ಆರೋಪ ಮುಕ್ತವಾಯಿತು; ಇನ್ನು ಕ್ಷೇತ್ರಕ್ಕೆ ಸ್ಪರ್ಧೆ
Team Udayavani, Aug 18, 2017, 7:30 AM IST
ಬೆಂಗಳೂರು: ಮಾಜಿ ಸಚಿವ, ಬಿಜೆಪಿಯ ಹರತಾಳು ಹಾಲಪ್ಪ ಕೊನೆಗೂ ತಮ್ಮ ಮೇಲೆ ಬಂದಿದ್ದ ಅತ್ಯಾಚಾರ ಆರೋಪದಿಂದ
ಮುಕ್ತಗೊಂಡಿದ್ದಾರೆ. ಆ ಮೂಲಕ ತಮಗೆ ಹಾಗೂ ಹಿಂದೆ ಇದ್ದ ಬಿಜೆಪಿ ಸರ್ಕಾರಕ್ಕೆ ಉಂಟಾಗಿದ್ದ ಮುಜುಗರವನ್ನು ದೂರ ಮಾಡಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮತ್ತಷ್ಟು ಪರಿಣಾಮಕಾರಿಯಾಗಿ ಸಿದ್ಧತೆ ನಡೆಸಲು ಮುಂದಾಗಿದ್ದಾರೆ.
ರಾಜದಲ್ಲಿ 2008ರಲ್ಲಿ ಮೊಟ್ಟ ಮೊದಲ ಬಾರಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಮೊದಲ
ದಿನವೇ (ಮೇ 30) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎಚ್. ಹಾಲಪ್ಪ, ಆಹಾರ ಮತ್ತು ನಾಗರಿಕ ಸರಬರಾಜಿನಂತಹ ಮಹತ್ವದ ಖಾತೆಯ ಜವಾಬ್ದಾರಿ ನಿರ್ವಹಿಸಿದ್ದರು. ಸುಮಾರು ಒಂದು ವರ್ಷ 11 ತಿಂಗಳು ಸಚಿವರಾಗಿದ್ದ ಅವರಿಗೆ 2010ರ ಮೇ 2ರಂದು ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸಚಿವ ಸ್ಥಾನ
ಕಳೆದುಕೊಳ್ಳುವಂತಾಯಿತು.
ಇದರಿಂದ ಹಾಲಪ್ಪ ವೈಯಕ್ತಿಕವಾಗಿ ಆಘಾತ ಎದುರಿಸುವುದರ ಜತೆಗೆ ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ
ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಪಾಲಿಗೆ ಕಪ್ಪು ಚುಕ್ಕೆಯೂ ಮೂಡು ವಂತಾಗಿತ್ತು. ಪ್ರತಿಪಕ್ಷಗಳು ಮುಖ್ಯಮಂತ್ರಿ
ಯಡಿಯೂರಪ್ಪ ಅವರ ರಾಜೀನಾಮೆ ಕೇಳಿದವು. ಸರ್ಕಾರ ಮತ್ತು ಹಾಲಪ್ಪ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದವು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆ ಶರಣಾಗಿದ್ದ ಹಾಲಪ್ಪ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ
ಒಳಪಡಿಸಿತ್ತು. ಆದರೆ, ಅನಾರೋಗ್ಯದ ನೆಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಷ್ಟು ದಿನ ಆಸ್ಪತ್ರೆಯಲ್ಲೇ ಕಾಲ ಕಳೆದರು. ಇದು ಬಿಜೆಪಿ ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿತ್ತು.
ರಾಜಕೀಯ ಹಿನ್ನೆಲೆ: 2004ರಲ್ಲಿ ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆ ಹೊಸ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ
ಸ್ಪರ್ಧಿಸಿದ್ದ ಹಾಲಪ್ಪ ವಿಧಾನಸಭೆಗೆ ಆಯ್ಕೆಯಾಗಿದ್ದರು. ಆ ಮೂಲಕ ಜಿಲ್ಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಲ ತಂದುಕೊಟ್ಟರು. ನಂತರ ಕ್ಷೇತ್ರ ಮರುವಿಂಗಡಣೆ ಪರಿಣಾಮ ಹೊಸನಗರ ಕ್ಷೇತ್ರ ರದ್ದಾಗಿದ್ದರಿಂದ ಅನಿವಾರ್ಯವಾಗಿ ಸೊರಬ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು. ಆಗ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ಪಾಲಿಗೆ ಇಡೀ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಿಸಿಕೊಳ್ಳುವ ಜವಾಬ್ದಾರಿಯಿತು. ಹೀಗಾಗಿ ತಮ್ಮ ಕಟ್ಟಾ ಎದುರಾಳಿಯಾಗಿದ್ದ ಎಸ್.ಬಂಗಾರಪ್ಪ ಅವರ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಅವರನ್ನು ಸೋಲಿಸಲು ಹಾಲಪ್ಪ ಅವರನ್ನು ಆರಿಸಿದರು.
ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ ಹಾಲಪ್ಪ 21 ಸಾವಿರಕ್ಕಿಂತಲೂ ಹೆಚ್ಚು ಮತಗಳಿಂದ ಗೆದ್ದು ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದರು. ಈ ಕಾರಣದಿಂದಲೇ ಹೊಸ ಸರ್ಕಾರ ರಚನೆಯಾಗುತ್ತಿದ್ದಂತೆ ಅವರಿಗೆ ಸಚಿವರಾಗುವ ಅವಕಾಶವೂ ಸಿಕ್ಕಿತ್ತು. ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿಯೇ ನಿಭಾಯಿಸಿದ್ದ ಹಾಲಪ್ಪ ಇಲಾಖೆಯಲ್ಲಿ ಕೆಲವು ಬದಲಾವಣೆಗಳಿಗೂ ನಾಂದಿ ಹಾಡಿದ್ದರು. ಆದರೆ, 2009ರ ನವೆಂಬರ್ 26ರಂದು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಅವರ ಮೇಲೆ ಬಂದು 2010ರ ಮೇ 2ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು.
ಅಲ್ಲಿಗೆ ಹಾಲಪ್ಪ ಅವರ ರಾಜಕೀಯ ಭವಿಷ್ಯ ಮುಗಿಯಿತು ಎಂದು ಬಹುತೇ ಕರು ಭಾವಿಸಿದ್ದರು. ಆದರೆ, ತಮ್ಮ ವಿರುದ್ಧ ದಾಖಲಾದ ಪ್ರಕರಣದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುವು ದರೊಂದಿಗೆ ರಾಜಕೀಯ ಹೋರಾಟವನ್ನೂ ಮುಂದುವರಿಸಿದರು. ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಕಟ್ಟಿದಾಗ ಅವರೊಂದಿಗೆ ತಾವೂ ಪಕ್ಷ ತೊರೆದ ಹಾಲಪ್ಪ, 2013ರ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲು ಅನುಭವಿಸಿದರು. ಆದರೂ ಸುಮಾರು 34 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಅತ್ಯಾಚಾರ ಪ್ರಕರಣವನ್ನು ಮುಂದಿಟ್ಟುಕೊಂಡು ತನ್ನನ್ನು ರಾಜಕೀಯವಾಗಿ ಹಣಿಯಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸಿದ್ದರು.
ಮತ್ತೆ ಕ್ಷೇತ್ರಕ್ಕಾಗಿ ಸ್ಪರ್ಧೆ: ಹಾಲಪ್ಪ ಅವರನ್ನು ನ್ಯಾಯಾಲಯ ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿರುವುದರಿಂದ ಸೊರಬ
ಕ್ಷೇತ್ರಕ್ಕಾಗಿ ಮತ್ತೆ ತೀವ್ರ ಸ್ಪರ್ಧೆ ಏರ್ಪಡುವಂತಾಗಿದೆ. ಕ್ಷೇತ್ರದ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು, ಅವರಿಗೆ ಸೊರಬ ಕ್ಷೇತ್ರವನ್ನು ಬಿಟ್ಟು ಹಾಲಪ್ಪ ಅವರಿಗೆ ಬೇರೆ ಕ್ಷೇತ್ರ ನೀಡುವ ಬಗ್ಗೆ ಬಿಜೆಪಿಯಲ್ಲಿ ಚಿಂತನೆ ನಡೆದಿತ್ತು. ಇದೀಗ ಮತ್ತೆ ಹಾಲಪ್ಪ ಅವರು ಆ ಕ್ಷೇತ್ರಕ್ಕೆ ತೀವ್ರ ಸ್ಪರ್ಧೆಯೊಡ್ಡಲಿದ್ದಾರೆ.
2004: ಹೊಸನಗರ ಕ್ಷೇತ್ರದಿಂದ ಆಯ್ಕೆ
2008: ಸೊರಬ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ
2008 ಮೇ 30: ಬಿಎಸ್‌ವೈ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ
2010 ಮೇ 2: ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಹಾಲಪ್ಪ ರಾಜೀನಾಮೆ. 2009ರ ನ. 26ರಂದು ಹಾಲಪ್ಪ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆಎಂದು ಮಹಿಳೆಯಿಂದ ಪೊಲೀಸ್ ಮಹಾನಿರ್ದೇಶಕರಿಗೆ ದೂರು.
2010 ಮೇ 3: ಅತ್ಯಾಚಾರ ಪ್ರಕರಣದ ಕುರಿತು ಸಿಐಡಿ ತನಿಖೆಗೆ ಸರ್ಕಾರ ಆದೇಶ, ಶಿವಮೊಗ್ಗದ ವಿನೋಬಾನಗರದ ಠಾಣೆಯಲ್ಲಿ ಮಹಿಳೆಯಿಂದ ಹಾಲಪ್ಪ ವಿರುದಟಛಿ ಪ್ರಕರಣ ದಾಖಲು
2010 ಮೇ 10: ಪೊಲೀಸರ ಮುಂದೆ ಹಾಜರಾದ ಹಾಲಪ್ಪ.ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ.
2010 ಜೂ. 24: ಹಾಲಪ್ಪಗೆ ಷರತ್ತಿನ ಜಾಮೀನು ಮಂಜೂರು ಮಾಡಿದ ಹೈಕೋರ್ಟ್.
2011 ಮಾ.30: ಹಾಲಪ್ಪ ವಿರುದಟಛಿ ಜೆಎಂಎಫ್ಸಿ ಕೋರ್ಟ್‌ಗೆ ಪೊಲೀಸರಿಂದ ಆರೋಪಪಟ್ಟಿ ಸಲ್ಲಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.