ಮೊರಾರ್ಜಿ ದೇಸಾಯಿ ಹೆಸರು ಬದಲಿಸುವ ಉದ್ದೇಶ ಇಲ್ಲ: ಸಿಎಂ
Team Udayavani, Aug 18, 2017, 8:00 AM IST
ಬೆಂಗಳೂರು: ವಸತಿ ಶಾಲೆಗಳಿಗೆ ಇಟ್ಟಿರುವ ಮೊರಾರ್ಜಿ ದೇಸಾಯಿ ಹೆಸರನ್ನು ಬದಲಾವಣೆ ಮಾಡುವ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ಆರಂಭಿಸುವ ಶಾಲೆಗಳಿಗೆ ಮಾತ್ರ ಇಂದಿರಾಗಾಂಧಿ ಹೆಸರು ಇಡಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ವಸತಿ ಶಾಲೆಗಳಿಗೆ ಮೊರಾರ್ಜಿ ದೇಸಾಯಿ ಅವರ ಹೆಸರು ನಾಮಕರಣ ಮಾಡಿದ್ದೇ ನಾನು. ಹಣಕಾಸು ಸಚಿವನಾಗಿದ್ದಾಗ ಮೊರಾರ್ಜಿ ದೇಸಾಯಿ ಹೆಸರು ನಾಮಕರಣ ಮಾಡಿದೆ.
ಯಡಿಯೂರಪ್ಪ ಅವರಿಗೆ ಇದು ಗೊತ್ತಾ ಎಂದು ಪ್ರಶ್ನಿಸಿದರು. ಅಂಬೇಡ್ಕರ್ ಅವರ 125ನೇ ವರ್ಷದ ಜನ್ಮದಿನಾಚಣೆ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ 125 ವಸತಿ ಶಾಲೆ ಆರಂಭಿಸುತ್ತಿದ್ದೇವೆ. ಅದೇ ರೀತಿ ಇಂದಿರಾಗಾಂಧಿ ಅವರ 100ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ 100 ವಸತಿ ಶಾಲೆಗಳಿಗೆ ಚಾಲನೆ ನೀಡಿದ್ದೇವೆ. ದೇವರಾಜ ಅರಸು ಅವರ ಹೆಸರಿನಲ್ಲೂ ಶಾಲೆಗಳನ್ನು ಆರಂಭಿಸಿದ್ದೇವೆ. ಬಿಜೆಪಿಯವರು ಸುಮ್ಮನೆ ಗೊಂದಲ ಸೃಷ್ಟಿ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ.ಕ.ದ ವೈಭವಿ, ಉಡುಪಿಯ ಧೀರಜ್ ಐತಾಳ್ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ
D.K. Shivakumar: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಬಗ್ಗೆ ಚರ್ಚೆ
KEA: ಎಂಎಸ್ಸಿ ನರ್ಸಿಂಗ್: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ
Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ
ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.