ಮುದೂರು-ಗುಂಡಿನಹೊಳೆ ರಿಂಗ್ ರಸ್ತೆಗೆ 10 ಕೋ.ರೂ.: ಗೋಪಾಲ ಪೂಜಾರಿ
Team Udayavani, Aug 17, 2017, 8:20 AM IST
ಕೊಲ್ಲೂರು: ಬಹು ವರುಷಗಳ ಹೋರಾಟದ ಬಳಿಕ ಬಸ್ರಿಬೇರು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಸೌಲಭ್ಯದ ಉದ್ಘಾಟನ ಸಮಾರಂಭ ಆ.15ರಂದು ಬಸ್ರಿಬೇರಿನಲ್ಲಿ ನಡೆಯಿತು. ರಾಜ್ಯ ಸರಕಾರದ ವಿಶೇಷ ಅನುದಾನದಡಿ 35 ಲಕ್ಷ ರೂ. ವೆಚ್ಚದಲ್ಲಿ ಒದಗಿಸಲಾದ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಉದ್ಘಾಟಿಸಿದ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿ, ಅತೀ ಹಿಂದುಳಿದ ಪ್ರದೇಶವಾಗಿರುವ ಬಸ್ರಿಬೇರಿನ ತಾಂತ್ರಿಕ ದೋಷಗಳನ್ನು ನಿವಾರಿಸಲಾಗಿದ್ದು ಈ ಭಾಗದ ಜನರ ಬೇಡಿಕೆ ಈಡೇರಿಸಲಾಗಿದೆ ಎಂದರು.
ಮುದೂರು ಮೈದಾನದಿಂದ ಉದಯ ನಗರ ಹಾಗೂ ಗುಂಡಿನಹೊಳೆ ರಿಂಗ್ ರಸ್ತೆ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆಯಾಗಿದ್ದು ಟೆಂಡರ್ ಕರೆಯಲಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಜಡ್ಕಲ್ ಪಂಚಾಯತ್ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ 1 ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ಭೋವಿ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಬೇಕೆಂಬ ಈ ಭಾಗದ ಜನರ ಒತ್ತಾಯಕ್ಕೆ ಸರಕಾರ
ಸ್ಪಂದಿಸಿದ್ದು ಅನುಮತಿಯ ಆದೇಶ ನೀಡಿದೆ. ಕೊಲ್ಲೂರು-ಮುದೂರು- ಜಡ್ಕಲ್ ಸಹಿತ ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಜನರ ಮೂಲ ಸಮಸ್ಯೆಗಳಿಗೆ ಸ್ಪಂದಿಸಲಾಗಿದ್ದು ಮಿಕ್ಕುಳಿದ ಯಾವುದೇ ಸಮಸ್ಯೆ ಇದ್ದಲ್ಲಿ ಖಂಡಿತ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ಜಿ.ಪಂ. ಸದಸ್ಯ ಶಂಕರ ಪೂಜಾರಿ, ತಾ.ಪಂ. ಸದಸ್ಯೆ ಗ್ರೀಷ್ಮ ಭಿಡೆ, ಜಡ್ಕಲ್ ಗ್ರಾ.ಪಂ. ಅಧ್ಯಕ್ಷ ಅನಂತಮೂರ್ತಿ, ಮಾಜಿ ಅಧ್ಯಕ್ಷ ದೇವದಾಸ್, ವಿಎಸ್‌ಎಸ್ ಬ್ಯಾಂಕ್ ಅಧ್ಯಕ್ಷ ಪಿ.ಎಲ್.ಜೋಸ್, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಮೇಶ ಗಾಣಿಗ ಮುಂತಾದವರು ಉಪಸ್ಥಿತರಿದ್ದರು.
ವಿದ್ಯಾ ದಿನೇಶ ಸ್ವಾಗತಿಸಿದರು. ಉದಯ ಕಾರ್ಯಕ್ರಮ ನಿರೂಪಿಸಿ, ವಸಂತಿ ಮರಾಠಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.