ಅನಧಿಕೃತ ಗಣಿಗಾರಿಕೆ ಖಂಡಿಸಿ ಪ್ರತಿಭಟನೆ
Team Udayavani, Aug 18, 2017, 6:40 AM IST
ಹೆಬ್ರಿ: ಕಾರ್ಕಳ ತಾಲೂಕಿನ ಚಾರ ಗ್ರಾ.ಪಂ. ವ್ಯಾಪ್ತಿಯ ಹುತ್ತುರ್ಕೆಯಲ್ಲಿ ಅನಧಿಕೃತವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂಬುದನ್ನು ಖಂಡಿಸಿ ಆ. 17ರಂದು ಚಾರ ಗ್ರಾಮಸ್ಥರು ಹಾಗೂ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು.
ಹಲವಾರು ಸಮಯಗಳಿಂದ ನಡೆ ಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಪಂಚಾಯತ್‌ಗೆ ದೂರು ನೀಡಿ ಅಧಿಕಾರಿಗಳು ರೈಡ್ ಮಾಡಿದರು ಕೂಡ ಯಾವುದೇ ಭಯವಿಲ್ಲದೆ ಗಣಿಗಾರಿಕೆಯನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಇಲಾಖೆ ಇನ್ನಾ ದರೂ ಶೀಘ್ರವಾಗಿ ಕ್ರಮ ಕೈಗೊಳ್ಳಲಿ ಎಂದು ಪ್ರತಿಭಟನೆಯ ಪ್ರಮುಖರಲ್ಲಿ ಓರ್ವರಾದ ಡಿ.ಜಿ. ರಾಘವೇಂದ್ರ ಹೇಳಿದರು. ಅನಧಿಕೃತವಾಗಿ ಅಕ್ರಮ ಗಣಿಗಾರಿಕೆಯನ್ನು ಒಬ್ಬ ಗ್ರಾಮ ಪಂಚಾಯತ್ ಸದಸ್ಯನಾಗಿ ನಡೆಸುತ್ತಿರುವುದು ಅತ್ಯಂತ ಖೇದಕರ ಸಂಗತಿ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ ಪ್ರಸನ್ನ ಶೆಟ್ಟಿ ಹೇಳಿದರು. ಕೂಡಲೇ ಕ್ರಮವನ್ನು ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಿಥುನ್ ಶೆಟ್ಟಿ ಹೇಳಿದರು.
ಅಕ್ರಮ ಗಣಿಗಾರಿಕೆ ತನಿಖೆಗೆ ಆಗ್ರಹ: ಕಾರ್ಕಳ ತಾಲೂಕಿನ ಚಾರ ಗ್ರಾ.ಪಂ. ವ್ಯಾಪ್ತಿಯ ಹುತ್ತುರ್ಕೆ ಸರ್ವೆ ನಂಬರ್ 105ರಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಪಂಚಾಯತ್ ಹಾಗೂ ಕಂದಾಯ ಅಧಿಕಾರಿಗಳ ಗಮನಕ್ಕೆ ಬಂದಿದ್ದು ಸ್ಥಳಕ್ಕೆ ಬೇಟಿ ನೀಡಿ ನಿಲುಗಡೆಗೆ ಆದೇಶ ನೀಡಿದ್ದರೂ ಯಾವುದೇ ಮುಲಾಜಿಲ್ಲದೆ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವ ದಿನೇಶ್ ಶೆಟ್ಟಿ ವಿರುದ್ಧ ಪಂ. ಹಾಗೂ ಕಂದಾಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಚಾರ ಪಂಚಾಯತ್‌ನ ಗ್ರಾಮಕರಣಿಕರಿಗೆ ಮನವಿಯನ್ನು ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.