ಹಿಜ್ಬುಲ್ ಅಂ.ರಾ. ಉಗ್ರ ಸಂಘಟನೆ: ಅಮೆರಿಕ
Team Udayavani, Aug 17, 2017, 8:35 AM IST
ವಾಷಿಂಗ್ಟನ್: ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದೀನ್ ಅನ್ನು ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಿಸಿದೆ. ಪರಿಣಾಮ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಎದುರಿಸುವಂತಾಗಿದೆ.
ಇತ್ತೀಚೆಗಷ್ಟೇ ಅಮೆರಿಕ ಹಿಜ್ಬುಲ್ ಮುಖಂಡ ಸೈಯಸ್ ಸಲಾಹುದ್ದೀನ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸಿತ್ತು. ಇದರ ಬೆನ್ನಲ್ಲೇ ಉಗ್ರ ಸಂಘಟನೆಯನ್ನೂ ಕಪ್ಪು ಪಟ್ಟಿಗೆ ಸೇರಿಸಿದೆ. ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಪಟ್ಟಿಗೆ ಹಿಜ್ಬುಲ್ ಸೇರಿದ್ದರಿಂದ ಅದರ ವಿರುದ್ಧ ಅನೇಕ ನಿರ್ಬಂಧಗಳು ಜಾರಿಯಾಗಲಿವೆ. ಹಿಜ್ಬುಲ್ ಭಯೋತ್ಪಾದಕ ದಾಳಿಗಳನ್ನು ಸಂಘಟಿಸುವ ವಿರುದ್ಧ ಅದಕ್ಕೆ ಲಭ್ಯವಾಗುವ ಅಂತಾರಾಷ್ಟ್ರೀಯ ಮೂಲಗಳಿಗೆ ಕಡಿವಾಣ ಬೀಳಲಿದೆ ಎಂದು ಅಮೆರಿಕ ಗೃಹ ಇಲಾಖೆ ಪ್ರಕಟಣೆ ಹೇಳಿದೆ. ಇದರೊಂದಿಗೆ ಅಮೆರಿಕ ವ್ಯಾಪ್ತಿಯಲ್ಲಿ ಬರುವ ಹಿಜ್ಬುಲ್‌ಗೆ ಸೇರಿದ ಯಾವುದೇ ಆಸ್ತಿ ಪಾಸ್ತಿ, ವ್ಯವಹಾರಗಳಿಗೆ ನಿರ್ಬಂಧ ಹೇರಲಾಗುತ್ತದೆ. ಹಿಜ್ಬುಲ್‌ನೊಂದಿಗೆ ಯಾವುದೇ ಅಮೆರಿಕ ಪ್ರಜೆ ವ್ಯವಹಾರವನ್ನೂ ನಡೆಸುವಂತೆಯೂ ಇರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.