ಅರಮನೆಗೆ ಆಗಮಿಸಿದ ದಸರಾ ಗಜಪಡೆ


Team Udayavani, Aug 18, 2017, 11:51 AM IST

mys2.jpg

ಮೈಸೂರು: ಅಂಬಾರಿ ಆನೆ ಅರ್ಜುನ ನೇತೃತ್ವದಲ್ಲಿ ದಸರಾ ಗಜಪಡೆಯ ಎಂಟು ಆನೆಗಳನ್ನು ಗುರುವಾರ ವಿಶೇಷ ಪೂಜೆಗಳೊಂದಿಗೆ ಅರಮನೆಗೆ ಬರಮಾಡಿಕೊಳ್ಳಲಾಯಿತು. ಮಧ್ಯಾಹ್ನ 12.05ಕ್ಕೆ ಅರಮನೆಯ ಜಯಮಾರ್ತಾಂಡ ಮಹಾ ದ್ವಾರದ ಮೂಲಕ ಆನೆಗಳು ಅರಮನೆ ಪ್ರವೇಶಿಸಿದವು.

ಆ.12ರಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಟಾಗಿಲು ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ನಡೆದ ಗಜಪಯಣ ಕಾರ್ಯಕ್ರಮದ ಮೂಲಕ ಕರೆತರಲಾದ ಮೊದಲ ತಂಡದ ಎಂಟು ಆನೆಗಳು ಇಲವಾಲದ ಅಲೋಕದಲ್ಲಿ ಬೀಡುಬಿಟ್ಟಿದ್ದವು. ಗುರುವಾರ ಬೆಳಗ್ಗೆ ಆನೆಗಳ ಮೈತೊಳೆದ ನಂತರ ಲಾರಿಗಳಲ್ಲಿ ಅಶೋಕಪುರಂನ ಅರಣ್ಯಭವನಕ್ಕೆ ಕರೆತಂದು ಅರಣ್ಯಾಧಿಕಾರಿಗಳು ಪೂಜೆ ಸಲ್ಲಿಸಿದ ನಂತರ ಕಾಲ್ನಡಿಗೆಯಲ್ಲಿ ಅರಮನೆಗೆ ಕರೆತರಲಾಯಿತು.

ಸಾಂಪ್ರದಾಯಿಕ ಸ್ವಾಗತ: ಅರಮನೆಯ ಜಯಮಾರ್ತಂಡ ದ್ವಾರದ ಬಳಿ ಆನೆಗಳಿಗೆ ಪಾದಗಳನ್ನು ತೊಳೆದು, ಪಾದಕ್ಕೆ ಅರಿಶಿನ-ಕುಂಕುಮ, ಗಂಧ, ಬಸ್ಮ, ವಿಭೂತಿ ಹಚ್ಚಿ, ಅಕ್ಷತೆ ಇಟ್ಟು, ಗರಿಕೆ ಹಾಗೂ ವಿವಿಧ ಬಗೆಯ ಹೂಗಳಿಂದ ಪೂಜೆ ಸಲ್ಲಿಸಿ, ಧೂಪ-ದೀಪಗಳಿಂದ ಆರತಿ ಮಾಡಲಾಯಿತು. ಆನೆಗಳಿಗೆ ಪಂಚಫ‌ಲಗಳು ಹಾಗೂ ಗಣಪತಿಗೆ ಇಷ್ಟವಾದ ಎಳ್ಳು ಮತ್ತು ಜೇನುತುಪ್ಪದ ಎಳ್ಳುಂಡೆಗಳು, ಚಕ್ಕುಲಿ, ಕೋಡುಬಳೆ, ಕಡುಬು, ಮೋದಕ ಹಾಗೂ ಕಬ್ಬು, ಬೆಲ್ಲವನ್ನು ನೈವೇದ್ಯವಾಗಿ ಅರ್ಪಿಸಲಾಯಿತು.

ಗಜಪಡೆಗೆ ಪೂಜೆ: ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಆಗಮಿಕ ಡಾ.ಶಶಿಶೇಖರ ದೀಕ್ಷಿತ್‌ ಹಾಗೂ ಪ್ರಹಾದ್‌ ರಾವ್‌ ವೇದಘೋಷ, ಮಂತ್ರಪುಷ್ಪಗಳಿಂದ ಗಜಪಡೆಗೆ ಪೂಜೆ ಸಲ್ಲಿಸಿದರು. ನಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪರ ಸಮ್ಮುಖದಲ್ಲಿ ಜಿಲ್ಲಾಡಳಿತದ ಪ್ರಮುಖರು ಪುಷ್ಪಾರ್ಚನೆ ಮಾಡಿ ಆನೆಗಳನ್ನು ಅರಮನೆಗೆ ಬರಮಾಡಿಕೊಂಡರು.

ಗೌರವ ರಕ್ಷೆ: ನಾಡಹಬ್ಬ ದಸರೆಗೆ ಆಗಮಿಸಿದ ಆನೆಗಳಿಗೆ ಪೊಲೀಸ್‌ ಇಲಾಖೆವತಿಯಿಂದ ಗೌರವ ರಕ್ಷೆ ನೀಡಲಾಯಿತು. ನಂತರ ಮಂಗಳವಾದ್ಯ, ಜಾನಪದ ಕಲಾತಂಡಗಳು, ಪೂರ್ಣಕುಂಬಗಳ ಜೊತೆ ಸ್ವಾಗತದೊಂದಿಗೆ ಪೊಲೀಸ್‌ ಇಲಾಖೆಯ ಇಂಗ್ಲಿಷ್‌ ಬ್ಯಾಂಡ್‌ನ‌ ಜೊತೆ ವೇದ ಘೋಷಗಳೊಂದಿಗೆ ಅರಮನೆ ಮುಂಭಾಗದ ಆನೆ ಬಾಗಿಲಿಗೆ ಕರೆದುಕೊಂಡು ಹೋಗಿ ಪೂರ್ವದಿಕ್ಕಿಗೆ ಆನೆಗಳನ್ನು ಸಾಲಾಗಿ ನಿಲ್ಲಿಸಿ, ವೇದಘೋಷಗಳೊಂದಿಗೆ ಪೂಜೆ, ಪುಷ್ಪಾ$ರ್ಚನೆಯೊಂದಿಗೆ ಪೊಲೀಸ್‌ ಇಲಾಖೆವತಿಯಿಂದ ಪೊಲೀಸ್‌ ಗೌರವ ರಕ್ಷೆ ನೀಡಲಾಯಿತು.

ತಾಂಬೂಲ ನೀಡಿಕೆ: ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ, ಜಿಲ್ಲಾಡಳಿತ ಅಧಿಕಾರಿಗಳು ಹಾಗೂ ಗಣ್ಯರಿಗೆ ಎಲೆ-ಅಡಿಕೆ-ತಾಂಬೂಲ-ಅಕ್ಷತೆ ನೀಡಿ ನಾಡಹಬ್ಬಕ್ಕೆ ಸಹಕಾರ ಕೋರಿದರು. ನಂತರ ದಸರಾ ಆನೆಗಳ ಮಾವುತರು-ಕಾವಾಡಿಗಳ ಕುಟುಂಬದವರಿಗೆ ಅಗತ್ಯ ಪರಿಕರಗಳನ್ನು ವಿತರಿಸಿದ ನಂತರ ಚಾಮುಂಡೇಶ್ವರಿಗೆ ಆರತಿ ಬೆಳಗಲಾಯಿತು.

ಶಾಸಕ ಎಂ.ಕೆ.ಸೋಮಶೇಖರ್‌, ವಿಧಾನಪರಿಷತ್‌ ಸದಸ್ಯ ಸಂದೇಶ್‌ ನಾಗರಾಜ್‌, ಮೇಯರ್‌ ಎಂ.ಜೆ.ರವಿಕುಮಾರ್‌, ಮುಡಾ ಅಧ್ಯಕ್ಷ ಡಿ.ಧ್ರುವಕುಮಾರ್‌, ದಸರಾ ವಿಶೇಷಾಧಿಕಾರಿಗಳಾದ ಜಿಲ್ಲಾಧಿಕಾರಿ ರಂದೀಪ್‌ ಡಿ., ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ, ಮೈಸೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಪಿ.ಬಿ.ಕರುಣಾಕರ್‌, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಇತರರು ಇದ್ದರು.

ಸಾರ್ವಜನಿಕರು, ಕಾರ್ಯಕರ್ತರು, ಸಮಾಜಸೇವಕರು, ಅಧಿಕಾರಿಗಳು ಎಲ್ಲರೂ ಸೇರಿ ಮೈಸೂರು ದಸರಾವನ್ನು ಜನರ ದಸರಾವನ್ನಾಗಿ ಆಚರಣೆ ಮಾಡೋಣ. ಈ ಬಾರಿಯ ದಸರಾ ಉದ್ಘಾಟಕರನ್ನಾಗಿ ಕವಿ ಡಾ.ಕೆ.ಎಸ್‌.ನಿಸಾರ್‌ ಅಹಮದ್‌ರನ್ನು ಆಯ್ಕೆ ಮಾಡಲಾಗಿದ್ದು, ಸೆಪ್ಟೆಂಬರ್‌ 2ನೇ ವಾರದಲ್ಲಿ ದಸರಾ ಮಹೋತ್ಸವ ಆಚರಣಾ ಸಮಿತಿ ಅವರಿಗೆ ಆಹ್ವಾನ ನೀಡಲಿದೆ.
-ಡಾ.ಎಚ್‌.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.