ಅಂತಿಮ ವರದಿ ಸಲ್ಲಿಸದಂತೆ ಎಸಿಬಿಗೆ ಹೈ ನಿರ್ದೇಶನ
Team Udayavani, Aug 18, 2017, 11:29 AM IST
ಬೆಂಗಳೂರು: ಎಸಿಬಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಇತ್ಯರ್ಥವಾಗುವವರೆಗೆ ಭ್ರಷ್ಟಾಚಾರ ಆರೋಪದಡಿ ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಯ ಅಂತಿಮ ವರದಿ ಸಲ್ಲಿಸದಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.
ಭ್ರಷ್ಟಾಚಾರ ನಿಗ್ರಹ ದಳ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಎಂ.ಪುಟ್ಟಸ್ವಾಮಿ ಸೇರಿದಂತೆ 18ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.
ಎಸಿಬಿ ರಚನೆ ಮಾಡಿ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಇದೇ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿ ಇವೆ. ಈ ಅರ್ಜಿಗಳ ಸಂಬಂಧ ವಿಭಾಗೀಯ ಪೀಠ ತೀರ್ಮಾನ ಪ್ರಕಟಿಸುವವರೆಗೆ ಏಕಸದಸ್ಯ ಪೀಠ ಯಾವುದೇ ಆದೇಶ ಹೊರಡಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಟಪಟ್ಟ ಪೀಠ, ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿತು.
ಇದೇ ವೇಳೆ ತಮ್ಮ ಕಕ್ಷಿದಾರರ ವಿರುದ್ಧದ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ನೀಡುವಂತೆ ಅರ್ಜಿದಾರರ ಪರ ವಕೀಲರು ಮಾಡಿದ ಮನವಿಯನ್ನು ತಳ್ಳಿಹಾಕಿದ ನ್ಯಾಯಪೀಠ, ಎಸಿಬಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಇತ್ಯರ್ಥವಾಗುವವರೆಗೆ ಪ್ರಕರಣದ ತನಿಖೆಯ ಸಂಬಂಧ ಅಂತಿಮ ವರದಿ ಸಲ್ಲಿಸದಂತೆ ಎಸಿಬಿಗೆ ನಿರ್ದೇಶಿಸಿತು.
ವಿಭಾಗೀಯ ಪೀಠದಲ್ಲಿ ಪಿಐಎಲ್ ಇತ್ಯರ್ಥವಾದ ಬಳಿಕ ಅರ್ಜಿದಾರರು ಮತ್ತೆ ತಮ್ಮ ಅರ್ಜಿಗಳನ್ನು ವಿಚಾರಣೆ ನಡೆಸುವಂತೆ ಏಕಸದಸ್ಯ ಪೀಠವನ್ನು ಕೋರಬಹುದು. ಇಲ್ಲವೇ ವಿಭಾಗೀಯ ಪೀಠದ ಮುಂದೆಯೇ ಅರ್ಜಿ ಸಲ್ಲಿಸಿ, ಸಾರ್ವಜನಿಕ ಹಿತಾಸಕ್ರಿ ಅರ್ಜಿಯೊಂದಿಗೆ ತಮ್ಮ ಅರ್ಜಿಗಳನ್ನೂ ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಬಹುದು ಎಂದು ಅರ್ಜಿದಾರರಿಗೆ ನ್ಯಾಯಪೀಠ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.