ಧನಾತ್ಮಕ ಚಿಂತನೆ ಅಗತ್ಯ: ಡಾ| ದೇವರಾಜ್‌


Team Udayavani, Aug 18, 2017, 8:55 AM IST

devaraj.jpg

ಮಹಾನಗರ: ಹೆತ್ತವರು ಸದಾ ತಮ್ಮ ಮಕ್ಕಳೊಂದಿಗೆ ಸ್ವಲ್ಪ ಸಮಯವಾದರು ಅವರ ವಿದ್ಯಾಭ್ಯಾಸದ ಬಗ್ಗೆ ಮಾತನಾಡಬೇಕು. ತಮ್ಮ ಮಕ್ಕಳಲ್ಲಿ ಧನಾತ್ಮಕವಾದ ಭಾವನೆ ಹಾಗೂ ಯೋಚನೆಗಳನ್ನು ತುಂಬಿ ಆತ್ಮ ವಿಶ್ವಾಸ ಬೆಳೆಸುವಂತೆ ಹೆತ್ತವರು ಹಾಗೂ ಶಿಕ್ಷಕರು ಪ್ರಯತ್ನ ಪಡಬೇಕು. ಒಬ್ಬ ವಿದ್ಯಾರ್ಥಿ ತನ್ನ ಚಿಕ್ಕ ವಯಸ್ಸಿನಲ್ಲೇ ಧನಾತ್ಮಕವಾದ ಆತ್ಮ ಗೌರವ ಹೊಂದಿದಾಗ ಮುಂದೆ ಉತ್ತಮ ಸಾಧಕನಾಗುತ್ತಾನೆ ಎಂದು ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಅಧ್ಯಕ್ಷ ಡಾ| ದೇವರಾಜ್‌ ಕೆ. ಹೇಳಿದರು.

ಮಣ್ಣಗುಡ್ಡೆ  ಮಂಗಳ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಹೆತ್ತವರು ಮತ್ತು ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರಿನ ಜೀವವಿಮಾ ನಿಗಮ, ಬ್ರಾಂಚ್‌-2, ಇದರ ಸೀನಿಯರ್‌ ಬ್ರಾಂಚ್‌  ಮ್ಯಾನೇಜರ್‌ ವಿಜಯ ಕುಮಾರ್‌ ಅವರು ಶಾಲಾ   ಬಿಮಾ ಯೋಜನೆ  ಬಗ್ಗೆ ಮಾಹಿತಿ ನೀಡಿದರು.

ಹಳೆ ವಿದ್ಯಾರ್ಥಿನಿ ಕುಮಾರಿ ಅನುಷಾ ಎಸ್‌. ದೇವಾಡಿಗ  ಅವರು ಸಿಎ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಲಿಯೇ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿರುವುದಕ್ಕೆ ಶಿಕ್ಷಕ-ರಕ್ಷಕ ಸಂಘದ ವತಿಯಿಂದ ಸಮ್ಮಾನಿಸಲಾಯಿತು. ಹಾಗೂ ಹತ್ತನೇ ತರಗತಿಯ 2017ರ ಮಾರ್ಚ್‌ನಲ್ಲಿ  ಜರಗಿದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು  ಸಮ್ಮಾನಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಉಷಾ ಪ್ರಭಾವತಿ ವಾರ್ಷಿಕ ವರದಿ ಮಂಡಿಸಿದರು.
ಮಹಾಸಭೆಯಲ್ಲಿ 2017-18ನೇ ಸಾಲಿನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂರುನ್ನಿಸ ಅವರು ಅಧ್ಯಕ್ಷರಾಗಿ,  ಪುಷ್ಪಲತಾ ಉಪಾಧ್ಯಕ್ಷರಾಗಿ ಹಾಗೂ ಮೇಘನಾ ಎಂ. ಭಟ್‌ ಖಜಾಂಚಿಯಾಗಿ ಆಯ್ಕೆಯಾದರು. 13 ಮಂದಿಯನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಹಾಸಭೆ ನೇಮಿಸಿತು. ಶಿಕ್ಷಕ-ರಕ್ಷಕ ಸಂಘದ ನಿಬಂಧನೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಶಿವಾನಂದ  ಮೊಲಿ, ಎಸ್‌. ರಾಮಚಂದ್ರ ದೇವಾಡಿಗ,  ಕೃಷ್ಣಪ್ಪ ಎಂ. ದೇವಾಡಿಗ, ಭಾಸ್ಕರ ಇಡ್ಯಾ, ಕುಸುಮಾ ಎಚ್‌. ದೇವಾಡಿಗ ಮತ್ತು ಕರುಣಾಕರ್‌ ಎಂ. ಎಚ್‌. ಉಪಸ್ಥಿತರಿದ್ದ‌ರು. 

ಶಾಲಾ ಸಂಚಾಲಕ ಡಾ| ಸುಂದರ ಮೊಲಿ ಸ್ವಾಗತಿಸಿದರು. ಶಿಕ್ಷಕಿ ವಿಜಯಲಕ್ಷಿ$¾à  ವಂದಿಸಿದರು. ಶಿಕ್ಷಕಿ ಕಿರಣ್‌ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.