ಕೇಂದ್ರ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ವಿಫಲ

Team Udayavani, Aug 17, 2017, 2:29 PM IST

17-CHI-2.jpg

ಎನ್‌.ಆರ್‌.ಪುರ: ಕೇಂದ್ರ ಸರ್ಕಾರ ಬಡಜನರಿಗಾಗಿ ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ತಂದಿದೆ. ಆದರೆ ರಾಜ್ಯ ಸರ್ಕಾರ ಅದನ್ನು ಜನರಿಗೆ ಸರಿಯಾಗಿ ತಲುಪಿಸುತ್ತಿಲ್ಲ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. 

ಅವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೇಂದ್ರ ಸರ್ಕಾರದ ಭಾರತೀಯ ಜನ ಔಷಧ ಕೇಂದ್ರ ಉದ್ಘಾಟಿಸಿ ಮಾತನಾಡಿ, ಕಳೆದ ಮೂರು ವರ್ಷದ ಅವ ಧಿಯಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ಇಲಾಖೆಗಳಲ್ಲಿ ಅಮೂಲಾಗ್ರ ಕ್ರಾಂತಿಯನ್ನೇ ಮಾಡಿದೆ.
ವೈದ್ಯಕೀಯ ಸೀಟುಗಳ ಮಾರಾಟದ ದಂಧೆಯನ್ನು ತಡೆಯಲು ನೀಟ್‌ನ್ನು ಜಾರಿಗೆ ತಂದು ಬಡ ಮಕ್ಕಳಿಗೆ ವೈದ್ಯಕೀಯ ಸೀಟುಗಳು ದೊರಕುವಂತೆ ಮಾಡಿದ್ದಾರೆ. ದೇಶದಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಸಾಮಾನ್ಯ ಖಾಯಿಲೆಗಳಂತೆ ಬೆಳೆದಿದೆ. ಬಡ ಜನರು ಹಣ ಖರ್ಚು ಮಾಡಲಾಗದೆ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ನರೇಂದ್ರ ಮೋದಿಯವರು ಹೃದಯ ಸಂಬಂಧಿ ಖಾಯಿಲೆಗೆ ಅಳವಡಿಸುವ ಮೆಡಿಕೇಟೆಡ್‌ ಸ್ಟೆಂಟ್‌ಗಳು 7 ಲಕ್ಷ ಇದ್ದದ್ದನ್ನು 40 ಸಾವಿರಕ್ಕೆ ಹಾಗೂ ನಾನ್‌ ಮೆಡಿಕೇಟೆಡ್‌ ಸ್ಟೆಂಟ್‌ ಗಳು 1.50 ಲಕ್ಷ ಇದ್ದದ್ದನ್ನು ಕೇವಲ ಆರೇಳು ಸಾವಿರಗಳಿಗೆ ದೊರಕುವಂತೆ ಮಾಡಿದ್ದಾರೆ ಎಂದರು.

ಶಾಸಕ ಡಿ.ಎನ್‌.ಜೀವರಾಜ್‌ ಮಾತನಾಡಿ, ಕೆಲ ಕುಟುಂಬದವರ ಮಕ್ಕಳು ಬೇರೆ ದೇಶಕ್ಕೆ ಉದ್ಯೋಗವರಿಸಿ ಹೋಗಿರುತ್ತಾರೆ. ತಮ್ಮ ಪೋಷಕರು ತೀರಿಕೊಂಡಾಗ ಬರುವವರೆಗೂ ಶವವನ್ನು ಕೆಡದಂತೆ ಇಡಲು ಕ್ಷೇತ್ರದ 8 ಹೋಬಳಿಗೆ 8 ಫ್ರಿಜರ್‌ಗಳನ್ನು ನೀಡಲಾಗಿದೆ. ಅದರ ಉದ್ಘಾಟನೆಯೂ ಇಂದು ನಡೆದಿದೆ.  ರಕ್ತ ಶೇಖರಣಾ ಕೇಂದ್ರವನ್ನೂ ಸಹ ಉದ್ಘಾಟಿಸಲಾಗಿದೆ. ಇನ್ನು ಈ ಆಸ್ಪತ್ರೆಯ ಶವಾಗಾರಕ್ಕೆ ತೆರಳುವ ರಸ್ತೆಯನ್ನು ಕಾಂಕ್ರೀಟೀಕರಣ ಕಾಮಗಾರಿ ಇನ್ನೆರಡು ಮೂರು ತಿಂಗಳೊಳಗೆ ಪ್ರಾರಂಭಿಸಲಾಗುತ್ತದೆ ಎಂದರು. 

ಜಿ.ಪಂ. ಉಪಾಧ್ಯಕ್ಷ ಶೆಟ್ಟಿಗದ್ದೆ ರಾಮಸ್ವಾಮಿ, ತಾ.ಪಂ. ಸ್ಥಾಯಿ ಸಮಿತಿ ಸದಸ್ಯ ಸುಧಾಕರಾಚಾರಿ, ಸದಸ್ಯರುಗಳಾದ ಪ್ರೇಮಾ, ಎಂ.ಎನ್‌.ನಾಗೇಶ್‌, ಪ.ಪಂ. ಉಪಾಧ್ಯಕ್ಷೆ ಸಾವಿತ್ರಿ, ಸದಸ್ಯರುಗಳಾದ ಸಮೀರಾನಯೀಂ, ಆಶಾ ಶ್ರೀನಾಥ್‌,ನಾಗರತ್ನ, ಕೊಪ್ಪ ತಾ.ಪಂ. ಸದಸ್ಯ ಕಿರಣ್‌, ಟಿಎಪಿಸಿಎಂಎಸ್‌ ಅಧ್ಯಕ್ಷ ಗುಳದಮನೆ ಪ್ರಕಾಶ್‌, ತಾಲೂಕು ವೈದ್ಯಾಧಿಕಾರಿ ಎಲೊಸ್‌.ಜಿ.ವರ್ಗೀಸ್‌ ,ಪಿ.ಪ್ರಭಾಕರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

3

Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ

8-uv-fusion

Lockdown Days: ಲಾಕ್‌ಡೌನ್‌ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!

7-uv-fusion

UV Fusion: ಮಾತಲ್ಲಿರಲಿ ಗಮ್ಮತ್ತು; ಅಳತೆ ಮೀರಿದರೆ ಆಪತ್ತು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.