ದೇವರಾಜ್‌ ಅರಸು ಜಯಂತಿ ಅದ್ಧೂರಿ ಆಚರಣೆ


Team Udayavani, Aug 18, 2017, 11:25 AM IST

Yadgir 5.jpg

ಯಾದಗಿರಿ: ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಆಶ್ರಯದಲ್ಲಿ ಆ.23ರಂದು ಬೆಳಗ್ಗೆ 11:00 ಗಂಟೆಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಾಜಿ ಸಿಎಂ ದಿ. ದೇವರಾಜ್‌ ಅರಸು ಅವರ 102ನೇ ಜಯಂತ್ಯುತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಂಜುನಾಥ್‌ ಜೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿ ಕಾರಿ, ಆಗಸ್ಟ್‌ 20ರಂದು ಬೆಳಗ್ಗೆ 9:00 ಗಂಟೆಗೆ ಎಲ್ಲಾ ಸರಕಾರಿ, ಸರ್ಕಾರೇತರ ಕಚೇರಿಗಳಲ್ಲಿ ಹಾಗೂ ಎಲ್ಲಾ ಸರಕಾರಿ, ಸರ್ಕಾರೇತರ, ಅನುದಾನಿತ ಶಾಲಾ / ಕಾಲೇಜುಗಳಲ್ಲಿ, ವಸತಿ ನಿಲಯಗಳಲ್ಲಿ ಡಿ. ದೇವರಾಜ ಅರಸ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಯಂತಿಯನ್ನು ಆಚರಿಸಬೇಕೆಂದು ಅವರು ತಿಳಿಸಿದರು. ಆ. 20ರಂದು ಕೆಪಿಎಸ್‌ಸಿಯಿಂದ ನಡೆಸಲಾಗುವ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಹಾಗೂ ಇತರೆ ಕಾರಣಗಳಿಂದ ಆ. 23ರಂದು ಬೆಳಗ್ಗೆ 11:00 ಗಂಟೆಗೆ ಜಿಲ್ಲಾಮಟ್ಟದ
ಕಾರ್ಯಕ್ರಮವನ್ನು ಆಚರಿಸಲು ವಿವಿಧ ಸಮುದಾಯದ ಮುಖಂಡರು ಮನವಿ ಮಾಡಿದ ಹಿನ್ನೆಲೆಯಲ್ಲಿ ಅಂದು ಜಯಂತ್ಯುತ್ಸವ ಆಚರಿಸಲು ಸಭೆ ನಿರ್ಧರಿಸಲಾಯಿತು. ಕಾರ್ಯಕ್ರಮದ ದಿನದಂದು ಜಿಲ್ಲಾಧಿಕಾರಿ ಕಚೇರಿ ಪ್ರವೇಶದ್ವಾರದಿಂದ ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ಡಿ. ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆ ಮಾಡುವುದು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ಶಾಲಾ ಕಾಲೇಜಿನ ಆಸಕ್ತ ಮಕ್ಕಳು ಸಮವಸ್ತ್ರದೊಂದಿಗೆ ಭಾಗವಹಿ ಸುವಂತೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು. ವಿವಿಧ ಸಮುದಾಯಗಳ, ಸಂಘ-ಸಂಸ್ಥೆಗಳ ಮುಖಂಡರು ಮತ್ತು ಎಲ್ಲಾ ಜಿಲ್ಲಾಮಟ್ಟದ
/ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಅವರು ತಪ್ಪದೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋರಲಾಯಿತು.
ಕಾರ್ಯಕ್ರಮಗಳ ನಿರೂಪಣೆಗೆ ಶಿವುಕುಮಾರ ಕಟ್ಟಿಮನಿ ಮತ್ತು ಉಪನ್ಯಾಸಕರನ್ನಾಗಿ ಡಾ| ಗಾಳೆಪ್ಪ ಪೂಜಾರಿ, ಪ್ರಾಂಶುಪಾಲರು, ಮೋರಾರ್ಜಿ ದೇಸಾಯಿ ವಸತಿ ಶಾಲೆ, ಮೋಟ್ನಳ್ಳಿ ಇವರನ್ನು ಆಯ್ಕೆ ಮಾಡಲಾಯಿತು. ಡಿ. ದೇವರಾಜ ಅರಸು ಅವರ ಜೀವನ ಚರಿತ್ರೆಗೆ ಸಂಬಂಧಿಸಿದಂತೆ ಸರ್ಕಾರಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಗಳನ್ನು, ಭಾಷಣ ಸ್ಪರ್ಧೆ, ರಸಪ್ರಶ್ನೆ, ಕ್ರಿಡೇಗಳನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗಿದ್ದು, ಅದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಹಾಗೂ ಸಮಾಧಾನಕರ ಬಹುಮಾನಗಳನ್ನು ದಿನಾಚರಣೆಯಂದು ನೀಡಲಾಗುವದೆಂದು ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಾದಗಿರಿ ಇವರು ತಿಳಿಸಿದರು. 2016-17ನೇ ಸಾಲಿನಲ್ಲಿ ಜಿಲ್ಲೆಯಲ್ಲಿನ ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿದ್ದು, ಅಭ್ಯಾಸ ಮಾಡಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ತಲಾ 03 ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲು ನಿರ್ಧರಿಸಲಾಯಿತು.

ಸುರಪುರ: ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್‌ ಅರಸು ಅವರ ಜಯಂತಿಯನ್ನು ಆ. 20ಕ್ಕೆ ಆಯಾ ಸರಕಾರಿ ಕಚೇರಿಗಳಲ್ಲಿ, ಸರಕಾರಿ ವಸತಿ ನಿಲಯಗಳಲ್ಲಿ ಪೂಜೆಸಲ್ಲಿಸಿ ಆಚರಿಸಬೇಕು. ತಾಲೂಕಾಡಳಿತದ ವತಿಯಿಂದ 23ರಂದು ತಹಸೀಲ್‌ ಕಚೇರಿಯಲ್ಲಿ ಜಯಂತಿ ಆಯೋಜಿಸಲಾಗುವುದು ಎಂದು ಗ್ರೇಡ್‌-2 ತಹಶೀಲ್ದಾರ್‌ ಸುಫೀಯಾ ಸುಲ್ತಾನ್‌ ಹೇಳಿದರು. ಇಲ್ಲಿಯ ತಹಸೀಲ್‌ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಜರುಗಿದ ಡಿ. ದೇವರಾಜ ಅರಸು ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಆ. 20ರಂದು ದೇವರಾಜ ಅರಸ ಅವರ ಜಯಂತಿ ಇದ್ದು, ಅಂದು ಇಲಾಖಾವಾರು ಪರೀಕ್ಷೆಗಳಿರುವುದರಿಂದ ತಾಲೂಕಾಡಳಿತದ ವತಿಯಿಂದ ಜಯಂತಿಯನ್ನು ಮುಂದೂಡಿ 23ರಂದು ಆಚರಿಸಲು ನಿರ್ಧರಿಸಿದೆ. ಕಾರಣ ಎಲ್ಲಾ ಸರಕಾರಿ ಕಚೇರಿ, ಶಾಲಾ-ಕಾಲೇಜು, ವಸತಿ ನಿಲಯ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಆ. 20ರಂದೆ ಅರಸ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಬೇಕು ಎಂದರು. ಜಯಂತಿ ಕಾರ್ಯಕ್ರಮದಲ್ಲಿ ಒರ್ವ ಉಪನ್ಯಾಸಕರು ಉಪನ್ಯಾಸ ನೀಡಲಿದ್ದಾರೆ. ಎಲ್ಲಾ ಇಲಾಖೆ ಅನುಷ್ಠಾನಾ ಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಜಯಂತಿ ಅಂಗವಾಗಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಬಿಸಿಎಂ ಅಧಿ ಕಾರಿ ಬಾಬು, ಎಸ್‌ಟಿಒ ಮಂಗಲಕುಮಾರ ಗುಡುಗುಂಟಿ, ಉಪವಲಯ ಅರಣ್ಯಾ ಧಿಕಾರಿ ಶರಣಪ್ಪ ಕುಂಬಾರ, ತಾಪಂ ವ್ಯವಸ್ಥಾಪಕ ಚಂದ್ರಶೇಖರ ಜೇವರ್ಗಿ, ಜಿಪಂ ಶಶಿಧರ ಹಿರೇಮಠ ಹಾಗೂ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.