ, ಸಿದ್ದುಗಿಲ್ಲ
Team Udayavani, Aug 17, 2017, 7:10 AM IST
ರಾಮನಗರ: ಸ್ವಾತಂತ್ರ್ಯಪೂರ್ವದಲ್ಲಿ ಹೈದರಾಬಾದ್ ಪ್ರಾಂತ್ಯದಲ್ಲಿ ನಿರಂತರ ಎರಡು ವರ್ಷಗಳ ಕಾಲ ಬರಗಾಲ ಸಂಭವಿಸಿದರೆ ಅಲ್ಲಿನ ದೊರೆ ನಿಜಾಮ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡುತ್ತಿದ್ದ. ತೆರಿಗೆಯನ್ನು ಕಟ್ಟಿಸಿಕೊಳ್ಳುತ್ತಿರಲಿಲ್ಲ. ಇಷ್ಟು ಕನಿಷ್ಠ ಜ್ಞಾನ, ಕಳಕಳಿ ಕೂಡ ಪ್ರಧಾನಿ ನರೇಂದ್ರ ಮೋದಿಗಾಗಲಿ, ಮುಖ್ಯಮಂತ್ರಿ ಸಿದ್ದರಾಮಯ್ಯಗಾಗಲಿ ಇಲ್ಲ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಹೊರವಲಯದಲ್ಲಿರುವ ಜಾನಪದ ಲೋಕದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿಯಮಗಳು ಸಹ ಇವನ್ನೇ ಹೇಳುತ್ತವೆ. ನಿರಂತರ ಮೂರು ವರ್ಷಗಳ ಕಾಲ ಬರಗಾಲವಿದ್ದರೆ, ರೈತನ ನೆರವಿಗೆ ಬರಬೇಕಾಗಿದೆ. ಆದರೆ ಯಾವ ಬ್ಯಾಂಕು, ಸರ್ಕಾರಗಳಾಗಲಿ ರೈತರ ನೆರವಿಗೆ ಧಾವಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಗ್ರಾಮೀಣ ಭಾಗಗಳಲ್ಲಿ ರೈತ ಮಹಿಳೆಯರು ಸಿOಉà ಶಕ್ತಿ ಗುಂಪುಗಳನ್ನು ರಚಿಸಿಕೊಂಡಿದ್ದಾರೆ. ಈ ಗುಂಪುಗಳಿಗೆ ಅಲ್ಪ ಪ್ರಮಾಣದ ಸಹಾಯಧನ ಕೊಟ್ಟ ಸರ್ಕಾರ, ಗುಂಪಿನ ಸದಸ್ಯರು ತಮ್ಮಲ್ಲೇ ಸಾಲ ಮಾಡಿಕೊಂಡು, ಬಡಿದಾಡಿಕೊಳ್ಳುವಂತೆ ಮಾಡಿದೆ. ಗುಂಪುಗಳಲ್ಲಿ ಮಾಡಿರುವ ಸಾಲ ಕೂಡ ಕೃಷಿಗಾಗಿಯೇ. ಹೀಗಾಗಿ, ಗ್ರಾಮೀಣ ಭಾಗದ ರೈತ ಮಹಿಳೆಯರ ಗುಂಪುಗಳ ಸಾಲವನ್ನು ಸಹ ಮನ್ನಾ ಮಾಡಬೇಕಾಗಿದೆ ಎಂದು ಅವರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !
Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್ ಅವ್ಯವಹಾರ ಉಲ್ಲೇಖ: ದಿನೇಶ್ ಗುಂಡೂರಾವ್
Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.